Homeಮುಖಪುಟಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ “ಬೆಲಾಂಗಿಂಗ್: ಎ ಜರ್ನಿ ಆಫ್ ಲವ್” ಆತ್ಮಕಥೆಯಿಂದ ತೆಗೆದುಹಾಕಲು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಹೆಚ್‌ಐ) ಕೋರಿದೆ ಎಂದು ಕಾಂಗ್ರೆಸ್‌ನ ಹಲವು ನಾಯಕರು ಶುಕ್ರವಾರ (ಆ.28) ಆರೋಪಿಸಿದ್ದಾರೆ. ಈ ಮೂಲಕ ಪ್ರಕಾಶನ ಸಂಸ್ಥೆಯು ಅಭಿವ್ಯಕ್ತಿ ಸ್ವಾತಂತ್ರ್ಯದೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಮುಖಂಡರು ದೂರಿದ್ದಾರೆ.

ಪಿಆರ್‌ಹೆಚ್‌ಐ ಸೋನಿಯಾ ಗಾಂಧಿ ಅವರ “ಬೆಲಾಂಗಿಂಗ್: ಎ ಜರ್ನಿ ಆಫ್ ಲವ್” ಆತ್ಮಕಥೆಯನ್ನು ಭಾರತದಲ್ಲಿ ಪ್ರಕಟಿಸುವುದಿಲ್ಲ ಎಂದು ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಆದರೆ, ಲೇಖಕರು ಸಂಪಾದಕೀಯ ಬದಲಾವಣೆಗಳನ್ನು ತಿರಸ್ಕರಿಸಿದ್ದರಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ವಾದವನ್ನು ಪ್ರಕಾಶನ ಸಂಸ್ಥೆಯು ನಿರಾಕರಿಸಿದೆ.

“ಲೇಖಕರು ಸಂಪಾದಕೀಯ ಬದಲಾವಣೆಗಳನ್ನು ತಿರಸ್ಕರಿಸಿದ ಕಾರಣಕ್ಕಾಗಿಯೇ ಪಿಆರ್‌ಹೆಚ್‌ಐ ‘ಬೆಲಾಂಗಿಂಗ್’ ಪುಸ್ತಕವನ್ನು ಪ್ರಕಟಿಸದಿರಲು ನಿರ್ಧರಿಸಿತು ಎಂದು ಬಿಂಬಿಸುವ ಯಾವುದೇ ವಾದಗಳು ಅಂದಿನ ಪರಿಸ್ಥಿತಿಯನ್ನು ನಿಖರವಾಗಿ ಪ್ರತಿಬಿಂಬಿಸುವುದಿಲ್ಲ” ಎಂದು ಪ್ರಕಾಶನ ಸಂಸ್ಥೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ನಾವು ಈ ಪುಸ್ತಕವನ್ನು ಪ್ರಕಟಿಸಲು ಅತ್ಯಂತ ಉತ್ಸುಕರಾಗಿದ್ದೆವು” ಎಂದು ಪ್ರಕಾಶನ ಸಂಸ್ಥೆಯು ಒಪ್ಪಿಕೊಂಡಿದೆ. ಆದರೆ, ಪ್ರಕಟಣೆಗೂ ಮುನ್ನ ಸತ್ಯಾಸತ್ಯತೆ ಪರಿಶೀಲನೆ ನಡೆಸುವುದು ಮತ್ತು ಲೇಖಕರಿಗೆ ಅಗತ್ಯ ಸಲಹೆಗಳನ್ನು ನೀಡುವುದು ತಮ್ಮ ಸಾಮಾನ್ಯ ಪ್ರಕಾಶನ ಪ್ರಕ್ರಿಯೆಯ ಒಂದು ಭಾಗವಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

“ಒಬ್ಬರು ಪ್ರಕಾಶಕರಾಗಿ, ಪುಸ್ತಕದ ಸತ್ಯಾಸತ್ಯತೆಯನ್ನು ಪರಿಶೀಲಿಸುವುದು ಮತ್ತು ಪುಸ್ತಕದ ಹಿತದೃಷ್ಟಿಯಿಂದ ಲೇಖಕರಿಗೆ ಸೂಕ್ತ ಸಲಹೆಗಳನ್ನು ನೀಡುವುದು ನಮ್ಮ ಹಕ್ಕು ಹಾಗೂ ಜವಾಬ್ದಾರಿಯಾಗಿದೆ. ಇದು ಪ್ರಕಾಶನ ಪ್ರಕ್ರಿಯೆಯ ಒಂದು ಸಾಮಾನ್ಯ ಭಾಗವಾಗಿದೆ,” ಎಂದು ಪಿಆರ್‌ಹೆಚ್‌ಐ ತಿಳಿಸಿದೆ.

