Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ 'ಜಾತಿ ಗಣತಿ'ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ (ಸೆ.23) ವಿಚಾರಣೆ ನಡೆಸಿತು.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಪಿಐಎಲ್‌ಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರು. “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅರ್ಜಿದಾರರು ‘ಜಾತಿ ಸಮೀಕ್ಷೆ’ ಎಂದು ವ್ಯಾಖ್ಯಾನಿಸುವ ಮೂಲಕ ತಪ್ಪಾಗಿ ಚಿತ್ರಿಸಿದ್ದಾರೆ” ಎಂದು ಆಕ್ಷೇಪಿಸಿದರು.

ಆಗ ಪೀಠವು “ಪ್ರತಿಯೊಬ್ಬ ನಿವಾಸಿಯನ್ನು ಪತ್ತೆ ಮಾಡಿ, ಅವರ ಜಾತಿಯನ್ನು ಗುರುತಿಸಲಾಗುತ್ತಿದೆ ಎಂಬುದು ಅರ್ಜಿದಾರರ ವಾದವಾಗಿದೆ. ಹಾಗಾದರೆ, ಜಾತಿ ಸಮೀಕ್ಷೆಗೂ ಇದಕ್ಕೂ ವ್ಯತ್ಯಾಸವೇನು? ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲ ಸಿಂಘ್ವಿ, “ದತ್ತಾಂಶವಿಲ್ಲದೇ ಕಲ್ಯಾಣ ಕ್ರಮಗಳನ್ನು ರೂಪಿಸಲಾಗದು. ಇದು ನ್ಯಾಯಾಂಗ ಪರಿಶೀಲನೆಗೆ ಒಳಪಡುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಮಾತ್ರ ನ್ಯಾಯಾಲಯ ಮಧ್ಯಂತರ ತಡೆ ನೀಡಬಹುದಾಗಿದೆ” ಎಂದರು.

“ದತ್ತಾಂಶವಿಲ್ಲದೇ ತರ್ಕಬದ್ಧ ನೀತಿ ಅಥವಾ ತರ್ಕಬದ್ಧ ಸಲಹೆ ನೀಡುವುದು ಹೇಗೆ? ಅರ್ಜಿದಾರರು ಸರ್ಕಾರದ ತೀರ್ಮಾನ ಪ್ರಶ್ನಿಸಲು ಬಯಸುತ್ತಿಲ್ಲ. ಆದರೆ, ನಿರ್ಧಾರ ಕೈಗೊಳ್ಳಲು ಸಂಗ್ರಹಕ್ಕೆ ಮುಂದಾಗಿರುವ ದತ್ತಾಂಶ ಸಂಗ್ರಹ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದಾರೆ. ಸಂಪೂರ್ಣ ವಾದ ಆಲಿಸಿ ಇಡೀ ಪ್ರಕ್ರಿಯೆ ಅಸಾಂವಿಧಾನಿಕ ಎಂದು ನ್ಯಾಯಾಲಯ ಹೇಳಬಹುದು. ಹಾಗಾಗಿ, ಈ ಹಂತದಲ್ಲಿ ಮಧ್ಯಂತರ ತಡೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಅರ್ಜಿದಾರರ ವಾದವನ್ನು ಒಪ್ಪಿದರೆ ಎಲ್ಲಾ ದತ್ತಾಂಶ ಸಮೀಕ್ಷೆಯು ಗಣತಿ ಎಂದಾಗಲಿದೆ. ಸರ್ಕಾರ ಎಣಿಕೆಯ ದೃಷ್ಟಿಯಿಂದ ದತ್ತಾಂಶ ಸಂಗ್ರಹಿಸುವಾಗ ಖಾಸಗಿತನ ಉಲ್ಲಂಘನೆಯಾಗುವುದಿಲ್ಲ” ಎಂದು ಹೇಳಿದರು.

ಹಿಂದುಳಿದ ವರ್ಗಗಳ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಸಮೀಕ್ಷೆಯಲ್ಲಿ ದತ್ತಾಂಶ ನೀಡುವುದು ಸ್ವಯಂಪ್ರೇರಿತ ನಿರ್ಧಾರವಾಗಿದ್ದು, ಕಡ್ಡಾಯವಾಗಿ ಮಾಹಿತಿ ನೀಡಲೇಬೇಕಾದ ಗಣತಿ ಕಾಯ್ದೆಗೆ ವಿರುದ್ಧ” ಎಂದರು.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು “ಸಮೀಕ್ಷೆಗಾಗಿ ಸರ್ಕಾರ ಮತ್ತು ಆಯೋಗ ನೀಡಿರುವ ಹ್ಯಾಂಡ್‌ಬುಕ್‌ನಲ್ಲಿ ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸಂವಿಧಾನದ 342ನೇ ವಿಧಿಯಡಿ ನಿರ್ಬಂಧ ಇರುವುದರಿಂದ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕಾನೂನಿನ ಅಡಿ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಉದ್ದೇಶಕ್ಕಾಗಿ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ, ನಿರ್ವಹಿಸಬಹುದು. ಆದರೆ, ಇದು ಕೇಂದ್ರ ಸರ್ಕಾರದ ಪಟ್ಟಿಗಿಂತ ವಿಭಿನ್ನ” ಎಂದರು.

