Homeಕರ್ನಾಟಕಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ...

ಗೌರಿ ನುಡಿನಮನ: ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಮರಣದ ನಂತರವೂ ಮತ್ತೆ ಮತ್ತೆ ಜೀವಂತ; ದಿನೇಶ್ ಅಮೀನ್‌ಮಟ್ಟು

- Advertisement -
- Advertisement -

ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಎಂಟನೇ ಪುಣ್ಯಸ್ಮರಣೆಯನ್ನು ಸೆಪ್ಟೆಂಬರ್ 5ರಂದು ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅವರ ಸಮಾಧಿ ಬಳಿ ‘ಗೌರಿ ನುಡಿನಮನ’ ಕಾರ್ಯಕ್ರಮದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಅಭಿಮಾನಿಗಳು ಗೌರಿ ಅವರ ಆದರ್ಶಗಳನ್ನು ಸ್ಮರಿಸಿ, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಗೌರಿ ಲಂಕೇಶ್‌ ಅವರ ಹೋರಾಟ ಮತ್ತು ಆದರ್ಶಗಳನ್ನು ನೆನಪಿಸಿಕೊಂಡು, “ಕೆಲವರು ಬದುಕಿದ್ದರೂ ಸತ್ತಂತೆ ಇರುತ್ತಾರೆ, ಆದರೆ ಗೌರಿ ಲಂಕೇಶ್‌ ಅವರಂತಹ ಹೋರಾಟಗಾರರು ಮರಣದ ನಂತರವೂ ಮತ್ತೆ ಮತ್ತೆ ಜೀವಂತವಾಗಿರುತ್ತಾರೆ. ನಾವೆಲ್ಲರೂ ಬದುಕಿದ್ದರೂ ಸತ್ತಂತೆ ಇದ್ದೇವೆ ಎಂಬ ಭಾವನೆ ಒಮ್ಮೊಮ್ಮೆ ನನ್ನನ್ನೂ ಕಾಡುತ್ತದೆ” ಎಂದು ಹೇಳಿದರು.

ಗೌರಿ ಲಂಕೇಶ್‌ ಜನಪ್ರಿಯ ನಾಯಕಿಯಾಗಿರಲಿಲ್ಲ, ಘನಘೋರ ಭಾಷಣಕಾರರಾಗಲಿ ಅಥವಾ ದೊಡ್ಡ ಸಂಘಟನೆಗಳ ನಾಯಕಿಯಾಗಿರಲಿ ಇರಲಿಲ್ಲ. ಅವರದ್ದು ಪ್ರೀತಿ, ಕರುಣೆ, ಸತ್ಯ, ನ್ಯಾಯ, ಎಚ್ಚರ ಮತ್ತು ಧೈರ್ಯದಿಂದ ತುಂಬಿದ ವ್ಯಕ್ತಿತ್ವ. ಸಮಾಜದ ನೋವಿಗೆ ಸ್ಪಂದಿಸಲು ’56 ಇಂಚಿನ ಎದೆ’ ಬೇಕಾಗಿಲ್ಲ, ಬದಲಾಗಿ ತಾಯಿ ಹೃದಯದ ನಾಯಕರು ಮತ್ತು ನಾಯಕಿಯರು ಬೇಕಾಗಿದ್ದಾರೆ ಎಂಬುದನ್ನು ಗೌರಿ ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ನುಡಿದರು.

ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಮತ್ತು ಇಂದಿನ ಸವಾಲುಗಳು

ದಿನೇಶ್ ಅಮಿನ್ ಮಟ್ಟು ಅವರು ಗೌರಿ ಲಂಕೇಶ್‌ ಅವರ ವ್ಯಕ್ತಿತ್ವದ ಮತ್ತೊಂದು ದೊಡ್ಡ ಶಕ್ತಿಯನ್ನು ಅನಾವರಣಗೊಳಿಸಿದರು. “ಗೌರಿ ಅವರಿಗೆ ಎಲ್ಲರನ್ನೂ ಒಳಗೆ ತೆಗೆದುಕೊಳ್ಳುವ ಮತ್ತು ಒಗ್ಗೂಡಿಸುವ ಒಂದು ವಿಶೇಷ ಗುಣವಿತ್ತು. ಅವರು ನಾಡಿನ ಮುಖ್ಯಮಂತ್ರಿಗಳಿಂದ ಹಿಡಿದು ಕಾಡಿನ ಮೂಲೆಯಲ್ಲಿರುವವರನ್ನೂ ಒಪ್ಪಿಸಿಕೊಂಡು, ಜೊತೆಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರು” ಎಂದರು. ಸಮಾಜದಲ್ಲಿ ಜಾತ್ಯತೀತರು, ಸಾಮಾಜಿಕ ನ್ಯಾಯದ ಪರ ಇರುವವರು ಮತ್ತು ಸಜ್ಜನರ ಸಂಖ್ಯೆ ಹೆಚ್ಚಿದ್ದರೂ, ಇವರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ. ಇಂತಹ ಶಕ್ತಿಗಳನ್ನು ಒಗ್ಗೂಡಿಸುವ ಕೌಶಲ್ಯ ಗೌರಿ ಲಂಕೇಶ್‌ ಅವರಲ್ಲಿತ್ತು. “ಕಳೆದ ಎಂಟು ವರ್ಷಗಳಲ್ಲಿ ನೂರಾರು ‘ಗೌರಿ’ಗಳು ಹುಟ್ಟಿಕೊಂಡಿದ್ದಾರೆ, ‘ನಾವೆಲ್ಲರೂ ಗೌರಿ’ ಎಂದು ಕರೆದುಕೊಂಡೆವು. ಆದರೆ ಇನ್ನೊಬ್ಬ ಗೌರಿಯನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ” ಎಂದು ಅವರು ವಿಷಾದಿಸಿದರು.

ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದ ಮಟ್ಟು, “ಉಮರ್ ಖಾಲಿದ್ ಅವರಂತಹ ಹೋರಾಟಗಾರರು ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತವು ಅತ್ಯಂತ ಕೆಳಗೆ ತಲುಪಿದೆ” ಎಂದು ಹೇಳಿದರು. ಗೌರಿ ಯಾವ ಭೀತಿಯನ್ನು ಕಂಡು ಹೋರಾಟಕ್ಕೆ ಇಳಿದಿದ್ದರೋ, ಅದು ಇಂದು ವಾಸ್ತವವಾಗುತ್ತಿದೆ. ಅವರ ಹತ್ಯೆಯ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ನ್ಯಾಯಾಂಗದ ಪ್ರಕ್ರಿಯೆಗಳ ಮೇಲೆ ಸವಾಲುಗಳು ಹೆಚ್ಚಾಗಿವೆ. ಗೌರಿ ಬಿಟ್ಟು ಹೋದ ಹೋರಾಟದ ನಿರ್ವಾತವನ್ನು ತುಂಬಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಗೌರಿ ಬಯಸಿದ್ದಂತಹ ಸಮಾಜವನ್ನು ನಿರ್ಮಿಸುವುದು ಒಂದು ನಿರಂತರ ಪ್ರಕ್ರಿಯೆ. ಆ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಅವರು ಕರೆ ನೀಡಿದರು.

ಗಣ್ಯರ ಉಪಸ್ಥಿತಿ

ಈ ‘ಗೌರಿ ನುಡಿನಮನ’ ಕಾರ್ಯಕ್ರಮದಲ್ಲಿ ಬಿ.ಟಿ.ಲಲಿತಾ ನಾಯಕ್, ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್, ಡಾ. ವಿಜಯಮ್ಮ, ಶಿವಸುಂದರ್, ಕೆ. ಬಾಲು, ವಿ.ಆರ್. ಕಾರ್ಪೆಂಟರ್, ಅಂಬಣ್ಣ ಅರೋಲಿಕರ್, ವಿ.ಎಸ್. ಶ್ರೀಧರ್, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕೆ.ಎಲ್. ಅಶೋಕ್, ನೂರ್ ಶ್ರೀಧರ್ ಮತ್ತು ರಾಜಲಕ್ಷ್ಮಿ ಅಂಕಲಗಿ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು, ಪತ್ರಕರ್ತರು ಮತ್ತು ಗೌರಿ ಲಂಕೇಶ್‌ ಅವರ ಅಭಿಮಾನಿಗಳು ಭಾಗವಹಿಸಿದ್ದರು. ಎಲ್ಲರೂ ಗೌರಿ ಅವರ ಆದರ್ಶಗಳನ್ನು ನೆನಪಿಸಿಕೊಂಡು, ಅವರ ಹೋರಾಟವನ್ನು ಮುಂದುವರೆಸುವ ಸಂಕಲ್ಪ ಮಾಡಿದರು.

ಗೌರಿ ನುಡಿನಮನ: ಗುಂಡೇಟು ತಿಂದು ಸಾವನ್ನಪ್ಪಿದ ಗೌರಿ ನಮ್ಮೆಲ್ಲರ ಮನಸ್ಸಿನಲ್ಲಿ ಸದಾ ನೆನಸಿರುತ್ತಾರೆ; ಬಿ.ಟಿ.ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...