ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಾಮಾನ್ಯ ಆರೋಗ್ಯ ಪರೀಕ್ಷೆಗಳಿಗಾಗಿ ಗುರುವಾರ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ವಾಡಿಕೆಯ ಪರೀಕ್ಷೆಗಳು ಮತ್ತು ತಪಾಸಣೆಗಾಗಿ ಅವರನ್ನು ಸಂಜೆ 7 ಗಂಟೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಡಿ.ಎಸ್. ರಾಣಾ ಅವರು ಬುಲೆಟಿನ್ ನಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಹೃದಯ ಮತ್ತು ಉಸಿರಾಟದ ವಿಶೇಷ ತಜ್ಞ ಡಾ.ಅರೂಪ್ ಕುಮಾರ್ ಬಸು ಅವರ ಆರೈಕೆಯಡಿಯಲ್ಲಿ ದಾಖಲಿಸಲಾಗಿದೆ ಎಂದು ಆರೋಗ್ಯ ಬುಲೆಟಿನ್ ತಿಳಿಸಿದೆ. ಈ ವರ್ಷ ಎರಡನೇ ಬಾರಿಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿಯೂ ಸೋನಿಯಾ ಗಾಂಧಿಯನ್ನು ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೊಟ್ಟೆಯ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.
ಅವರನ್ನು ದಾಖಲಿಸಿದಾಗ ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಾಜರಿದ್ದರು.
2019 ರಲ್ಲಿ ಲೋಕಸಭಾ ಚುನಾವಣೆಯ ಸೋಲಿನ ನಂತರ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದರು. ನಂತರ ಸೋನಿಯಾ ಗಾಂಧಿ ಪಕ್ಷದ ಹಂಗಾಮಿ ಮುಖ್ಯಸ್ಥ ಹುದ್ದೆಯನ್ನು ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ


