Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....