Homeಮುಖಪುಟಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಡಾಖ್‌ಗೆ ರಾಜ್ಯ ಸ್ಥಾನಮಾನವನ್ನು ನೀಡಬೇಕು ಮತ್ತು ಬುಡಕಟ್ಟು ಪ್ರದೇಶಗಳನ್ನು ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ  ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 20ನೇ ದಿನಕ್ಕೆ ಕಾಲಿಟ್ಟಿದೆ.

ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರಕಾರವು ಸ್ಪಂದಿಸದಿರುವುದಕ್ಕೆ ನಿರಾಶೆಯನ್ನು ವ್ಯಕ್ತಪಡಿಸಿದ್ದು, ತಾನು ದಣಿದಿರುವಂತೆ ಭಾಸವಾಗುತ್ತಿದೆ ಮತ್ತು ತನ್ನ ಶರೀರವು ನೋವನ್ನು ಅನುಭವಿಸುತ್ತಿದೆ, ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ ಕೇವಲ ನೀರು ಮತ್ತು ಉಪ್ಪು ಸೇವಿಸುವ ಮೂಲಕ ತಾನು ಬದುಕಿದ್ದೇನೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಸಾಮಾನ್ಯ ನಾಗರಿಕರ ಕೃತಜ್ಞತೆಗಳು, ತಾನಿನ್ನೂ ನಂಬಿಕೆಯನ್ನು ಕಳೆದುಕೊಂಡಿಲ್ಲ. ಲಡಾಖ್‌ಗೆ ಇಂತಹ ಬೆಂಬಲವನ್ನು ನೀಡುತ್ತಿರುವ, ಸ್ವತಃ ಮಾಧ್ಯಮಗಳಾಗಿ ನಮ್ಮ ಮಾತುಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ತಲುಪಿಸುತ್ತಿರುವ ಎಲ್ಲ ಅಧಿಕಾರರಹಿತ ನಾಗರಿಕರಿಗೆ ಕೃತಜ್ಞತೆಗಳು. ಇದು ನಮ್ಮ ಪ್ರಧಾನಿ ಮತ್ತು ಗೃಹಸಚಿವರು ಹಾಗೂ ಗೌರವಾನ್ವಿತ ರಾಷ್ಟ್ರಪತಿಗಳಿಗೂ ತಲುಪುತ್ತದೆ ಎನ್ನುವ ನಂಬಿಕೆ ನನಗಿದೆ. ಅವರು ಶೀಘ್ರದಲ್ಲಿಯೇ ವಾಸ್ತವವನ್ನು ಅರ್ಥ ಮಾಡಿಕೊಳ್ಳುತ್ತಾರೆ ಮತ್ತು ನ್ಯಾಯವನ್ನು ನೀಡುತ್ತಾರೆ ಎಂಬ ನಂಬಿಕೆಯು ಈಗಲೂ ನನ್ನಲ್ಲಿದೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್ ನ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು 3,000 ಜನರು ತನ್ನೊಂದಿಗೆ ಉಪವಾಸವನ್ನು ಮುಂದುವರಿಸಿದ್ದಾರೆ. ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳ ಪ್ರತ್ಯೇಕ ಲೋಕಸಭಾ ಸ್ಥಾನಗಳು, ವಿಶೇಷ ಭೂಮಿ ಮತ್ತು ಉದ್ಯೋಗ ಹಕ್ಕುಗಳು ಮತ್ತು ಲೋಕಸೇವಾ ಆಯೋಗದ ಸ್ಥಾಪನೆಯನ್ನೂ ಅವರು ಕೋರಿದ್ದಾರೆ. ಪ್ರಸ್ತುತ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನದಡಿ ಕೈಗಾರಿಕಾ ಶೋಷಣೆಯಿಂದಾಗಿ ಲಡಾಖ್‌ ಪರಿಸರ ವ್ಯವಸ್ಥೆ ಶಿಥಿಲಗೊಳ್ಳುವ ಬಗ್ಗೆಯೂ ಅವರು ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಇಲ್ಲಿ ವಾಂಗ್ಚುಕ್ ಜೊತೆ ಸೇರಿಕೊಂಡ 5,000 ಜನರು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದರು, ಈ ಪೈಕಿ 300 ಜನರು ಮೂರು ದಿನಗಳಿಂದ ಹತ್ತು ದಿನಗಳವರೆಗೆ ಉಪವಾಸವನ್ನು ಮುಂದುವರಿಸಲು ಸಂಕಲ್ಪ ಮಾಡಿದ್ದಾರೆ. ಜೊತೆಗೆ ದೇಶಾದ್ಯಂತ 40 ನಗರಗಳಲ್ಲಿ ಫ್ರೆಂಡ್ಸ್ ಆಫ್ ಲಡಾಖ್  ಕಾರ್ಯಕ್ರಮಗಳು ನಡೆದಿದೆ.

ವಾಂಗ್ಚುಕ್ ಅವರು 10,000 ಲಡಾಕಿ ಕುರುಬರು ಮತ್ತು ರೈತರ ಜೊತೆ ಗಡಿಯುದ್ದಕ್ಕೂ ಮೆರವಣಿಗೆಯನ್ನು ನಡೆಸುವುದಾಗಿ ಈ ಹಿಂದೆ ಹೇಳಿದ್ದರು, ಮೆರವಣಿಗೆ ಮೂಲಕ ನೆಲದ ವಾಸ್ತವತೆಯನ್ನು ತಿಳಿಸಲು ಬಯಸುವುದಾಗಿ ಹೇಳಿದ್ದರು.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...