Homeಮುಖಪುಟವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ಲೇಹ್‌ನಿಂದ ದೆಹಲಿಗೆ ಪಾದಯಾತ್ರೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ಲೇಹ್‌ನಿಂದ ದೆಹಲಿಗೆ ಪಾದಯಾತ್ರೆ

- Advertisement -
- Advertisement -

ಪರಿಸರವಾದಿ, ಹೋರಾಟಗಾರ ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ನೂರಕ್ಕೂ ಅಧಿಕ ಸ್ವಯಂ ಸೇವಕರು ಭಾನುವಾರ ಲಡಾಖ್‌ನ ಲೇಹ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಪಾದಯಾತ್ರೆ ಆರಂಭಿಸಿದ್ದಾರೆ.

ಲೇಹ್‌ ಅಪೆಕ್ಸ್ ಬಾಡಿ (ಎಲ್‌ಎಬಿ) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಜಂಟಿಯಾಗಿ ‘ದಿಲ್ಲಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿದೆ.

ಲಡಾಖ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಹಿಂದೆ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ.

ಸೀಮಿತ ಸ್ವಯಂ ಸೇವಕರು ನಡೆಸುತ್ತಿರುವ ಪಾದಯಾತ್ರೆಗೆ ಅಲ್ಲಲ್ಲಿ ಜನರು ಬೆಂಬಲ ವ್ಯಕ್ತಪಡಿಸಿ ಜೊತೆಯಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ ಎಲ್‌ಎಬಿ ಮತ್ತು ಕೆಡಿಎ ಸಂಘಟನೆಗಳು ಕಳೆದ 4 ವರ್ಷಗಳಿಂದ ಕೇಂದ್ರ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದೆ. ಈ ಪೈಕಿ ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವುದು, ಸಂವಿಧಾನದ 6ರನೇ ಶೆಡ್ಯೂಲ್‌ ಅಡಿ ರಕ್ಷಣೆ ಒದಗಿಸುವುದು, ಆರಂಭಿಕ ನೇಮಕಾತಿ ಪ್ರಕ್ರಿಯೆ ಜೊತೆಗೆ ಲಡಾಖ್‌ಗೆ ಪ್ರತ್ಯೇಕ ಸಾರ್ವಜನಿಕ ಸೇವಾ ಆಯೋಗ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ನೀಡುವುದು ಪ್ರಮುಖವಾಗಿದೆ.

ಈ ವರ್ಷದ ಮಾರ್ಚ್‌ 6ರಂದು ಮೇಲೆ ಉಲ್ಲೇಖಿಸಿದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಅದಕ್ಕೆ ಲಡಾಖ್ ಜನತೆಯಿಂದ ಭಾರೀ ಬೆಂಬಲ ವ್ಯಕ್ತವಾಗಿತ್ತು. 21 ದಿನಗಳ ಬಳಿಕ ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದರು. ಇದೀಗ ಹೋರಾಟವನ್ನು ಮುಂದುರೆಸಿರುವ ಅವರು ದೆಹಲಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದು ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ಬಳಿಕ, ಅಲ್ಲಿ ಹೊರಗಿನವರಿಗೆ ಗಣಿಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಿಗೆ ಅನುಮತಿ ನೀಡಲಾಗುತ್ತಿದೆ. ಇದರಿಂದ ಸಂಭವಿಸಬಹುದಾದ ಪರಿಸರ ಹಾನಿಯ ಕುರಿತು ಕೂಡ ಸೋನಮ್ ವಾಂಗ್‌ಚುಕ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ 244ನೇ ವಿಧಿಯಡಿ ಬರುವ 6ನೇ ಪರಿಚ್ಛೇದವು, ಲಡಾಖ್‌ನ ಬುಡಕಟ್ಟು ಜನರಿಗೆ ಸಾಂವಿಧಾನಿಕ ಸುರಕ್ಷತೆಗಳನ್ನು ಒದಗಿಸುತ್ತದೆ. ಭೂಮಿ, ಸಾರ್ವಜನಿಕ ಆರೋಗ್ಯ ಮತ್ತು ಕೃಷಿ ಸಂಬಂಧ ಕಾನೂನುಗಳನ್ನು ರೂಪಿಸಲು ಸ್ವಾಯತ್ತ ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ. ಹಾಗಾಗಿ, ಅದರ ಜಾರಿಯೂ ವಾಂಗ್‌ಚುಕ್ ಅವರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.

“ಕೇಂದ್ರ ಸರ್ಕಾರ ಲಡಾಖ್‌ನ ಜನರಿಗೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಿರಾಕರಿಸಿದೆ. ಅದನ್ನು ನವದೆಹಲಿಯಿಂದ ನಿಯಂತ್ರಿಸಲ್ಪಡುವ ಅಧಿಕಾರಶಾಹಿಗಳ ಅಧೀನದಲ್ಲಿ ಇರಿಸಿದೆ. ಹಾಗಾಗಿ, ಲಡಾಖ್‌ನ ವಿಷಯದಲ್ಲಿ ಭಾರತವನ್ನು ಪ್ರಜಾಪ್ರಭುತ್ವದ ‘ಮಲತಾಯಿ’ ಎಂದು ಕರೆಯಬಹುದು” ಎಂದು ವಾಂಗ್‌ಚುಕ್ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ : ಜಾತಿ ಗಣತಿ ಸೂಕ್ಷ್ಮ ವಿಚಾರ, ರಾಜಕೀಯ ಸಾಧನವಾಗಿ ಬಳಕೆಯಾಗಬಾರದು: ಆರ್‌ಎಸ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...