“ಲೇಖಕರೊಂದಿಗಿನ ನಮ್ಮ ಗೌಪ್ಯ ಚರ್ಚೆಗಳ ಕುರಿತು ನಾವು ಮುಂದೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಸಂಸ್ಥೆ ಹೇಳಿದೆ.

“ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಕಟವಾಗುತ್ತಿರುವ ಇದೇ ಆವೃತ್ತಿಯ ಪುಸ್ತಕವನ್ನು ಪ್ರಕಾಶನ ಸಂಸ್ಥೆಯ ಭಾರತೀಯ ವಿಭಾಗವು ಇಲ್ಲಿ ಏಕೆ ಬಿಡುಗಡೆ ಮಾಡಲು ಸಾಧ್ಯವಿಲ್ಲ?” ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದಾರೆ.

“ಪ್ರಪಂಚದಾದ್ಯಂತ ಮುದ್ರಣವಾಗುತ್ತಿರುವುದನ್ನು ಭಾರತದಲ್ಲಿ ಮುದ್ರಿಸದಂತೆ ಅವರನ್ನು ತಡೆಯುತ್ತಿರುವ ಕಾರಣ ಅಥವಾ ಒತ್ತಡವಾದರೂ ಏನು?” ಎಂದು ಗೆಹ್ಲೋಟ್ ಅವರು ಎಕ್ಸ್ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಕೇಳಿದ್ದಾರೆ.

ಮೋದಿ ಸರ್ಕಾರ ಅವಧಿಯಲ್ಲಿ ನಡೆದ ಚೀನಾದ ಆಕ್ರಮಣ, ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕುರಿತಾದ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಸಂಸ್ಥೆಯ ಮೇಲೆ ಒತ್ತಡ ಹೇರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ದೇಶದ ಅತ್ಯಂತ ಹಿರಿಯ, ಪ್ರಭಾವಿ ರಾಜಕಾರಣಿ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಸೋನಿಯಾ ಗಾಂಧಿ ಅವರ ಪುಸ್ತಕವನ್ನು ಒತ್ತಡ ಹೇರಿ ತಡೆಯುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೊಲೆ ಮಾಡಿದಂತೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

“ಇದು ಪ್ರಜಾಪ್ರಭುತ್ವದ ಕೊಲೆ. ಭಾರತದ ಜನರಿಂದ ಈ ಸತ್ಯವನ್ನು ಏಕೆ ಮರೆಮಾಚಲಾಗುತ್ತಿದೆ? ಮೋದಿ ಸರ್ಕಾರವು ಒತ್ತಡ ಹೇರಿ ಪ್ರಕಾಶಕರು ಸತ್ಯಗಳನ್ನು ಬದಲಾಯಿಸುವಂತೆ ಮಾಡುತ್ತಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಪೆಂಗ್ವಿನ್ ಸಂಸ್ಥೆಯು ಈ ಆತ್ಮಕಥೆಯನ್ನು ಪ್ರಕಟಿಸಲು ನಿರಾಕರಿಸಿದೆ ಎನ್ನಲಾದ ವರದಿಗಳು “ತೀವ್ರ ಕಳವಳಕಾರಿ” ವಿಷಯವಾಗಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಕೂಡ ಹೇಳಿದ್ದಾರೆ.

“ಸೋನಿಯಾ ಗಾಂಧಿ ಅವರಂತಹ ಹಿರಿಯ ನಾಯಕರು ಏನನ್ನು ಬರೆಯಬೇಕು ಮತ್ತು ಏನನ್ನು ಬರೆಯಬಾರದು ಎಂಬುದನ್ನು ಪ್ರಕಾಶಕರು ನಿರ್ಧರಿಸುತ್ತಾರೆಯೇ? ಈ ಮಾತನ್ನು ಪ್ರಕಾಶಕರು ಸ್ವಯಂಪ್ರೇರಿತರಾಗಿ ಹೇಳುತ್ತಿದ್ದಾರೆಯೇ ಅಥವಾ ಅವರ ಮೇಲೆ ಯಾರದ್ದಾದರೂ ಒತ್ತಡವಿದೆಯೇ ಎಂಬ ಪ್ರಶ್ನೆಯೂ ಇಲ್ಲಿ ಉದ್ಭವಿಸುತ್ತದೆ” ಎಂದು ಕಮಲ್ ನಾಥ್ ಅವರು ಎಕ್ಸ್ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಸಂದೇಹಾಸ್ಪದ ಸಂದರ್ಭಗಳಲ್ಲಿ” ಪುಸ್ತಕಗಳ ಪ್ರಕಟಣೆಯನ್ನು ತಡೆಯುವುದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎದುರಾಗಿರುವ ಗಂಭೀರ ಬೆದರಿಕೆಯಾಗಿದೆ ಎಂದು ಹೇಳಿದ ಅವರು, ಸೋನಿಯಾ ಗಾಂಧಿ ಅವರ ಆತ್ಮಕಥೆಯನ್ನು ಶೀಘ್ರದಲ್ಲೇ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭೆಯ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಅವರು ಪೆಂಗ್ವಿನ್ ಇಂಡಿಯಾ ಸಂಸ್ಥೆಯ ಹೇಳಿಕೆಯನ್ನು “ದುರ್ಬಲ” ಎಂದು ಬಣ್ಣಿಸಿದ್ದಾರೆ.

“ಪೆಂಗ್ವಿನ್ ಇಂಡಿಯಾ ಸಂಸ್ಥೆಯು ‘ಎಕ್ಸಾಮ್ ವಾರಿಯರ್ಸ್’ ಮತ್ತು ಆರ್‌ಎಸ್‌ಎಸ್ ಕುರಿತಾದ ಹಲವಾರು ಪುಸ್ತಕಗಳನ್ನು ಪ್ರಕಟಿಸಲು ಅತ್ಯಂತ ಸಂತೋಷಪಡುತ್ತದೆ. ಆದರೆ ಭಾರತದ ಜನರು ಈ ಪುಸ್ತಕವನ್ನು ಓದುತ್ತಾರೆ ಎಂಬ ಭಯ ಈಗ ಬಿಜೆಪಿ ಸರ್ಕಾರದಲ್ಲಿರುವ ಕೆಲವರಿಗೆ ಖಂಡಿತವಾಗಿಯೂ ಶುರುವಾಗಿದೆ” ಎಂದು ಗೌರವ್ ಗೊಗೊಯ್ ಅವರು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ಮುಖ್ಯಸ್ಥ ಶ್ರೀನಿವಾಸ್ ಬಿ.ವಿ. ಕೂಡ ಪ್ರಕಾಶನ ಸಂಸ್ಥೆಯನ್ನು ಟೀಕಿಸಿದ್ದು, “ಸಂಪಾದಕೀಯ ಸ್ವಾತಂತ್ರ್ಯ”ದ ಕುರಿತಾದ ಅದರ ಹೇಳಿಕೆಯು ನಂಬಲರ್ಹವಾಗಿಲ್ಲ ಎಂದು ಕರೆದಿದ್ದಾರೆ. ಇದೇ ವೇಳೆ, ಸೇವಾದಳದ ಅಧಿಕೃತ ಎಕ್ಸ್ ಖಾತೆಯು ಪೆಂಗ್ವಿನ್ ಇಂಡಿಯಾವನ್ನು ಪ್ರತ್ಯೇಕವಾಗಿ “ಪಲ್ಟು ಪೆಂಗ್ವಿನ್” ಎಂದು ಸಂಬೋಧಿಸಿದೆ.

“ನಾವು ಆಸಕ್ತಿ ಹೊಂದಿದ್ದೆವು ಎಂದು ನಿಮ್ಮನ್ನು ಯಾರೂ ಕೇಳಿಲ್ಲ. ನಿಮಗೆ ಯಾವ ಬದಲಾವಣೆಗಳು ಬೇಕಾಗಿದ್ದವು ಮತ್ತು ಏಕೆ ಬೇಕಾಗಿದ್ದವು ಎಂಬುದನ್ನು ನಮಗೆ ತಿಳಿಸಿ. ಉಳಿದುದೆಲ್ಲವೂ ಕಾರ್ಪೊರೇಟ್ ವ್ಯಾಕರಣವಷ್ಟೇ” ಎಂದು ಭಾರತೀಯ ಯೂತ್ ಕಾಂಗ್ರೆಸ್ ಪ್ರಕಾಶನ ಸಂಸ್ಥೆಯನ್ನು ಪ್ರಶ್ನಿಸಿ ಪೋಸ್ಟ್ ಮಾಡಿದೆ.

ಯೂತ್ ಕಾಂಗ್ರೆಸ್, ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ “ಇಂಟ್ರೊಡ್ಯೂಸಿಂಗ್ ಪೆಂಗ್ವಿನ್ ಜನತಾ ಪಾರ್ಟಿ” ಮತ್ತು “ಪೆಂಗ್ವಿನ್ ಹೈ ಯಾ ಪಿಂಜರೆ ಕಾ ಪರಿಂದಾ” (ಪೆಂಗ್ವಿನ್ ಸಂಸ್ಥೆಯೋ ಅಥವಾ ಪಂಜರದ ಹಕ್ಕಿಯೋ) ಎಂಬ ಪೋಸ್ಟ್ ಮಾಡುವ ಮೂಲಕ ಪ್ರಕಾಶನ ಸಂಸ್ಥೆಯನ್ನು ಕುಟುಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...