Homeಮುಖಪುಟಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

ಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

- Advertisement -
- Advertisement -

ಕಾಮಿಡಿಯನ್‌ ಕುನಾಲ್ ಕಮ್ರಾ ಅವರೊಂದಿಗೆ ಒಗ್ಗಟ್ಟನ್ನು ತೋರಿಸಲು ಕಾರ್ಯಕರ್ತರ ಗುಂಪೊಂದು ವಾರಣಾಸಿ-ದೆಹಲಿ ನಡುವೆ ಸಂಚರಿಸುವ ಇಂಡಿಗೊ ವಿಮಾನದಲ್ಲಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಟಿವಿ ನಿರೂಪಕ ಅರ್ನಾಬ್ ಗೋಸ್ವಾಮಿ ಅವರನ್ನು ಎದುರಿಸಿದ ಕಾಮಿಡಿಯನ್‌ ಕುನಾಲ್ ಕಮ್ರಾ ಅವರಿಗೆ ಆರು ತಿಂಗಳ ಕಾಲದ ನಿಷೇಧವನ್ನು ಖಂಡಿಸಿ ಆಕ್ಟಿವಿಸ್ಟ್‌ ಪ್ರಿಯಾ ಪಿಳ್ಳೈ ಮತ್ತು ಇತರ ಮೂವರು ವಾರಣಾಸಿ-ದೆಹಲಿ ಇಂಡಿಗೊ ವಿಮಾನದಲ್ಲಿ ಗುರುವಾರ ಫಲಕಗಳನ್ನು ಹಿಡಿದಿದ್ದರು.

ಇದೇ ವೇಳೆ ಟ್ವಿಟ್ಟರ್‌ನಲ್ಲಿ #boycottIndigo ಟ್ರೆಂಡಿಂಗ್ ಆಗಿರುವಾಗಲೇ ಕಮ್ರಾವನ್ನು ನಿಷೇಧಿಸಿದ ಇಂಡಿಗೊ ನಡೆಯನ್ನು ವಿರೋಧಿಸಲು ಕೆಲವರು, ಸ್ಪಷ್ಟವಾಗಿ ವಿಮಾನದ ಒಳಗಿನ ಜಾಗವನ್ನೇ ಆಕ್ರಮಿಸಿಕೊಂಡಿದ್ದಾರೆ.

ಇಂಡಿಗೊ ಫ್ಲೈಟ್ ಪೈಲಟ್ ಕೂಡ ಈ ನಿಷೇಧದ ಕ್ರಮವನ್ನು ಟೀಕಿಸಿದ್ದಾರೆ. ಅಲ್ಲದೇ ಕುನಾಲ್ ಕರ್ಮ ಇಂಡಿಗೊ ವಿರುದ್ಧ 25 ಲಕ್ಷ ರೂಗಳ ಮಾನನಷ್ಟ ಮೊಕದ್ದಮೆ ಸಹ ಹೂಡಿದ್ದಾರೆ.

ಪತ್ರಿಕಾ ಡಾಟ್ ಕಾಮ್ ವರದಿಯ ಪ್ರಕಾರ, ಕೆಲವು ಜನರು ಕುನಾಲ್ ಕಮ್ರಾ ಅವರನ್ನು ಇಂಡಿಗೊ ನಿಷೇಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸಲು ಪ್ರಾರಂಭಿಸಿದರು … ವಾರಣಾಸಿಯಿಂದ ದೆಹಲಿಗೆ ಪ್ರಯಾಣಿಸುವ ಇಂಡಿಗೊ ವಿಮಾನದ ಒಳಗೆ.

‘ಕುನಾಲ್ ಕಮ್ರಾ ಪರ ನಾವಿದ್ದೇವೆ. ನೀವು ನಮ್ಮನ್ನು ವಿಭಜಿಸಿದಷ್ಟು ನಾವು ಒಗ್ಗೂಡುತ್ತೇವೆ ಮತ್ತು ಡಬಲ್‌ ಆಗುತ್ತೇವೆ. ನಿಷೇಧವನ್ನು ನಾವು ಖಂಡಿಸುತ್ತೇವೆ’ ಎಂದು ಹೇಳುವ ಪೋಸ್ಟರ್‌ಗಳನ್ನು ಕೆಲವು ಪ್ರತಿಭಟನಾಕಾರರು ಹಿಡಿದಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಚಿತ್ರಗಳು ಮತ್ತು ವೈರಲ್ ವೀಡಿಯೊಗಳು ತೋರಿಸುವಂತೆ ಪ್ರತಿಭಟನಾಕಾರರು ಮೌನವಾಗಿ ಪೋಸ್ಟರ್‌ಗಳನ್ನು ಹಿಡಿದಿಟ್ಟುಕೊಂಡಿದ್ದಾರೆ, ಮತ್ತು ಇತರ ಪ್ರಯಾಣಿಕರು ತಮ್ಮ ಅದನ್ನು ಗಮನದಿಂದ ಓದುತ್ತಿದ್ದಾರೆ.

ನಂತರ ಸಿಬ್ಬಂದಿ ಬಂದು ಕುಳಿತುಕೊಳ್ಳಲು ಹೇಳಿದ್ದಾರೆ. ಅಲ್ಲಿಗೆ ಶಾಂತಿಯುತ ಪ್ರತಿಭಟನೆ ಮುಗಿದಿದೆ. ಯಾವುದೇ ವಾದ ವಿವಾದಗಳು ದಾಖಲಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...