HomeUncategorizedಲೋಕಸಭೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಸೋನಿಯಾಗಾಂಧಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧೆ

ಲೋಕಸಭೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಸೋನಿಯಾಗಾಂಧಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧೆ

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸಿದ್ಧರಾಗಿದ್ದಾರೆ. ಸೋನಿಯಾ ಗಾಂಧಿ ಅವರು ಬೆಳಿಗ್ಗೆ ದೆಹಲಿಯ ನಿವಾಸದಿಂದ ಹೊರಟು 10 ಗಂಟೆಗೆ ಜೈಪುರ ತಲುಪಿದ್ದಾರೆ. ವರದಿಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಆರೋಗ್ಯ ಕಾರಣಗಳಿಂದಾಗಿ ರಾಜ್ಯಸಭೆಗೆ ತೆರಳಲು ನಿರ್ಧರಿಸಿದ್ದು, ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಸೋನಿಯಾ ಗಾಂಧಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿರುವ ಸಾಧ್ಯತೆ ಇದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ನಾಮನಿರ್ದೇಶನಗೊಂಡಿರುವುದನ್ನು ಸ್ವಾಗತಿಸಿದ್ದಾರೆ ಮತ್ತು ಸೋನಿಯಾ ಯಾವಾಗಲೂ ರಾಜಸ್ಥಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ಹುದ್ದೆಯನ್ನು ತ್ಯಜಿಸಿದ್ದ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಗೆಹ್ಲೋಟ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಹಲವು ಬಾರಿ ಭೇಟಿ ಮಾಡಿದ್ದಾರೆ. ಕೆಲವು ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜೊತೆ ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸೋಮವಾರ ಮಲ್ಲಿಕಾರ್ಜುನ ಖರ್ಗೆ, ಮುಕುಲ್ ವಾಸ್ನಿಕ್, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಕೆಸಿ ವೇಣುಗೋಪಾಲ್ ಭಾಗವಹಿಸಿದ್ದ ಪಕ್ಷದ ಮುಖಂಡರ ಉನ್ನತ ಮಟ್ಟದ ಸಭೆಯ ನಂತರ, ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದು ಮೇಲ್ಮನೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ರಾಜಸ್ಥಾನವಲ್ಲದೆ ಕಾಂಗ್ರೆಸ್‌ ಪಕ್ಷವು ಹಿಮಾಚಲ ಪ್ರದೇಶವನ್ನು ಅವರ ಸ್ಪರ್ಧೆಗೆ ಆಯ್ಕೆಯನ್ನು ಹೊಂದಿತ್ತು. ಆದರೆ ಸೋನಿಯಾ ಗಾಂಧಿಯವರು ರಾಜಸ್ಥಾನವನ್ನು ಆಯ್ಕೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

1998 ಮತ್ತು 2022ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1999ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಆಯ್ಕೆಯಾಗಿದ್ದರು ಮತ್ತು ಅಮೇಥಿಯನ್ನು ಉಳಿಸಿಕೊಂಡಿದ್ದರು. 2004ರಲ್ಲಿ ರಾಹುಲ್ ಗಾಂಧಿಗಾಗಿ ಅಮೇಥಿ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು.

ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಮನಮೋಹನ್ ಸಿಂಗ್ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸದಸ್ಯರು ಏಪ್ರಿಲ್‌ನಲ್ಲಿ ನಿವೃತ್ತರಾಗುತ್ತಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳ ಕ್ಷಮದಾನ ರದ್ಧತಿ ವೇಳಿನ ವಿಮರ್ಶಾತ್ಮಕ ಟೀಕೆಯನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಮೊರೆ ಹೋದ ಗುಜರಾತ್‌ ಸರಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read