Homeಮುಖಪುಟಇನ್ನು ಕೆಲವು ರಾಜಕೀಯ ಪಕ್ಷಗಳು INDIA ಒಕ್ಕೂಟವನ್ನು ಸೇರಲಿವೆ: ನಿತೀಶ್ ಕುಮಾರ್

ಇನ್ನು ಕೆಲವು ರಾಜಕೀಯ ಪಕ್ಷಗಳು INDIA ಒಕ್ಕೂಟವನ್ನು ಸೇರಲಿವೆ: ನಿತೀಶ್ ಕುಮಾರ್

- Advertisement -
- Advertisement -

ವಿರೋಧ ಪಕ್ಷಗಳ ಒಕ್ಕೂಟ INDIAದ ಮುಂದಿನ ಸಭೆ ಮುಂಬೈನಲ್ಲಿ ನಡೆಯಲಿದ್ದು, ಈ ವೇಳೆ ಇನ್ನೂ ಕೆಲವು ರಾಜಕೀಯ ಪಕ್ಷಗಳು ಒಕ್ಕೂಟವನ್ನು ಸೇರುವ ಸಾಧ್ಯತೆಯಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಹೇಳಿದ್ದಾರೆ.

ಬಿಜೆಪಿಯನ್ನು ವಿರೋಧಿಸುವ ವಿವಿಧ ಪಕ್ಷಗಳನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು, ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಬಹಿರಂಗಪಡಿಸುವುದಿಲ್ಲ ಆದರೆ ಸೀಟು ಹಂಚಿಕೆಯಂತಹ ಚುನಾವಣಾ ಸಂಬಂಧಿತ ವಿಧಾನಗಳನ್ನು ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್ ಅವರು, ”ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟದ ಕಾರ್ಯತಂತ್ರಗಳ ಬಗ್ಗೆ ನಾವು ಚರ್ಚಿಸುತ್ತೇವೆ. ಸೀಟು ಹಂಚಿಕೆಯಂತಹ ವಿಷಯಗಳನ್ನು ಚರ್ಚಿಸಲಾಗುವುದು ಮತ್ತು ಇತರ ಕಾರ್ಯಸೂಚಿಗಳನ್ನು ಅಂತಿಮಗೊಳಿಸಲಾಗುವುದು. ಇನ್ನೂ ಕೆಲವು ರಾಜಕೀಯ ಪಕ್ಷಗಳು ನಮ್ಮ ಒಕ್ಕೂಟವನ್ನು ಸೇರುತ್ತವೆ” ಎಂದು ಅವರು ಹೇಳಿದ್ದಾರೆ.

”2024ರ ಲೋಕಸಭೆ ಚುನಾವಣೆಗೂ ಮುನ್ನ ಇನ್ನೂ ಹೆಚ್ಚಿನ ಪಕ್ಷಗಳನ್ನು ಒಗ್ಗೂಡಿಸಲು ನಾನು ಇಚ್ಛಿಸುತ್ತೇನೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ. ನನಗೆ ಯಾವುದೇ ವೈಯಕ್ತಿಕ ಆಸೆಗಳು ಇಲ್ಲ” ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು 2024ರ ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಎದುರಿಸಲು ರಚಿಸಲಾದ 26-ಪಕ್ಷಗಳ ಒಕ್ಕೂಟವು ಈಗಾಗಲೇ ಒಂದು ತಿಂಗಳೊಳಗೆ ಎರಡು ಬಾರಿ ಸಭೆ ನಡೆಸಿದೆ. ಮೊದಲು ಸಭೆ ಜೂನ್ 23 ರಂದು ಪಾಟ್ನಾದಲ್ಲಿ ಮತ್ತು ನಂತರ ಜುಲೈ 17-18ರಂದು ಬೆಂಗಳೂರಿನಲ್ಲಿ ನಡೆಸಲಾಯಿತು. ಮೂರನೇ ಸಭೆಯನ್ನು ಮುಂಬೈನಲ್ಲಿ ನಡೆಸಲು ಸಿದ್ಧವಾಗಿದೆ.

ಇದನ್ನೂ ಓದಿ: ಬಿಜೆಪಿಯು ಮಧ್ಯಪ್ರದೇಶವನ್ನು ‘ದಲಿತ ದೌರ್ಜನ್ಯಗಳ ಪ್ರಯೋಗಶಾಲೆ’ಯನ್ನಾಗಿಸಿದೆ: ಮಲ್ಲಿಕಾರ್ಜುನ್ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...