Homeಮುಖಪುಟಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

- Advertisement -
- Advertisement -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು. ಪೊಲೀಸರ ವರ್ತನೆಯಿಂದ ನೊಂದಿರುವ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಕಣ್ಣೀರು ಹಾಕಿದ್ದಾರೆ.

ಮಹಾತ್ಮ ಗಾಂಧಿ ಮತ್ತು ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಿಡಿದುಕೊಂಡು, ತಮ್ಮ ಉಳಿದ ಬೆಂಬಬಲಿಗರೊಂದಿಗೆ ಪ್ರತಿಭಟನಾ ಸ್ಥಳದಲ್ಲಿ ಕುಳಿತಿದ್ದ ದಿಪ್ಕೆ ಕಣ್ಣಿರು ಹಾಕಿದ್ದಾರೆ. ಅಳಲು ಪ್ರಾರಂಭಿಸಿದ ಅವರನ್ನು ಪ್ರತಿಭಟನಾಕಾರರು ಸಮಾಧಾನಪಡಿಸಲು ಪ್ರಯತ್ನಿಸಿದರು; ಕುಡಿಯಲು ನೀರು ಕೊಟ್ಟು ಸಂತೈಸಿದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ಪೊಲೀಸರು ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ಕರೆದೊಯ್ದ ನಂತರ ದಿಪ್ಕೆ ಸ್ವತಃ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು.

ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ದೀಪ್ಕೆ, ವಾಂಗ್‌ಚುಕ್ ಅವರು ಆಸ್ಪತ್ರೆಗೆ ಹೋಗುವುದಕ್ಕೆ ಇಷ್ಟವಿರಲಿಲ್ಲ ಎಂದು ವಿವರಿಸಿದರು.

“ಅವರಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಲು ಬಯಸಿದ್ದರು. ಆದರೆ ಈ ಪೊಲೀಸರು ಮಾಡಿದ್ದೇನು? ಅವರು ಅಪರಾಧಿ ಅಲ್ಲ; ಅವರನ್ನು ಪರದೆಯ ಕೆಳಗೆ ಮರೆಮಾಡಿ ಕರೆದೊಯ್ದ ರೀತಿ ಏಣು? ಅವರ ಆರೋಗ್ಯದ ಬಗ್ಗೆ ನಿಮಗೆ ಅಷ್ಟೊಂದು ಕಾಳಜಿ ಇದ್ದರೆ, ನೀವು ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕಿತ್ತು” ಎಂದು ಅವರು ಹೇಳಿದರು.

ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಬೆಂಬಲಿಸಿ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಏಕಾಏಕಿ ಬಂದು ಬಲವಂತವಾಗಿ ಕರೆದೊಯ್ದ ನಂತರ ಶನಿವಾರ ಬೆಳಿಗ್ಗೆ ಜಂತರ್ ಮಂತರ್‌ನಲ್ಲಿ ಸಿಜೆಪಿಯ ಪ್ರತಿಭಟನೆ ಗೊಂದಲದಲ್ಲಿ ಸಿಲುಕಿತು. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಿಂದಾಗಿ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ವಾಂಗ್‌ಚುಕ್ ಅವರನ್ನು ಕರೆದುಕೊಂಡು ಹೋಗುತ್ತಿದ್ದಾಗ, ಪೊಲೀಸರು ಅವರನ್ನು ಬಂಧಿಸಿ ಥಳಿಸಿದ್ದಾರೆ ಎಂದು ದೀಪ್ಕೆ ಹೇಳಿದರು. ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಅವರು ಆರೋಪಿಸಿದರು, ಆದರೆ ದೆಹಲಿ ಪೊಲೀಸರು ಈ ಹೇಳಿಕೆಯನ್ನು ತಿರಸ್ಕರಿಸಿದರು.

