Homeಮುಖಪುಟ24 ದಲಿತ ಕುಟುಂಬಗಳಿಗೆ ಬಹಿಷ್ಕಾರ - ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

- Advertisement -
- Advertisement -

24 ದಲಿತ ಕುಟುಂಬಗಳ ಸಾಮಾಜಿಕ ಬಹಿಷ್ಕಾರವನ್ನು ಉತ್ತೇಜಿಸಿದ ಆರೋಪದ ಮೇಲೆ, ತೆಲಂಗಾಣದ ಸಂಗ್ಯಮ್ ಶ್ರೀರಾಂಪುರ ಗ್ರಾಮದ 18 ಗ್ರಾಮೀಣ ಅಭಿವೃದ್ಧಿ ಸಮಿತಿ (ವಿಡಿಸಿ) ಸದಸ್ಯರ ವಿರುದ್ಧ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ದಸರ ಹಬ್ಬದ ಸಂದರ್ಭದಲ್ಲಿ ಗ್ರಾಮದ ಅಂಬೇಡ್ಕರ್ ಪ್ರತಿಮೆಯ ಬಳಿ ಮೇಲ್ಜಾತಿಯವರು ‘ರಾಮ್‌ಲೀಲಾ’ ಕಾರ್ಯಕ್ರಮವನ್ನು ನಡೆಸಲು ಪ್ರಯತ್ನಿಸಿದಾಗ ದಲಿತ ಕುಟುಂಬಗಳು ಮತ್ತು ಕೆಲವು ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿತ್ತು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ಕುಟುಂಬಗಳ ಪ್ರಕಾರ, “ತಮ್ಮ ಪ್ರದೇಶದಲ್ಲಿ ಇದುವರೆಗೂ ಯಾವುದೇ ಅಭಿವೃದ್ಧಿಯಾಗಿಲ್ಲ. ಗ್ರಾಮ ಪಂಚಾಯಿತಿಯಿಂದ ಬಿಡುಗಡೆಯಾಗಿರುವ ಹಣವನ್ನು ದಲಿತರ ಏರಿಯಾಗಳಲ್ಲಿ ಚರಂಡಿಗಳನ್ನು ನಿರ್ಮಿಸಲು ಮತ್ತು ರಸ್ತೆಗಳನ್ನು ಹಾಕಲು ಬಳಸುತ್ತಿಲ್ಲ. ಮೇಲ್ಜಾತಿಯ ಗ್ರಾಮೀಣ ಅಭಿವೃದ್ಧಿ ಸಮಿತಿಯ ಸದಸ್ಯರು ದಲಿತರನ್ನೂ ಮನುಷ್ಯರಂತೆ ಪರಿಗಣಿಸಿ ಸಮಾಜದೊಟ್ಟಿಗೆ ಬದುಕಲು ಬಿಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ಪರಿಸ್ಥಿತಿಯ ಕೈಮೀರಿದ ನಂತರ ಎಚ್ಚರಗೊಂಡ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ, ವಿಡಿಸಿ ಸದಸ್ಯರು ಮತ್ತು ದಲಿತ ಕುಟುಂಬಗಳೊಂದಿಗೆ ಚರ್ಚಿಸಿದರು. ಆದರೆ, ಈ ವಿಷಯವನ್ನು ಪರಿಹರಿಸಲು ಅವರಿಗೆ ಸಲಹೆ ನೀಡಲಾಗಿದ್ದರೂ, ಗ್ರಾಮದ ಪರಿಸ್ಥಿತಿ ಕಠೋರವಾಗಿದೆ ಎಂದು ಹಲವು ಮೂಲಗಳು ತಿಳಿಸಿವೆ.

ಈ ವಿಡಿಸಿ ಸದಸ್ಯರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, 24 ಕುಟುಂಬಗಳನ್ನು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಸ್‌ಪಿ ಕೇಡರ್ ಅಧಿಕಾರಿಯೊಬ್ಬರು ತನಿಖೆ ನಡೆಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆ ಕಾರಣ ದಲಿತರು ಅಧಿಕಾರ ವಂಚಿತರಾಗಿ ನೂರಾರು ವರ್ಷಗಳಿಂದ ಹಿಂದುಳಿದ ಕಾರಣ
    ಮತ್ತು ಮೀಸಲಾತಿ ಸೌಲಭ್ಯ ಪಡೆಯಲು. ಇತರೆ ಮೇಲಿನ ಜಾತೀಯ ದಲಿತ ವರ್ಗಗಳ ಪಾಲಾಯನವಾಗುದನ್ನು ತಡೆಯಲು ಸದಾಶಿವ ಆಯೋಗ ‌‌ಜಾರಿಯಾಗಬೇಕು

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...