Homeಕರ್ನಾಟಕಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

- Advertisement -
- Advertisement -

ಕಾಂಗ್ರೆಸ್‌ನ ದಿಗ್ಗಜ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ವಿರುದ್ಧ ಇಬ್ಬರು ಹಿರಿಯ ಮಂತ್ರಿಗಳನ್ನು ನಿಯೋಜನೆ ಮಾಡುವ ಮೂಲಕ ಬಿಜೆಪಿಯು ‘ಹೊಂದಾಣಿಕೆ’ ರಾಜಕಾರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದಂತೆ ಕಾಣುತ್ತದೆ.

ಐದು ಬಾರಿ ಶಾಸಕರಾಗಿರುವ ವಿ ಸೋಮಣ್ಣ ಅವರು ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿದ್ದಾರೆ. ಕನಕಪುರದಲ್ಲಿ ಶಿವಕುಮಾರ್ ವಿರುದ್ಧ ಆರು ಬಾರಿ ಶಾಸಕರಾಗಿರುವ ಆರ್ ಅಶೋಕ್ ಕಣಕ್ಕಿಳಿಯಲಿದ್ದಾರೆ.

ಕೈ ನಾಯಕರ ವಿರುದ್ಧ ಗೆಲುವು ಸಾಧಿಸಲು ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲಾಗಿದೆ ಎನ್ನುವ ಭ್ರಮೆಯಲ್ಲಿ ಬಿಜಿಪಿ ಇಲ್ಲ. ಕೇವಲ ಮತ ಹಂಚಕೆ ದೃಷ್ಟಿಯಿಂದ ಈ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸದಂತೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಏಕೆಂದರೆ ಸೋಮಣ್ಣ ಮತ್ತು ಅಶೋಕ್ ಅವರು ಕ್ರಮವಾಗಿ ಚಾಮರಾಜನಗರ ಮತ್ತು ಪದ್ಮನಾಭನಗರದಿಂದಲೂ ಸ್ಪರ್ಧಿಸಲಿದ್ದಾರೆ.

ಪ್ರತಿಬಾರಿ ವರುಣಾ, ಕನಕಪುರ ಸೇರಿದಂತೆ ಅನೇಕ ಪ್ರಬಲ ನಾಯಕರ ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಥವಾ ‘ಡಮ್ಮಿ’ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿತ್ತು, ಆದರೆ ಈ ಬಾರಿ ಹೊಂದಾಣಿಕೆ ರಾಜಕಾರಣವನ್ನು ಕೇಸರಿ ಪಕ್ಷ ತೊಡೆದುಹಾಕಲು ಬಯಸುತ್ತದೆ.

ಸಮಬಲದ ಹೋರಾಟ ರೂಪಿಸುವ ಹೊಣೆ ಈಗ ಸೋಮಣ್ಣ ಮತ್ತು ಅಶೋಕ್ ಅವರ ಮೇಲಿದೆ. ಅವರು ಬಿಜೆಪಿಯ ನಿರೀಕ್ಷೆಗಳನ್ನು ಪೂರೈಸಲು, ಕೆಲವು ಸ್ಟ್ಯಾಟರ್ಜಿ ಮಾಡಬೇಕಾದ ಅಗತ್ಯವಿದೆ.

ಇದನ್ನೂ ಓದಿ: ಬಿಜೆಪಿ ಪಟ್ಟಿ: ವಿ.ಸೋಮಣ್ಣ, ಆರ್.ಅಶೋಕ್ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ

ಟಿಕೆಟ್ ಘೋ‍ಷಣೆಗೂ ಮುನ್ನ ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ವಿಚಾರಕ್ಕೆ ತಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದರು. ಏಕೆಂದರೆ ರಾಜಕೀಯದಲ್ಲಿ ಸಿದ್ದರಾಮಯ್ಯ ಹಾಗೂ ಸೋಮಣ್ಣ ನಡುವೆ ಒಳ್ಳೆಯ ಸ್ನೇಹ ಸಂಬಂಧ ಇದೆ. ಹಾಗಾಗಿ ಅವರು ಸ್ನೇಹಿತನ ವಿರುದ್ಧ ಹೋರಾಡಲು ನಿರಾಕರಿಸಿದ್ದರು.

ಟಿಕೆಟ್ ಘೋಷಣೆ ಬಳಿಕ ಮಾತನಾಡಿದ ವಿ. ಸೋಮಣ್ಣ, ”ನಾನು ಇದನ್ನು ನಿರೀಕ್ಷಿಸಿರಲಿಲ್ಲ, ಆದರೆ ಪಕ್ಷವು ನನ್ನನ್ನು ನಂಬಿದೆ. ವರುಣಾದಿಂದ ನನ್ನ ಪ್ರಚಾರ ಆರಂಭಿಸುತ್ತೇನೆ. ಸೋಲು ಮತ್ತು ಗೆಲುವು ರಾಜಕೀಯದಲ್ಲಿ ಒಂದು ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ವರುಣಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತರು ಇರುವುದು ಸೋಮಣ್ಣನವರ ಅನುಕೂಲ. ”ವರುಣ ನನಗೆ ಹೊಸದಲ್ಲ. ನನಗೆ ಅಲ್ಲಿ ವರ್ಷಗಳ ಸಂಪರ್ಕವಿದೆ, ಆದರೆ ಅದರ ಶಾಸಕರಾಗಿದ್ದ ಸಿದ್ದರಾಮಯ್ಯನಷ್ಟು ಜನಪ್ರಿಯ ವ್ಯಕ್ತಿ ನಾನಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

2008 ಮತ್ತು 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾದಲ್ಲಿ ಶೇ.50ಕ್ಕೂ ಹೆಚ್ಚು ಮತ ಗಳಿಸಿದ್ದರು. 2013ರಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಶೇ.55ರಷ್ಟು ಮತ ಪಡೆದಿದ್ದರು. 2008 ರಲ್ಲಿ ಎಲ್ ರೇವಣ್ಣಸಿದ್ದಯ್ಯ ಅವರು ವರುಣಾದಲ್ಲಿ ಬಿಜೆಪಿ ಪಡೆದ ಅತಿ ಹೆಚ್ಚು ಮತ 37%.