ಮತ್ತೊಬ್ಬರು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಜಯಕುಮಾರ್‌ ಪಾಟೀಲ್‌ ಅವರು, “ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆಯ ಸೆಕ್ಷನ್‌ 9(1)(ii)ಅಡಿ ಸಮೀಕ್ಷೆ ನಡೆಸಲು ಯಾವುದೇ ಕಾರ್ಯ ವಿಧಾನವಿಲ್ಲ. ಈ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂವಿಧಾನದ 342ನೇ ವಿಧಿ ಸೂಪರ್‌ ಸೀಡ್‌ ಮಾಡಲಾಗದು. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಒಳಗೊಳ್ಳಲಾಗುತ್ತದೆ. ಇದು ಗಣತಿಯಲ್ಲದೇ ಬೇರೇನೂ ಅಲ್ಲ. ಇದು ಸಂವಿಧಾನದ 342ಎ ವಿಧಿಗೆ ವಿರುದ್ಧವಾಗಿದ್ದು, ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದು ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಅಧಿಕಾರದ ಕುತಂತ್ರ ಕಸರತ್ತು” ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು “ಜಾತಿ ಗುರುತಿಸುವಿಕೆಯನ್ನು ಸ್ವೇಚ್ಛೆಯಿಂದ ಮಾಡಲಾಗುತ್ತಿದೆ. ಜಾತಿ ಗುರುತಿಸುವುದಕ್ಕೆ ಪೂರಕವಾಗಿ ಯಾವುದೇ ಅಧ್ಯಯನವನ್ನು ಸರ್ಕಾರ ಮಾಡಿಲ್ಲ. ಇದರಿಂದ ನಕಲಿ ಸಾಧ್ಯತೆ ಹೆಚ್ಚಾಗಲಿದ್ದು, ಜನರು ತಪ್ಪು ದತ್ತಾಂಶ ನೀಡುವ ಸಾಧ್ಯತೆ ಇದೆ. ಮಾಹಿತಿಯ ಖಾಸಗಿತನದ ಪ್ರಶ್ನೆಯೂ ಇಲ್ಲಿದ್ದು, ಡಿಜಿಟಲ್‌ ರೂಪದಲ್ಲಿ ದಾಖಲಿಸಿದ ದತ್ತಾಂಶ ಸೋರಿಕೆಯಾಗುವುದನ್ನು ಅಲ್ಲಗಳೆಯಲಾಗದು. ಸಮೀಕ್ಷೆಯಲ್ಲಿ ಎತ್ತಲಾಗಿರುವ ಪ್ರಶ್ನೆಗಳನ್ನು ನೋಡಿದರೆ ಅದು ವ್ಯಕ್ತಿಯೊಬ್ಬರ ವಿವರವಲ್ಲದೇ ಬೇರೇನೂ ಅಲ್ಲ. ಇಂಥ ಸಮೀಕ್ಷೆಗೆ ಅವಕಾಶವಿಲ್ಲ” ಎಂದರು.

ಮಾಜಿ ಶಾಸಕ ಕೆ.ಎನ್‌ ಸುಬ್ಬಾರೆಡ್ಡಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ವಿವೇಕ್‌ ರೆಡ್ಡಿ ಅವರು, “ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕ ಗುಂಪು ಸೃಷ್ಟಿಸಲಾಗಿದ್ದು, ಪ್ರಮುಖ ಜಾತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಆಯೋಗವು ತನ್ನ ವಿವೇಚನೆ ಬಳಸಿಲ್ಲ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ವಿವೇಚನೆ ಬಳಕೆ ಮಾಡಲಾಗಿಲ್ಲ. ಇದು ಗೊಂದಲಕ್ಕೆ ನಾಂದಿಯಾಗಿದೆ. ಪ್ರಮುಖ ದತ್ತಾಂಶವನ್ನು ಅಸ್ತ್ರವಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ದತ್ತಾಂಶ ಗಣಿಗಾರಿಕೆ ಮಾಡುವುದು ಸರ್ಕಾರ ಉದ್ದೇಶವಾಗಿದೆ” ಎಂದು ಆರೋಪಿಸಿದರು.

ಅಖಿಲ ಭಾರತ ಬ್ರಾಹ್ಮಣ ಮಹಾಸಭಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶ್ರೀರಂಗ ಸುಬ್ಬಣ್ಣ ಅವರು “ಸಮೀಕ್ಷೆ ನಡೆಸಲು ಅತ್ಯಂತ ಅವಸರ ಪಡಲಾಗುತ್ತಿದ್ದು, ಕೆಲವು ವಿಚಾರಗಳು ನಿರ್ಧಾರವಾಗುವವರೆಗೆ ಸರ್ಕಾರ ಮತ್ತು ಆಯೋಗಕ್ಕೆ ಸಮೀಕ್ಷೆ ಮುಂದುವರಿಸುವಂತೆ ನಿರ್ದೇಶಿಸುವುದು ಅಗತ್ಯವಾಗಿದೆ” ಎಂದರು.

ಎಲ್ಲ ಪಕ್ಷಕಾರರ ವಾದ ಆಲಿಸಿದ ಪೀಠವು ವಿಚಾರಣೆಯನ್ನು ಇಂದಿಗೆ (ಸೆ.24) ಮುಂದೂಡಿದೆ.

Courtesy: livelaw.in

ದೇಗುಲದ ಬಳಿ ಕೊಳೆಗೇರಿ ಪುನರ್ವಸತಿಗೆ ಆಕ್ಷೇಪ: ಬಹಿಷ್ಕಾರದ ಮನಃಸ್ಥಿತಿ ಎಂದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...