Homeಕರ್ನಾಟಕ‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

- Advertisement -
- Advertisement -

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಅಶೋಕ್‌ ಅವರ ಹಳೆಯ ಸಂದರ್ಶನದ ವಿಡಿಯೋವೊಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಖರ್ಗೆ, ಧರ್ಮದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವ ಆರೋಪ ಮಾಡಿದ್ದಾರೆ.

ಪ್ರಿಯಾಂಕ್ ಖರ್ಗೆ ಹಂಚಿಕೊಂಡಿರುವ ಹಳೆಯ ವಿಡಿಯೋದಲ್ಲಿ ಆರ್‌. ಅಶೋಕ್‌, “ಹಿಂದುತ್ವದ ಹೆಸರಿನಲ್ಲಿ ಮುಸ್ಲಿಮರನ್ನು ಟೀಕಿಸುವುದರಿಂದಲೇ ಕೆಲವರು ರಾಜಕೀಯವಾಗಿ ಗಮನ ಸೆಳೆಯಲು ಹಾಗೂ ನಾಯಕನಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದುಕೊಂಡಿದ್ದಾರೆ” ಎಂಬ ರೀತಿಯಲ್ಲಿ ಮಾತನಾಡಿದ್ದಾರೆ.

“ಹಿಂದುತ್ವ ಅಂತ ಹೇಳಿದ್ರೆ ಮುಸಲ್ಮಾನರನ್ನ ಬೈಬೇಕು. ಅವಾಗ್ಲೇ ಕ್ಯಾಚಿಂಗ್‌ ಆಗೋದು, ಮುಸ್ಲೀಂರನ್ನ ಬೈದ್ರೆ ನೀವು ಲೀಡರ್‌ ಆಗೋದು.. ಇಲ್ಲ ಅಂದ್ರೆ ನೀವು ಲೀಡರ್ರೇ ಅಲ್ಲ. ಆ ಬ್ರಾಂಡ್‌ನಲ್ಲಿ ತುಂಬಾ ಜನ ಬಂದಿದ್ದಾರೆ…” ಎಂದು ಅಶೋಕ್‌ ಹೇಳಿರುವುದು ವಿಡಿಯೋದಲ್ಲಿ ಕೇಳಿಸುತ್ತದೆ.

ಅಂದರೆ, ಹಿಂದುತ್ವದ ಹೆಸರಿನಲ್ಲಿ ಮುಸ್ಲಿಮರನ್ನು ನಿಂದಿಸುವುದನ್ನೇ ನಾಯಕತ್ವದ ಮಾನದಂಡವೆಂದು ಪರಿಗಣಿಸುವ ಒಂದು ರಾಜಕೀಯ ಪ್ರವೃತ್ತಿ ಅಥವಾ ‘ಬ್ರಾಂಡ್‌’ ಬಗ್ಗೆ ಅಶೋಕ್‌ ಅವರು ಉಲ್ಲೇಖಿಸುತ್ತಿರುವಂತೆ ಈ ಹೇಳಿಕೆಯಿಂದ ಅರ್ಥೈಸಬಹುದು. ಇದೇ ಹೇಳಿಕೆಯನ್ನು ಇದೀಗ ಪ್ರಿಯಾಂಕ್ ಖರ್ಗೆ ತಮ್ಮ ರಾಜಕೀಯ ಟೀಕೆಗೆ ಆಧಾರವಾಗಿ ಬಳಸಿಕೊಂಡಿದ್ದಾರೆ.


ಮೆರವಣಿಗೆ
ಮಾರ್ಗದ ವಿಚಾರದಲ್ಲಿ ಬಿಜೆಪಿ ವಿರುದ್ಧ ಟೀಕೆ

ಗಣಪತಿ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂಬುದು ಸರ್ಕಾರದ ನಿಲುವು ಎಂದು ಖರ್ಗೆ ಹೇಳಿದ್ದಾರೆ. ಆದರೆ, ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲು ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪೊಲೀಸರ ನಿರ್ದೇಶನವನ್ನು ಬಿಜೆಪಿ ಧರ್ಮ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿರುವ ಖರ್ಗೆ, ಈ ಬೆಳವಣಿಗೆಯನ್ನು ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ” ಎಂದು ವ್ಯಂಗ್ಯವಾಡಿದ್ದಾರೆ.

ವಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಧರ್ಮ ರಾಜಕಾರಣವೇ?

ಆರ್‌. ಅಶೋಕ್‌ ಅವರ ಪ್ರಸ್ತುತ ನಿಲುವಿನ ಬಗ್ಗೆಯೂ ಪ್ರಶ್ನೆ ಎತ್ತಿರುವ ಪ್ರಿಯಾಂಕ್ ಖರ್ಗೆ, ನಾಯಕತ್ವದ ವಿಚಾರವನ್ನೇ ರಾಜಕೀಯವಾಗಿ ಪ್ರಸ್ತಾಪಿಸಿದ್ದಾರೆ.

ನಿಮ್ಮದೇ ಹೇಳಿಕೆಯಂತೆ ನೀವೀಗ ‘ಧರ್ಮ ರಾಜಕಾರಣ’ ಶುರು ಮಾಡಿರುವುದು ನಾಯಕ ಎನಿಸಿಕೊಳ್ಳುವುದಕ್ಕಾ ಅಥವಾ ಅಭದ್ರತೆಯಲ್ಲಿರುವ ವಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕಾ?” ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸರ ಮೇಲೆ ದರ್ಪ ಸಹಿಸುವುದಿಲ್ಲ’

ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಕೋಮು ಸಂಘರ್ಷ ನಿಗ್ರಹಿಸುವ ವಿಷಯದಲ್ಲಿ ನಾನು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅಂತೆಯೇ ಪೊಲೀಸರ ಮೇಲೆ ನಿಮ್ಮ ದರ್ಪ ಮತ್ತು ದೌರ್ಜನ್ಯಗಳನ್ನು ಸಹಿಸುವುದೂ ಇಲ್ಲ” ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಟಿ. ನರಸೀಪುರದ ಗಣಪತಿ ಮೆರವಣಿಗೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಸಂದರ್ಭದಲ್ಲಿ, ಅಶೋಕ್‌ ಅವರ ಹಳೆಯ ವಿಡಿಯೋವನ್ನು ಮುಂದಿಟ್ಟುಕೊಂಡು ಖರ್ಗೆ ಮಾಡಿರುವ ಈ ಟೀಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...