ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ (ಅ.6) ಆದೇಶ ಹೊರಡಿಸಿದೆ. ಶಾಲಾ ಸಮಯದಲ್ಲೂ ಶಿಕ್ಷಣ ಇಲಾಖೆ ಬದಲಾವಣೆ ಮಾಡಿದೆ.
ದಸರಾ ರಜೆ ಕಳೆದು ರಾಜ್ಯಾದ್ಯಂತ ನಾಳೆ (ಅ.8) ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಪುನರಾರಂಭಗೊಳ್ಳಲಿದ್ದು, ಸಮೀಕ್ಷೆ ಹಿನ್ನೆಲೆ ಶಿಕ್ಷಣ ಇಲಾಖೆ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ನಡೆಸುವಂತೆ ಸೂಚಿಸಲಾಗಿದೆ. ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಕ್ಟೋಬರ್ 8ರಿಂದ 24ರವರೆಗೆ ಶಾಲಾ ತರಗತಿಗಳು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ನಡೆಯಲಿದೆ. ಸಮೀಕ್ಷೆಯನ್ನು ಅಕ್ಟೋಬರ್ 24ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ರಾಜ್ಯತ ಇತರೆ ಭಾಗಗಳಲ್ಲಿ ಅಕ್ಟೋಬರ್ 8ರಿಂದ 12ರವರೆಗೆ ಶಾಲಾ ತರಗತಿಗಳು ಬೆಳಿಗ್ಗೆ 8ರಿಂದ ಅಪರಾಹ್ನ 1 ಗಂಟೆಯವರೆಗೆ ನಡೆಯಲಿದೆ. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ಅಕ್ಟೋಬರ್ 12ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಸೆಪ್ಟೆಂಬರ್ 22ರಂದು ಆರಂಭಗೊಂಡ ಸಮೀಕ್ಷೆಯನ್ನು ಅಕ್ಟೋಬರ್ 7ರೊಳಗೆ ಮುಗಿಸಲು ಮುಂಚಿತವಾಗಿ ಸೂಚಿಸಲಾಗಿತ್ತು. ಆದರೆ, ಹಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿರೀಕ್ಷಿತ ಮಟ್ಟದಲ್ಲಿ ಮುಗಿಯದ ಕಾರಣ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ


