Homeಕರ್ನಾಟಕಸಮಾಜ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಬೇಕು: ಸಚಿವ ಕೃಷ್ಣ ಬೈರೇಗೌಡ

ಸಮಾಜ ಒಟ್ಟಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮಾಡಬೇಕು: ಸಚಿವ ಕೃಷ್ಣ ಬೈರೇಗೌಡ

ಬ್ಯಾಟರಾಯನಪುರದಲ್ಲಿ ರೂ. 4.5 ಕೋಟಿ ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ಶಾಲೆ ಉದ್ಘಾಟನೆ

- Advertisement -
- Advertisement -

ಸಮಾಜದಲ್ಲಿರುವ ಪ್ರತಿಯೊಬ್ಬರೂ ಹೆಚ್ಚಿನ ಪ್ರಯತ್ನ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮತ್ತಷ್ಟು ಉತ್ತಮ ಗುಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದ್ದು, ಖಾಸಗಿ ಶಾಲೆಯ ಮಕ್ಕಳೂ ಸರ್ಕಾರಿ ಶಾಲೆಗಳ ಕಡೆ ಮುಖಮಾಡುವಂತಹ ದಿನಗಳು ಶೀಘ್ರದಲ್ಲೇ ಬರಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಬೆಂಗಳೂರಿನಲ್ಲಿ ಅಭಿಪ್ರಾಯಪಟ್ಟರು.ಸಮಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಿಎಸ್ಆರ್ ಫಂಡ್ ಹಾಗೂ ಉದ್ಯಮಿ ಆನಂದ್ ಪೈ ಕುಟುಂಬದವರ ಸಹಯೋಗದೊಂದಿಗೆ ಬ್ಯಾಟರಾಯನಪುರದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ 17 ನೂತನ ತರಗತಿ ಕೊಠಡಿ, ಉತ್ತಮ ಗುಣಮಟ್ಟದ ಶೌಚಾಲಯ ಹಾಗೂ ಅಡುಗೆ ಕೊಣೆಯನ್ನು ಒಳಗೊಂಡ ಹೈಟೆಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

“ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಆ ನಿಟ್ಟಿನಲ್ಲಿ ಖಾಸಗಿ ಶಾಲೆಯ ಮಕ್ಕಳಿಗೆ ಸಿಗುವಂತಹ ಉತ್ತಮ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೂ ಸಿಗುವಂತಾಗಬೇಕು ಎಂಬುದೇ ಎಲ್ಲರ ಆಶಯ. ಆ ನಿಟ್ಟಿನಲ್ಲಿ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪ್ರಸ್ತುತ ನಿರ್ಮಿಸಲಾಗಿರುವ ಈ ಶಾಲೆ ಯಾರೇ ಆದರೂ ಒಮ್ಮೆ ತಿರುಗಿ ನೋಡುವಂತೆ ಅಭಿವೃದ್ಧಿಯಾಗಿರುವುದು ಸಂತಸದ ವಿಚಾರ” ಎಂದು ಅಭಿಪ್ರಾಯಪಟ್ಟರು.

ಇದನ್ನೂಓದಿ: ಉದ್ಯೋಗಕ್ಕಾಗಿ ನಗದು ಪ್ರಕರಣ: ಜಾಮೀನು ಪಡೆದ ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿ

“ಬ್ಯಾಟರಾಯನಪುರದಲ್ಲಿ ಅನೇಕ ಸರ್ಕಾರಿ ಶಾಲೆಗಳನ್ನುಈಗಾಗಲೇ ಸಿಎಸ್ಆರ್ ಫಂಡ್ ಬಳಸಿ ಉನ್ನತ ಮಟ್ಟಕ್ಕೆ ಏರಿಸಲಾಗಿದೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಕಟ್ಟಡ ಹಾಗೂ ಕಲಿಕಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಪರಿಣಾಮ ಸರ್ಕಾರಿ ಶಾಲೆಗಳಿಗೆ ಆಗಮಿಸುವ ಮಕ್ಕಳ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ” ಎಂದು ಅವರು ಹೇಳಿದರು.

“ಇದೇ ಮಾದರಿಯಲ್ಲಿ ಇದೀಗ ಮತ್ತೊಂದು ಶಾಲೆ ಲೋಕಾರ್ಪಣೆಯಾಗಿದ್ದು ನಿಜಕ್ಕೂ ಹೆಮ್ಮೆ ಪಡಬೇಕಾದ ವಿಚಾರ. ಈ ಮೂಲಕ ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ, ನಾಳಿನ ಸಮಾಜಕ್ಕೆ ಅವರನ್ನು ಆಸ್ತಿಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ” ಎಂದು ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕರಿಗೂ ಕಿವಿಮಾತು ಹೇಳಿದ ಸಚಿವ ಕೃಷ್ಣ ಬೈರೇಗೌಡ ಅವರು, “ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿದ ಕೂಡಲೇ ಶಾಲೆಗಳು ಉತ್ತಮಗೊಳ್ಳುವುದಿಲ್ಲ. ಬದಲಾಗಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿದಾಗ ಮಾತ್ರ ನಮ್ಮ ಕೆಲಸ ಸಾರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಕೆಲಸ ಮಾಡಲಿ, ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳೂ ನಾಳೆ ದೊಡ್ಡ ಉದ್ಯಮಿಗಳಾಗಿ ನಮ್ಮ ಸಮಾಜಕ್ಕೆ ಹಾಗೂ ಎಲ್ಲಾ ಶಿಕ್ಷಕರಿಗೂ ಮತ್ತಷ್ಟು ಸ್ಫೂರ್ತಿ ಪ್ರೇರಣೆಯಾಗಲಿ” ಎಂದು ಆಶಿಸಿದರು.ಸಮಾಜ

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...