Homeಮುಖಪುಟಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದಾರೆ. ವಿಶ್ವ ಪ್ರಸಿದ್ದ ಫೋಟೊ ಜರ್ನಲಿಸ್ಟ್‌ ಆಗಿದ್ದ ಅವರು 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್‌ ಫೋಟೊಗ್ರಾಫ್‌ಗಾಗಿ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು.

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಮೃತ

ಅವರ ಫೋಟೋಗಳು ಹಲವಾರು ನಿಯತಕಾಲಿಕೆಗಳು, ಪತ್ರಿಕೆಗಳು, ಸ್ಲೈಡ್‌ಶೋಗಳು ಮತ್ತು ಗ್ಯಾಲರಿಗಳಲ್ಲಿ ವ್ಯಾಪಕವಾಗಿ ಪ್ರಕಟಗೊಂಡಿವೆ. ನಾನುಗೌರಿ.ಕಾಂ ಓದುಗರಿಗಾಗಿ ಅವರು ಸೆರೆ ಹಿಡಿದ ಕೆಲವು ಪ್ರಸಿದ್ದ ಚಿತ್ರಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಮೋದಿ ಸರ್ಕಾರದ ಅವೈಜ್ಞಾನಿಕ, ಅಸಮರ್ಪಕ ಲಾಕ್‌ಡೌನ್‌ನಿಂದಾಗಿ ಸುಮಾರು 500 ಕಿಲೋಮಿಟರ್‌ ನಡೆದ ಕಾರ್ಮಿಕರ ಮಹಾವಲಸೆ. (Mar 26, 2020 REUTERS / Danish Siddiqui)

 

ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹೊರಗೆ ಹೊಸ ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಂದೂಕು ಹಿಡಿದು ಬೆದರಿಸುತ್ತಿರುವುದು. (ಜನವರಿ 30, 2020 REUTERS / Danish Siddiqui)
ದೆಹಲಿ ಗಲಭೆಯಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸುತ್ತಿರುವ ದುಷ್ಕರ್ಮಿಗಳು (ಫೆಬ್ರವರಿ 2021 / Danish Siddiqui)
ಕೊರೊನಾದಿಂದ ಸಾವನ್ನಪ್ಪಿದವರ ಸಾಮೂಹಿಕ ಶವಸಂಸ್ಕಾರ, ನವದೆಹಲಿಯ ಶ್ಮಶಾನ (2021 ರ ಏಪ್ರಿಲ್ 22 ಡ್ರೋನ್‌ನೊಂದಿಗೆ ತೆಗೆದ ಚಿತ್ರ. REUTERS / Danish Siddiqui)
ಕೊರೊನಾದಿಂದ ಸಾವನ್ನಪ್ಪಿದವರ ಸಾಮೂಹಿಕ ಶವಸಂಸ್ಕಾರ, ನವದೆಹಲಿಯ ಶ್ಮಶಾನ (2021 ರ ಏಪ್ರಿಲ್ 22 ಡ್ರೋನ್‌ನೊಂದಿಗೆ ತೆಗೆದ ಚಿತ್ರ. REUTERS / Danish Siddiqui)

 

ಕೊರೊನಾದಿಂದಾಗಿ ಮೃತಪಟ್ಟ ಸಂಬಂಧಿಕರಿಗಾಗಿ ರೋಧಿಸುತ್ತಿರುವುದು

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...