Homeಮುಖಪುಟಶೈಕ್ಷಣಿಕ ಕಲ್ಯಾಣಕ್ಕಿಂತ ರಾಜಕೀಯ ಉದ್ದೇಶಗಳಿಗೆ ಆದ್ಯತೆ ನೀಡಿದ್ದಾರೆ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಟೀಕಿಸಿದ ಸೋನಿಯಾ ಗಾಂಧಿ

ಶೈಕ್ಷಣಿಕ ಕಲ್ಯಾಣಕ್ಕಿಂತ ರಾಜಕೀಯ ಉದ್ದೇಶಗಳಿಗೆ ಆದ್ಯತೆ ನೀಡಿದ್ದಾರೆ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಟೀಕಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಸಾಕಷ್ಟು ಸಮಾಲೋಚನೆ ಇಲ್ಲದೆ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಅನ್ನು ಹೇರುತ್ತಿದ್ದಾರೆ; ಶೈಕ್ಷಣಿಕ ಕಲ್ಯಾಣಕ್ಕಿಂತ ರಾಜಕೀಯ ಉದ್ದೇಶಗಳಿಗೆ ಆದ್ಯತೆ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದರಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಎನ್‌ಇಪಿ 2020 ಸರ್ಕಾರವು ತನ್ನ ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣದ ಮೂಲ ಕಾರ್ಯಸೂಚಿಯನ್ನು ಮುಂದಕ್ಕೆ ತಳ್ಳಲು ಒಂದು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಗಾಂಧಿ ಆರೋಪಿಸಿದ್ದಾರೆ.

“ಉನ್ನತ ಮಟ್ಟದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರ ಪರಿಚಯವು ಭಾರತದ ಮಕ್ಕಳು ಮತ್ತು ಯುವಕರ ಶಿಕ್ಷಣದ ಬಗ್ಗೆ ತೀವ್ರವಾಗಿ ಅಸಡ್ಡೆ ಹೊಂದಿರುವ ಸರ್ಕಾರದ ವಾಸ್ತವತೆಯನ್ನು ಮರೆಮಾಡಿದೆ. ಕಳೆದ ದಶಕದಲ್ಲಿ, ಶಿಕ್ಷಣದಲ್ಲಿ, ಅದರ ಪ್ರಾಥಮಿಕ ಕಾಳಜಿ ಮೂರು ಪ್ರಮುಖ ಕಾರ್ಯಸೂಚಿ ಅಂಶಗಳನ್ನು ಜಾರಿಗೆ ತರುವುದು ಎಂದು ಅದರ ದಾಖಲೆಯು ತೋರಿಸಿದೆ. ಅಧಿಕಾರದ ಕೇಂದ್ರೀಕರಣ, ಖಾಸಗಿ ವಲಯದ ಹೊರಗುತ್ತಿಗೆ ಮೂಲಕ ವಾಣಿಜ್ಯೀಕರಣ ಮತ್ತು ಪಠ್ಯಪುಸ್ತಕಗಳು, ಪಠ್ಯಕ್ರಮ ಮತ್ತು ಸಂಸ್ಥೆಗಳ ಕೋಮುವಾದೀಕರಣ” ಎಂದು ಅವರು ಬರೆದಿದ್ದಾರೆ.

ಎನ್‌ಇಪಿ ಮೂಲಕ ಹಿಂದಿ ಹೇರಿಕೆಗೆ ಯತ್ನಿಸಲಾಗುತ್ತಿದೆ ಎಂಬ ಆರೋಪದ ಮೇಲೆ ತಮಿಳುನಾಡು ಸರ್ಕಾರ ಮತ್ತು ಕೇಂದ್ರದ ನಡುವೆ ಹೆಚ್ಚುತ್ತಿರುವ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರ ಈ ಹೇಳಿಕೆಗಳು ಬಂದಿವೆ. ತಮ್ಮ ಅಭಿಪ್ರಾಯ ಲೇಖನದಲ್ಲಿ ಅವರು ತಮಿಳುನಾಡು ಅಥವಾ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಉಲ್ಲೇಖಿಸಿಲ್ಲ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಈ ನೀತಿಯನ್ನು ಬಲವಾಗಿ ವಿರೋಧಿಸಿದ್ದು, ತಮಿಳುನಾಡು ಹಿಂದಿ ಹೇರಿಕೆಯನ್ನು ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಪ್ರತಿಪಾದಿಸಿದೆ. ಈ ಮಧ್ಯೆ, ಡಿಎಂಕೆಯ ಮಿತ್ರಪಕ್ಷವಾದ ಕಾಂಗ್ರೆಸ್, “ಹಿಂದಿಯನ್ನು ಆಯ್ಕೆಯಿಂದ ಕಲಿಯಬಹುದು. ಆದರೆ, ಹೇರಿಕೆಯಿಂದ ಅಲ್ಲ” ಎಂದು ಹೇಳುವ ಮೂಲಕ ಧೃಡ ನಿಲುವು ತೆಗೆದುಕೊಂಡಿದೆ.

