Homeಮುಖಪುಟಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

- Advertisement -
- Advertisement -

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. ಕೇವಲ ಒಗ್ಗಟ್ಟಿನ ಮಾತುಗಳನ್ನಾಡಿದರೆ ಸಾಲದು, ಅದಕ್ಕೆ ತಕ್ಕಂತೆ ನಿರಂತರ ಹಾಗೂ ಪರಿಣಾಮಕಾರಿ ಹೆಜ್ಜೆಗಳನ್ನಿಡಬೇಕು ಎಂದು ಪಕ್ಷವು ಆಗ್ರಹಿಸಿದೆ.

​ಎಐಸಿಸಿ ವಿದೇಶಾಂಗ ವ್ಯವಹಾರಗಳ ವಿಭಾಗದ ಅಧ್ಯಕ್ಷ ಸಲ್ಮಾನ್ ಖುರ್ಷಿದ್ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, “ಬ್ರಿಕ್ಸ್ ಸದಸ್ಯ ರಾಷ್ಟ್ರವಾಗಿರುವ ಇರಾನ್ ಮೇಲಿನ ದಾಳಿಗಳನ್ನು ಭಾರತ ಬೆಂಬಲಿಸುತ್ತಿದೆ ಎಂಬ ಗ್ರಹಿಕೆಯನ್ನು ಹೋಗಲಾಡಿಸಬೇಕು. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ರಾಜತಾಂತ್ರಿಕ ಪಾತ್ರ ಅತ್ಯಂತ ಸೀಮಿತವಾಗಿದೆ ಹಾಗೂ ಬ್ರಿಕ್ಸ್ ಸದಸ್ಯರ ನಡುವೆ ಒಮ್ಮತ ಮೂಡಿಸುವಲ್ಲಿ ಅನಾಸಕ್ತಿ ತೋರಿದೆ. ಅಲ್ಲದೆ, ಬ್ರಿಕ್ಸ್‌ನ ಸ್ಥಾಪಕ ಸದಸ್ಯ ರಾಷ್ಟ್ರ ದಕ್ಷಿಣ ಆಫ್ರಿಕಾ ರಾಜತಾಂತ್ರಿಕ ಒತ್ತಡಗಳನ್ನು ಎದುರಿಸಿದಾಗ ಭಾರತ ಸೂಕ್ತ ಬೆಂಬಲ ನೀಡಿರಲಿಲ್ಲ. ಈ ಎಲ್ಲಾ ಗೊಂದಲಗಳನ್ನು ನಿವಾರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ. ಬಿಕ್ಕಟ್ಟಿನ ಸಮಯದಲ್ಲೂ ಭಾರತವು ವಿಶ್ವಾಸಾರ್ಹ ಪಾಲುದಾರನಾಗಿ ನಿಲ್ಲುತ್ತದೆ ಎಂಬುದನ್ನು ಸಾಬೀತುಪಡಿಸುವ ಮೂಲಕ ವಿಶ್ವಾಸವನ್ನು ಮರುನಿರ್ಮಾಣ ಮಾಡಬೇಕು ಎಂದು ಅವರು ಹೇಳಿದ್ದಾರೆ.

​ರಾಷ್ಟ್ರೀಯ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ಕಾಪಾಡುವ ಜೊತೆಗೆ, ಬ್ರಿಕ್ಸ್ ಒಕ್ಕೂಟಕ್ಕೆ ಭಾರತವು ನೈತಿಕ ನಾಯಕತ್ವ ಹಾಗೂ ಕಾರ್ಯತಂತ್ರದ ಸ್ಪಷ್ಟತೆಯನ್ನು ಒದಗಿಸಬೇಕು ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ಜಾಗತಿಕ ಸರಕು ವ್ಯಾಪಾರದಲ್ಲಿ ಶೇ.19.6ರಷ್ಟು ಪಾಲು ಹೊಂದಿರುವ ಬ್ರಿಕ್ಸ್ ರಾಷ್ಟ್ರಗಳೊಂದಿಗಿನ ಭಾರತದ ವ್ಯಾಪಾರ ಸಂಬಂಧವು ಅತ್ಯಂತ ‘ಅಸಮತೋಲನ’ದಿಂದ ಕೂಡಿದೆ ಎಂದು ಕಳವಳ ವ್ಯಕ್ತಪಡಿಸಿದೆ. ಬ್ರಿಕ್ಸ್ ಪೇ ಸಿಸ್ಟಮ್ (BRICS Pay System) ಕುರಿತ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿರುವ ಪಕ್ಷವು, ಭಾರತೀಯ ಸರಕು ಮತ್ತು ಸೇವೆಗಳಿಗೆ ಬ್ರಿಕ್ಸ್ ರಾಷ್ಟ್ರಗಳಲ್ಲಿ ಹೆಚ್ಚಿನ ಮಾರುಕಟ್ಟೆ ಅವಕಾಶ ಕಲ್ಪಿಸಬೇಕು. ಸುಂಕ ರಹಿತ ಹಾಗೂ ಇತರ ಮಾರುಕಟ್ಟೆ ಅಡೆತಡೆಗಳನ್ನು ನಿವಾರಿಸಿ, ಭಾರತೀಯ ಉದ್ಯಮಗಳಿಗೆ ನ್ಯಾಯಸಮ್ಮತ ಅವಕಾಶಗಳನ್ನು ಒದಗಿಸಿಕೊಡಲು ಕೇಂದ್ರ ಸರ್ಕಾರ ತನ್ನ ಅಧ್ಯಕ್ಷೀಯ ಸ್ಥಾನವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.

