Homeಮುಖಪುಟಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

ಕೊರೊನಾದಿಂದ ಸಿಪಿಎಂ ನಾಯಕನ ಪುತ್ರ ನಿಧನ; ವಿಕೃತಿ ಮೆರೆದ ಬಿಜೆಪಿ ಉಪಾಧ್ಯಕ್ಷ

- Advertisement -
- Advertisement -

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯಚೂರಿ ಅವರ ಹಿರಿಯ ಮಗ, ಪತ್ರಕರ್ತ ಆಶಿಶ್‌ ಯಚೂರಿ ಇಂದು ಬೆಳಿಗ್ಗೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಬಿಹಾರದ ಮಾಜಿ ಶಾಸಕ ಹಾಗೂ ಪ್ರಸ್ತುತ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಮಿಥಿಲೇಶ್‌ ಕುಮಾರ್‌ ತಿವಾರಿ ಅವರು, ‘ಚೀನಾ ಬೆಂಬಲಿಗ ಯಚೂರಿಯ ಮಗ ಆಶಿಶ್ ಚೀನೀ ಕೊರೊನಾಗೆ ನಿಧನರಾಗಿದ್ದಾರೆ’ ಎಂದು ಹಂಗಿಸಿ ವಿಕೃತಿ ಮೆರೆದಿದ್ದಾರೆ.

ವಿಥಿಲೇಶ್‌‌ ಕುಮಾರ್‌ ತಿವಾರಿ ಅವರು 2015 ರಲ್ಲಿ ಬೈಕುಂತ್‌ಪುರ ಕ್ಷೇತ್ರದಿಂದ ಬಿಹಾರ ವಿಧಾನಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಇಂದು ಅವರು ಟ್ವೀಟ್ ಮಾಡಿದ ನಂತರ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಅದನ್ನು ಅವರು ಡಿಲಿಟ್ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು, “ಚೀನಾ ಬೆಂಬಲಿಗ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ಮಗ ಆಶಿಶ್‌ ಯಚೂರಿ ಚೀನೀ ಕೊರೊನಾದಿಂದ ನಿಧನ” ಎಂದು ಬರೆದಿದ್ದರು.

ಇದನ್ನೂ ಓದಿ: ಸಿಪಿಎಂ ನಾಯಕ ಸೀತಾರಾಮ್ ಯಚೂರಿ ಅವರ ಮಗ, ಪತ್ರಕರ್ತ ಆಶಿಶ್ ಯಚೂರಿ(34) ಕೊರೊನಾದಿಂದ ನಿಧನ

ಅವರ ಟ್ವೀಟ್‌ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತನಿಖಾ ಪತ್ರಕರ್ತರಾಗಿದ್ದ 35 ವರ್ಷದ ಆಶಿಶ್ ಯೆಚೂರಿ ಗುರುವಾರ ಬೆಳಿಗ್ಗೆ ಗುರಗಾಂವ್‌ನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದಾಗಿ ಎರಡು ವಾರಗಳ ಹೋರಾಟದ ನಂತರ ನಿಧನರಾಗಿದ್ದಾರೆ.

ಸೀತಾರಾಮ್ ಯೆಚೂರಿ ಅವರ ಪುತ್ರನ ನಿಧನಕ್ಕೆ ರಾಷ್ಟ್ರಪತಿ, ಉಪಾ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಇತರ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...