ಬಿಳಿ ಪರದೆ ಹಿಡಿದು ಬಂದ ಸಾಮಾನ್ಯ ಉಡುಪಿನ ಪೊಲೀಸರು

ಜಂತರ್ ಮಂತರ್ ನಿಂದ ವಾಂಗ್ಚುಕ್ ಅವರನ್ನು ಕರೆದೊಯ್ಯುವಾಗ ಪೊಲೀಸರು ಕ್ಯಾಮೆರಾಗಳನ್ನು ನಿರ್ಬಂಧಿಸಲು ಬಿಳಿ ಪರದೆಗಳನ್ನು ಬಳಸಿದರು. ಪೊಲೀಸರು ಸಾಮಾನ್ಯ ಉಡುಪಿನಲ್ಲಿ ಪ್ರತಿಭಟನಾ ಸ್ಥಳಕ್ಕೆ ಬಂದು ತಮ್ಮನ್ನು ವೈದ್ಯಕೀಯ ತಂಡ ಎಂದು ಹೇಳಿಕೊಂಡರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು.

ವಾಂಗ್ಚುಕ್ ಅವರನ್ನು ಸ್ಥಳಾಂತರಿಸುವ ಪೊಲೀಸರ ಯೋಜನೆಯಲ್ಲಿ ಮೊಬೈಲ್‌ ನೆಟ್‌ವರ್ಕ್ ಜಾಮರ್‌ಗಳನ್ನು ಹಾಕಲಾಗಿತ್ತು ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದೆಹಲಿ ಹೈಕೋರ್ಟ್‌ನ ನಿರ್ದೇಶನ ಮತ್ತು ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಸೇರಿಸಲು ಶಿಫಾರಸು ಮಾಡಿದ ವೈದ್ಯಕೀಯ ಸಲಹೆಯನ್ನು ಅನುಸರಿಸಿ ಪೂರ್ವ-ನಿರ್ಧರಿತ ಕಾರ್ಯಾಚರಣೆಯನ್ನು ರಾತ್ರಿಯಿಡೀ ಯೋಜಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಮೂಲಗಳ ಪ್ರಕಾರ, ಹಿರಿಯ ಅಧಿಕಾರಿಗಳು ಬೆಳಿಗ್ಗೆ 1.30 ರ ಸುಮಾರಿಗೆ ವಾಂಗ್ಚುಕ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಪೊಲೀಸ್ ಪ್ರಧಾನ ಕಚೇರಿಯಿಂದ ಸೂಚನೆಗಳನ್ನು ಪಡೆದರು. ಶೀಘ್ರದಲ್ಲೇ, ನವದೆಹಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಮಂದಿರ ಮಾರ್ಗ ಪೊಲೀಸ್ ಠಾಣೆಯಲ್ಲಿ ಕಾರ್ಯಾಚರಣೆ ರೂಪಿಸಲು ಸೇರಿದ್ದರು ಎನ್ನಲಾಗಿದೆ. ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ “ಘರ್ಷಣೆಯಿಲ್ಲದೆ” ವಾಂಗ್ಚುಕ್ ಅವರನ್ನು ಹೇಗೆ ಸ್ಥಳಾಂತರಿಸಬಹುದು ಎಂಬುದನ್ನು ನಿರ್ಣಯಿಸಲು ಭದ್ರತಾ ಕವಾಯತು ನಡೆಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಾಂಗ್ಚುಕ್ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಇದ್ದಾರೆ. ವಾಂಗ್‌ಚುಕ್‌ನನ್ನು ಆಸ್ಪತ್ರೆಗೆ ಕರೆದೊಯ್ಯಬಾರದಿತ್ತು, ತನ್ನನ್ನು, ಕುಟುಂಬವನ್ನು ಅಥವಾ ವೈಯಕ್ತಿಕ ವೈದ್ಯರನ್ನು ಸಂಪರ್ಕಿಸದೆ ಅವರಿಗೆ ಯಾವುದೇ ಔಷಧಿ ನೀಡಬಾರದು ಎಂದು ಅಧಿಕಾರಿಗಳನ್ನು ಕೇಳಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...