​ಪೂರೈಕೆ ಸರಪಳಿಯ (Supply chains) ಭದ್ರತೆ ಮತ್ತು ಎಲ್ಲರನ್ನೊಳಗೊಂಡ ಸಂಪರ್ಕ ಜಾಲವನ್ನು ಸಾಧಿಸಲು ಒಮ್ಮತ ಮೂಡಿಸುವುದು ಅತ್ಯಗತ್ಯವಾಗಿದೆ. ಜೊತೆಗೆ, 2014ರಲ್ಲಿ ಸ್ಥಾಪಿಸಲಾದ ‘ಕಂಟಿಂಜೆಂಟ್ ರಿಸರ್ವ್ ಅರೇಂಜ್‌ಮೆಂಟ್‌’ (CRA) ಅನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಲು ಪ್ರಯತ್ನಿಸಬೇಕು. ಇದಕ್ಕಾಗಿ ಭಾರತವು ಈಗಾಗಲೇ 18 ಶತಕೋಟಿ ಡಾಲರ್ ಆರ್ಥಿಕ ನೆರವು ನೀಡುವುದಾಗಿ ವಾಗ್ದಾನ ಮಾಡಿದೆ ಎಂಬುದನ್ನು ಕಾಂಗ್ರೆಸ್ ನೆನಪಿಸಿದೆ.

​ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಉಲ್ಲೇಖಿಸಿರುವ ಪಕ್ಷವು, ಭಾರತವು ತನ್ನ ಕಾರ್ಯತಂತ್ರದ ಏಳಿಗೆಯೊಂದಿಗೆ ಸಮಾನತೆ, ಶಾಂತಿಯುತ ಸಹಬಾಳ್ವೆ ಮತ್ತು ಮಾನವ ಘನತೆಯನ್ನು ಎತ್ತಿಹಿಡಿಯಬೇಕು ಎಂದಿದೆ. ಹಿಂದೊಮ್ಮೆ ಕೊರಿಯಾ ಯುದ್ಧದ ಸಂದರ್ಭದಲ್ಲಿ ಭಾರತ ವಹಿಸಿದ ಮಧ್ಯಸ್ಥಿಕೆ, ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧದ ಹೋರಾಟ ಹಾಗೂ ಜಾಗತಿಕ ಸಂಸ್ಥೆಗಳ ಸುಧಾರಣೆಗೆ ಭಾರತ ನೀಡಿದ್ದ ಕೊಡುಗೆಗಳನ್ನು ಉದಾಹರಣೆಯಾಗಿ ನೀಡಿದೆ. ಬ್ರಿಕ್ಸ್ ಶೃಂಗಸಭೆಯನ್ನು ಗುಂಪುಗಾರಿಕೆಯ ರಾಜಕೀಯಕ್ಕೆ (Bloc politics) ಬಳಸಿಕೊಳ್ಳದೆ, ಸದಸ್ಯ ರಾಷ್ಟ್ರಗಳ ನಡುವೆ ಒಗ್ಗಟ್ಟು ಮೂಡಿಸಲು ವೇದಿಕೆಯನ್ನಾಗಿಸಬೇಕು. ‘ಗ್ಲೋಬಲ್ ಸೌತ್’ ಮತ್ತು ‘ಗ್ಲೋಬಲ್ ನಾರ್ತ್’ ನಡುವೆ ವಿಶ್ವಾಸಾರ್ಹ ಸೇತುವೆಯಾಗಿ ಭಾರತ ಕಾರ್ಯನಿರ್ವಹಿಸಬೇಕು ಎಂದು ಹೇಳಿದೆ.

​ಇದರೊಂದಿಗೆ, 2021ರಲ್ಲಿ ಬ್ರಿಕ್ಸ್ ಅಧ್ಯಕ್ಷತೆ ವಹಿಸಿದ್ದಾಗ ನೀಡಿದ್ದ ಭರವಸೆಗಳನ್ನು ಈಡೇರಿಸುವತ್ತ ಗಮನಹರಿಸಬೇಕು ಮತ್ತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಕಾಯಂ ಸದಸ್ಯತ್ವ ಪಡೆಯುವ ಭಾರತದ ಹಕ್ಕಿಗೆ ಬ್ರಿಕ್ಸ್ ಸದಸ್ಯ ರಾಷ್ಟ್ರಗಳಿಂದ ದೃಢ ಬೆಂಬಲವನ್ನು ಗಿಟ್ಟಿಸಿಕೊಳ್ಳುವಂತೆಯೂ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

Courtesy : eedina.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...