Homeಮುಖಪುಟಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

ಸಚಿನ್ ಪೈಲಟ್ ಜೊತೆಗಿದ್ದ ಶಾಸಕರು ಮರಳಿದ್ದಾರೆ: ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ

- Advertisement -
- Advertisement -

ಸಚಿನ್ ಪೈಲಟ್‌ ಜೊತೆಗೆ ದೆಹಲಿಗೆ ಹೋಗಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕರೊಂದಿಗೆ ನಾವು ಮಾತುಕತೆ ನಡೆಸಿದ್ದೇವೆ ಮತ್ತು ಅವರಲ್ಲಿ ಹಲವರು ಜೈಪುರಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ, ಆದರೆ ಅದು ಸಾಧ್ಯವಾಗುವುದಿಲ್ಲ. ನಮ್ಮ ಸರ್ಕಾರ ಸುಭದ್ರ ವಾಗಿದೆ ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ತಿಳಿಸಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯ ಶಾಸಕರ ಕುದುರೆ ವ್ಯಾಪಾರ ಮಾಡುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ತಮ್ಮ ನಿಷ್ಠೆಯನ್ನು ಬದಲಿಸಲು ಕಾಂಗ್ರೆಸ್ ಶಾಸಕರಿಗೆ ಎಷ್ಟೇ ಪ್ರಲೋಭನೆ ನೀಡಿದ್ದರೂ, ನಮ್ಮ ಶಾಸಕರು, ಕಾಂಗ್ರೆಸ್ ಬೆಂಬಲಿತ ಸ್ವತಂತ್ರರು ಎಲ್ಲರೂ ಒಂದಾಗುತ್ತಾರೆ ಎಂದು ಅವಿನಾಶ್ ಪಾಂಡೆ ಟ್ವೀಟ್‌ ಮಾಡಿದ್ದಾರೆ.

ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ, ಎಲ್ಲಾ ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಗೆಹ್ಲೋಟ್ ಸರ್ಕಾರ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತದೆ ಎಂದು ಪಾಂಡೆ ತಿಳಿಸಿದ್ದಾರೆ.

ಹಲವಾರು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಜೊತೆಗಿರುವುದಾಗಿ ತಿಳಿಸಿದ್ದೇವೆ.  “ರಾಜಸ್ಥಾನದಲ್ಲಿ, ಗೆಹ್ಲೋಟ್ ಎಂದರೆ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಎಂದರೆ ಗೆಹ್ಲೋಟ್. ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಮತ್ತು ಅದು ತನ್ನ ಅವಧಿಯನ್ನು ಪೂರ್ಣಗೊಳಿಸುತ್ತದೆ” ಎಂದು ಕಾಂಗ್ರೆಸ್ ಶಾಸಕ ರಾಮ್‌ಲಾಲ್ ಜಾತ್ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರಿಂದ ಜನರು ಪಾಠಗಳನ್ನು ಕಲಿಯಬೇಕು. ಅವರು ಪಕ್ಷ ಬಿಟ್ಟ ನಂತರ ತಿಂಗಳುಗಟ್ಟಲೆ ಸುಮ್ಮನೆ ಕುಳಿತಿದ್ದರು. ರಾಜ್ಯಸಭೆಯ ಚುನಾವಣೆ ಸಮೀಪಿಸುತ್ತಿದ್ದಾಗ ಅವರಲ್ಲಿ ಕೆಲವರನ್ನು ಮಂತ್ರಿಗಳನ್ನಾಗಿ ಮಾಡಲಾಗಿದೆ. ಈಗ ಉಪ ಚುನಾವಣೆ ನಡೆದರೆ ಅವರು ಸೋಲುತ್ತಾರೆ ಮತ್ತು ಮಂತ್ರಿ ಹುದ್ದೆಯನ್ನು ಕಳೆದುಕೊಳ್ಳುತ್ತಾರೆ. ಜನರು ಇದರ ಬಗ್ಗೆ ಯೋಚಿಸಬೇಕು ಎಂದು ರಾಜ್ಯ ಕ್ರೀಡಾ ಸಚಿವ ಅಶೋಕ್ ಚಂದ್ನಾ ಹೇಳಿದ್ದಾರೆ.

ಇನ್ನು ಸರ್ಕಾರ ಉರುಳಿಸುವ ಸಂಚಿನ ಕುರಿತಂತೆ ಸಚಿನ್ ಪೈಲಟ್‌ಗೆ ಸಮನ್ಸ್ ಕೊಟ್ಟು ಟೀಕೆಗೊಳಗಾಗಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಸಿಎಂ, ಡಿಸಿಎಂ, ಚೀಫ್ ವಿಪ್ ಸೇರಿದಂತೆ ಇತರ ಕೆಲವು ಮಂತ್ರಿಗಳು ಮತ್ತು ಶಾಸಕರು ಬಿಜೆಪಿಯಿಂದ ಕುದುರೆ ವ್ಯಾಪಾರದ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ದೂರಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಎಸ್‌ಒಜಿಯಿಂದ ನೋಟಿಸ್ ಪಡೆದಿದ್ದಾರೆ. ಕೆಲವು ಮಾಧ್ಯಮಗಳು ಇದನ್ನು ವಿಭಿನ್ನವಾಗಿ ಪ್ರಸ್ತುತಪಡಿಸುವುದು ಸೂಕ್ತವಲ್ಲ ಎಂದು ಗೆಹ್ಲೋಟ್ ಹೇಳಿದ್ದಾರೆ.


ಇದನ್ನೂ ಓದಿ: ನಾವು ಯಾವಾಗ ಎಚ್ಚರಗೊಳ್ಳುತ್ತೇವೆ? ರಾಜಸ್ಥಾನ ಬಿಕ್ಕಟ್ಟಿನ ಮಧ್ಯೆ ಕಪಿಲ್ ಸಿಬಲ್ ಆತ್ಮಾವಲೋಕನ! 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...