ಇದು ಸೋಮಣ್ಣನನ್ನು ಬಲಿ ಕೊಡುವ ಪ್ಲ್ಯಾನ್

ವಿ ಸೋಮಣ್ಣ ಅವರು ಕೆಲವು ದಿನಗಳಿಂದ ಬಿ ಎಸ್ ಯಡಿಯುರಪ್ಪನವರ ಜೊತೆ ಮುಸುಕಿನ ಗುದ್ದಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಯಡಿಯೂರಪ್ಪನವರು ಸೋಮಣ್ಣ ಅವರನ್ನು ರಾಜಕೀಯವಾಗಿ ಬಲಿ ಕೊಡಲು ಪ್ರಬಲ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಕಾದಾಡಲು ಟಿಕೆಟ್ ನೀಡಲಾಗಿದೆ. ಜೊತೆಗೆ ಅವರಿಗೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಕೊಡಬಹುದಿತ್ತು ಆದರೆ ಅದನ್ನು ಕೊಡದೇ ಚಾಮರಾಜನಗರ ಟಿಕೆಟ್ ನೀಡಲಾಗಿದೆ. ಅಲ್ಲಿಯೂ ಕೂಡ ಅವರಿಗೆ ಗೆಲುವು ಸುಲಭವಾಗಿಲ್ಲ.

ಇನ್ನು ಒಕ್ಕಲಿಗ ಭದ್ರಕೋಟೆಯಾದ ಕನಕಪುರ ಮೂರು ಬಾರಿ ಪ್ರತಿನಿಧಿಸಿರುವ ಶಿವಕುಮಾರ್ ಅವರ ಕ್ಷೇತ್ರವಾಗಿದೆ. ಶಿವಕುಮಾರ್ ಈ ಹಿಂದೆ ಸಾತನೂರು ಕ್ಷೇತ್ರವನ್ನು ನಾಲ್ಕು ಬಾರಿ ನಿಭಾಯಿಸಿದ್ದರು. 2008 ರಿಂದ ಕನಕಪುರದಲ್ಲಿ ಅವರ ಮತಗಳಿಕೆ ಏರಿಕೆಯಾಗಿದೆ – 2008 ರಲ್ಲಿ 48% ರಿಂದ 2018 ರಲ್ಲಿ 68% ಕ್ಕೆ. ಬಿಜೆಪಿ 3% ದಾಟಿಲ್ಲ.

ಇಂತಹ ಕ್ಷೇತ್ರದಲ್ಲಿ ಇದೀಗ ಬಿಜೆಪಿಯ ಒಕ್ಕಲಿಗ ಮುಖದ ಅಶೋಕ್‌ರನ್ನ ಸ್ಪರ್ಧೆಗಿಳಿಸಿದ್ದಾರೆ. ಆರ್ ಅಶೋಕ್ ಅವರು ಆಗಾಗ್ಗೆ “ಹೊಂದಾಣಿಕೆ” ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಕೆಲವರ ವಿರುದ್ಧ ಆರೋಪಿಸಿದ್ದರು. ಈಗ ಅವರನ್ನೇ ಪ್ರಬಲ ಒಕ್ಕಲಿಗ ಅಭ್ಯರ್ಥಿ ವಿರುದ್ಧ ಕಣಕ್ಕೆ ಇಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಅಶೋಕ್, ”ಶಿವಕುಮಾರ್ ವಿರುದ್ಧ ಅವರನ್ನು ಕಣಕ್ಕಿಳಿಸುವ ನಿರ್ಧಾರ ಆಶ್ಚರ್ಯಕರವಾಗಿದೆ. ನಾನು ಶಿಸ್ತಿನ ಸಿಪಾಯಿಯಾಗಿದ್ದೇನೆ ಮತ್ತು ಪಕ್ಷವು ನನ್ನಿಂದ ಏನು ಕೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ” ಎಂದು ಅವರು ಹೇಳಿದರು.

ಹೋರಾಟಕ್ಕೂ ಮುನ್ನವೇ ಸೋಲೊಪ್ಪಿದ್ರಾ ಅಶೋಕ್?

ಶಿವಕುಮಾರ್ ವಿರುದ್ಧ ಗೆಲ್ಲುವ ಸಾಧ್ಯತೆಗಳ ಕುರಿತು ಅಶೋಕ್ ಅವರು, ”ಇಂದಿರಾ ಗಾಂಧಿ, ಬಿ ಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಹೆಚ್ ಡಿ ದೇವೇಗೌಡರಂತಹವರು ರಾಜ್ಯದ ಚುನಾವಣೆಯಲ್ಲಿ ಸೋತಿದ್ದಾರೆ. ”ನಾನು ಹೋರಾಡುತ್ತೇನೆ. ಉಳಿದದ್ದು ವಿಧಿ”ಯಾಟ ಎಂದು ಸೋಲಿನ ಬಗ್ಗೆ ಈಗಲೇ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...