Homeಕರ್ನಾಟಕಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

ಬಗೆಹರಿದ ಸಂಪುಟ ವಿಸ್ತರಣೆ ಕಸರತ್ತು; ನೂತನ ಸಚಿವರ ಪ್ರಮಾಣವಚನ ಇಂದು

- Advertisement -
- Advertisement -

ರಾಜ್ಯ ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ ಕಗ್ಗಂಟು ಬಗೆಹರಿದಿದ್ದು ಇಂದು (ಶನಿವಾರ) 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಬಿಡಿಸಿದೆ.

ಉಭಯ ಸದನಗಳ ಸದಸ್ಯರೂ ಅಲ್ಲದ ಪಕ್ಷದ ಹಿರಿಯ ಮುಖಂಡ ಎನ್‌.ಎಸ್‌.ಬೋಸರಾಜು ಅವರಿಗೆ ಸಚಿವರಾಗುವ ಅವಕಾಶವನ್ನು ನೀಡಲಾಗಿದೆ. ಹಲವು ಹಿರಿಯ ಶಾಸಕರಿಗೆ ಸಚಿವರಾಗುವ ಅವಕಾಶ ದೊರೆತ್ತಿಲ್ಲ.

ನೂತನ ಸಚಿವರ ಪ್ರಮಾಣವಚನ ಸಮಾರಂಭ ಶನಿವಾರ (ಇಂದು) ಬೆಳಿಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ಕಳುಹಿಸಿದೆ.

ಸಚಿವ ಸಂಪುಟದಲ್ಲಿ ಒಟ್ಟು 34 ಮಂದಿಯ ಸೇರ್ಪಡೆಗೆ ಅವಕಾಶ ಇದೆ. 24 ಮಂದಿಯ ಸೇರ್ಪಡೆಯಿಂದ ಸಂಪುಟ ಭರ್ತಿಯಾದಂತೆ ಆಗಿದೆ.

ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳನ್ನು ಒಳಗೊಂಡು ಎಂಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಕ್ಕಲಿಗರಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿಗೆ ಅವಕಾಶ ದೊರೆತಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಟ್ಟು 9 ಮಂದಿಗೆ ಸಚಿವ ಸ್ಥಾನ ಲಭಿಸಿದೆ. ಪರಿಶಿಷ್ಟ ಜಾತಿಯ ಕೆ.ಎಚ್‌. ಮುನಿಯಪ್ಪ, ಜಿ.ಪರಮೇಶ್ವರ, ಎಚ್‌.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಪರಿಶಿಷ್ಟ ಪಂಗಡದ ನಾಗೇಂದ್ರ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

‘ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯವಾದ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಂಕಾಳ ಸುಬ್ಬ ವೈದ್ಯ, ಮರಾಠ ಸಮಾಜದ ಸಂತೋಷ್ ಲಾಡ್ ಸಂಪುಟ ಸೇರ್ಪಡೆಯಾಗಿದ್ದಾರೆ. ಕುರುಬ ಸಮುದಾಯದಿಂದ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ.

ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಬಸವರಾಜ ರಾಯರಡ್ಡಿ, ಟಿ.ಬಿ.ಜಯಚಂದ್ರ, ತನ್ವೀರ್ ಸೇಠ್‌, ಎನ್‌.ಎ.ಹ್ಯಾರಿಸ್‌, ಸಲೀಂ ಅಹಮದ್‌ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.  ದಿನೇಶ್‌ ಗುಂಡೂರಾವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಆರಂಭದಲ್ಲಿ ಒಲವು ವ್ಯಕ್ತವಾಗಿರಲಿಲ್ಲ. ಆದರೆ, ಕೊನೆಯ ಕ್ಷಣದಲ್ಲಿ ಬ್ರಾಹ್ಮಣ ಕೋಟಾದಡಿ ಅವರಿಗೆ ಅವಕಾಶ ದೊರೆತಿದೆ.

ರಾಜೀನಾಮೆಗೆ ಮುಂದಾದ ಹರಿಪ್ರಸಾದ್?

ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರವಾಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ವರದಿಯಾಗಿದೆ.

ಶನಿವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವಕಾಶ ಕೈತಪ್ಪಲು ಸಿದ್ದರಾಮಯ್ಯನವರು ಕಾರಣವೆಂದು ಹರಿಪ್ರಸಾದ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪಟ್ಟಿ

ಎಚ್.ಕೆ.ಪಾಟೀಲ- ನಾಮಧಾರಿ ರೆಡ್ಡಿ

ಕೃಷ್ಣ ಬೈರೇಗೌಡ- ಒಕ್ಕಲಿಗ

ಎನ್.ಚಲುವರಾಯಸ್ವಾಮಿ- ಒಕ್ಕಲಿಗ

ಕೆ.ವೆಂಕಟೇಶ್‌- ಒಕ್ಕಲಿಗ

ಡಾ.ಎಚ್‌.ಸಿ.ಮಹದೇವಪ್ಪ- ಎಸ್‌ಸಿ (ಬಲಗೈ)

ಈಶ್ವರ ಖಂಡ್ರೆ- ಬಣಜಿಗ ಲಿಂಗಾಯತ

ಕೆ.ಎನ್‌.ರಾಜಣ್ಣ- ವಾಲ್ಮೀಕಿ (ಎಸ್‌ಟಿ)

ದಿನೇಶ್‌ ಗುಂಡೂರಾವ್‌- ಬ್ರಾಹ್ಮಣ

ಶರಣಬಸಪ್ಪ ದರ್ಶನಾಪುರ- ರೆಡ್ಡಿ ಲಿಂಗಾಯತ

ಶಿವಾನಂದ ಪಾಟೀಲ- ಪಂಚಮಸಾಲಿ

ಆರ್.ಬಿ.ತಿಮ್ಮಾಪುರ- ಎಸ್‌ಸಿ (ಎಡಗೈ)

ಎಸ್‌.ಎಸ್‌.ಮಲ್ಲಿಕಾರ್ಜುನ- ಸಾದರ ಲಿಂಗಾಯತ

ಶಿವರಾಜ ತಂಗಡಗಿ- ಎಸ್‌ಸಿ (ಭೋವಿ)

ಶರಣ ಪ್ರಕಾಶ ಪಾಟೀಲ- ಬಣಜಿಗ ಲಿಂಗಾಯತ

ಮಂಕಾಳ ಸುಬ್ಬ ವೈದ್ಯ- ಮೊಗವೀರ

ಲಕ್ಷ್ಮಿ ಹೆಬ್ಬಾಳಕರ- ಪಂಚಮಸಾಲಿ

ರಹೀಂ ಖಾನ್‌- ಮುಸ್ಲಿಂ

ಡಿ.ಸುಧಾಕರ್‌- ಜೈನ

ಸಂತೋಷ್‌ ಎಸ್‌.ಲಾಡ್‌- ಮರಾಠ

ಎನ್‌.ಎಸ್.ಬೋಸರಾಜು- ರಾಜು ಕ್ಷತ್ರೀಯ

ಬೈರತಿ ಸುರೇಶ್‌- ಕುರುಬ

ಮಧು ಬಂಗಾರಪ್ಪ- ಈಡಿಗ

ಡಾ.ಎಂ.ಸಿ.ಸುಧಾಕರ್‌- ಒಕ್ಕಲಿಗ

ಬಿ.ನಾಗೇಂದ್ರ- ವಾಲ್ಮೀಕಿ (ಎಸ್‌ಟಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...