Homeಮುಖಪುಟನವದೆಹಲಿ: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಜ್ವರದ ಹಿನ್ನೆಲೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಸೋನಿಯಾ ಗಾಂಧಿ ಅವರ ಮೇಲೆ ವಿಶೇಷ ನಿಗಾ ಇಡಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಡಾ ಅರುಪ್ ಬಸು ಹೇಳಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜ್ವರದ ಲಕ್ಷಣಗಳೊಂದಿಗೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.

ಇದಕ್ಕೂ ಮೊದಲು ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಸೋನಿಯಾ ಗಾಂಧಿ ಅವರನ್ನು ಜನವರಿ 12, 2023 ರಂದು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆ.31ರಂದು ಸೋನಿಯಾ ಗಾಂಧಿ ಅವರು  ಮುಂಬೈನಲ್ಲಿ ನಡೆದ ವಿರೋಧ ಪಕ್ಷದ INDIA  ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದರು.  ಸಭೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೂಡ ಹಾಜರಿದ್ದರು.

ಇದನ್ನು ಓದಿ: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು: ಉದಯನಿಧಿ ಸ್ಟಾಲಿನ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...