ನಿರ್ಣಾಯಕ ನೀತಿ ನಿರ್ಧಾರಗಳಿಂದ ರಾಜ್ಯ ಸರ್ಕಾರಗಳನ್ನು ಹೊರಗಿಡುವ ಮೂಲಕ ಸರ್ಕಾರವು ಶಿಕ್ಷಣದ ಒಕ್ಕೂಟ ರಚನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

“ಕಳೆದ 11 ವರ್ಷಗಳಿಂದ ಈ ಸರ್ಕಾರದ ಕಾರ್ಯನಿರ್ವಹಣೆಯ ನಿರ್ಣಾಯಕ ಲಕ್ಷಣವೆಂದರೆ ಅನಿಯಂತ್ರಿತ ಕೇಂದ್ರೀಕರಣ. ಆದರೆ, ಅದರ ಅತ್ಯಂತ ಹಾನಿಕಾರಕ ಪರಿಣಾಮ ಶಿಕ್ಷಣ ಕ್ಷೇತ್ರದಲ್ಲಿದೆ. ಕೇಂದ್ರ ಮತ್ತು ರಾಜ್ಯ ಶಿಕ್ಷಣ ಮಂತ್ರಿಗಳನ್ನು ಒಳಗೊಂಡ ಕೇಂದ್ರ ಶಿಕ್ಷಣ ಸಲಹಾ ಮಂಡಳಿಯನ್ನು ಸೆಪ್ಟೆಂಬರ್ 2019 ರಿಂದ ಕರೆಯಲಾಗಿಲ್ಲ” ಎಂಬುದನ್ನು ಅವರು ಗಮನಿಸಿದರು.

ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸದೆ ಕೇಂದ್ರ ಸರ್ಕಾರವು ಎನ್‌ಇಪಿ 2020 ಅನ್ನು ಏಕಪಕ್ಷೀಯವಾಗಿ ಜಾರಿಗೆ ತಂದಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು ಟೀಕಿಸಿದರು. “ಶಿಕ್ಷಣವನ್ನು ಮೂಲಭೂತವಾಗಿ ಮರುರೂಪಿಸುವ ನೀತಿಯನ್ನು ಪರಿಚಯಿಸಿದರೂ, ಕೇಂದ್ರ ಸರ್ಕಾರವು ಅದರ ಅನುಷ್ಠಾನದ ಕುರಿತು ಒಮ್ಮೆಯೂ ರಾಜ್ಯ ಸರ್ಕಾರಗಳಿಂದ ಸಲಹೆಗಳನ್ನು ಕೇಳಿಲ್ಲ” ಎಂದು ಅವರು ಹೇಳಿದರು.

ಶಿಕ್ಷಣವು ಸಂವಿಧಾನದ ಸಮಕಾಲೀನ ಪಟ್ಟಿಯ ಅಡಿಯಲ್ಲಿ ಬರುತ್ತದೆ ಎಂದು ಎತ್ತಿ ತೋರಿಸಿದ ಅವರು, ಕೇಂದ್ರ ಮತ್ತು ರಾಜ್ಯಗಳ ನಡುವೆ ಹೆಚ್ಚಿನ ಸಹಕಾರದ ಅಗತ್ಯವನ್ನು ಒತ್ತಿ ಹೇಳಿದರು. ಸರ್ಕಾರವು “ಪ್ರಜಾಪ್ರಭುತ್ವ ಸಮಾಲೋಚನೆಯನ್ನು ಕಡೆಗಣಿಸುತ್ತಿದೆ, ವೈವಿಧ್ಯಮಯ ಪ್ರಾದೇಶಿಕ ದೃಷ್ಟಿಕೋನಗಳನ್ನು ಪರಿಗಣಿಸದೆ ನೀತಿಗಳನ್ನು ಹೇರುತ್ತಿದೆ” ಎಂದು ಅವರು ಆರೋಪಿಸಿದರು.

ಪಿಜ್ಜಾ ಅಂಗಡಿ ದಲಿತ ಉದ್ಯೋಗಿ ಮೇಲೆ ಡಿಎಂಕೆ ಮುಖಂಡನ ಮಗನಿಂದ ಹಲ್ಲೆ: ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...