Homeಮುಖಪುಟಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

- Advertisement -
- Advertisement -

ಗಾಝಾ ಮತ್ತು ಇರಾನ್ ಮೇಲಿನ ಇಸ್ರೇಲ್ ಆಕ್ರಮಣದ ಬಗ್ಗೆ ಭಾರತದ ಮೌನವು “ತನ್ನ ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿಯೂ ಆಗಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.

“ಭಾರತದ ಧ್ವನಿ ಕೇಳಲು ಇನ್ನೂ ತಡವಾಗಿಲ್ಲ” ಎಂಬ ಲೇಖನದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಸೋನಿಯಾ ಗಾಂಧಿ, ಮೋದಿ ಸರ್ಕಾರವು ಇಸ್ರೇಲ್ ಜೊತೆಗೆ ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಕಲ್ಪಿಸಿಕೊಳ್ಳುವ ಶಾಂತಿಯುತ ದ್ವಿರಾಷ್ಟ್ರ ಪರಿಹಾರದ ಕುರಿತು ಭಾರತದ ದೀರ್ಘಕಾಲೀನ ಬದ್ಧತೆಯನ್ನು ಕೈಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ಅಮೆರಿಕದ ಅಂತ್ಯವಿಲ್ಲದ ಯುದ್ಧಗಳ ವಿರುದ್ಧ ಮಾತನಾಡಿದ ಸೋನಿಯಾ ಗಾಂಧಿ, ಪಶ್ಚಿಮ ಏಷ್ಯಾದಲ್ಲಿ ‘ವಿನಾಶಕಾರಿ ಮಾರ್ಗ’ ಅನುಸರಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಲೇಖನದಲ್ಲಿ ಟೀಕಿಸಿದ್ದಾರೆ.

“ಗಾಝಾದಲ್ಲಿನ ವಿನಾಶದ ಬಗ್ಗೆ ಮತ್ತು ಈಗ ಇರಾನ್ ವಿರುದ್ಧದ ಅಪ್ರಚೋದಿತ ದಾಳಿ ಬಗ್ಗೆ ಹೊಸದಿಲ್ಲಿಯ ಮೌನವು ನಮ್ಮ ನೈತಿಕ ಮತ್ತು ರಾಜತಾಂತ್ರಿಕ ಸಂಪ್ರದಾಯಗಳಿಂದ ಕಳವಳಕಾರಿ ನಿರ್ಗಮನವನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಧ್ವನಿಯ ನಷ್ಟ ಮಾತ್ರವಲ್ಲ, ಬದಲಾಗಿ, ಮೌಲ್ಯಗಳ ಶರಣಾಗತಿಯೂ ಹೌದು” ಎಂದು ‘ದಿ ಹಿಂದೂ’ ದಲ್ಲಿನ ತಮ್ಮ ಲೇಖನದಲ್ಲಿ ಸೋನಿಯಾ ಗಾಂಧಿ ಹೇಳಿದ್ದಾರೆ.

“ಇನ್ನೂ ತಡವಾಗಿಲ್ಲ. ಭಾರತವು ಸ್ಪಷ್ಟವಾಗಿ ಮಾತನಾಡಬೇಕು, ಜವಾಬ್ದಾರಿಯುತವಾಗಿ ವರ್ತಿಸಬೇಕು. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಪರಸ್ಪಪರ ಮಾತುಕತೆಗೆ ಮರಳಲು ಉತ್ತೇಜಿಸಲು ಲಭ್ಯವಿರುವ ಪ್ರತಿಯೊಂದು ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ಈ ಮಾನವೀಯ ದುರಂತದ ಸಂದರ್ಭದಲ್ಲಿ, “ನರೇಂದ್ರ ಮೋದಿ ಸರ್ಕಾರವು ಶಾಂತಿಯುತ ದ್ವಿ-ರಾಷ್ಟ್ರ ಪರಿಹಾರದ ಕುರಿತಂತೆ ಭಾರತದ ದೀರ್ಘಕಾಲೀನ ಮತ್ತು ತತ್ವಬದ್ಧ ಬದ್ಧತೆಯನ್ನು ಬಹುತೇಕ ಕೈಬಿಟ್ಟಿದೆ, ದ್ವಿ-ರಾಷ್ಟ್ರ ಪರಿಹಾರವು ಸಾರ್ವಭೌಮ, ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಇಸ್ರೇಲ್ ಜೊತೆ ಪರಸ್ಪರ ಭದ್ರತೆ ಮತ್ತು ಘನತೆಯಿಂದ ಬದುಕುವ ಕಲ್ಪನೆಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಜೂನ್ 13, 2025 ರಂದು, ಇಸ್ರೇಲ್ ಇರಾನ್ ಮತ್ತು ಅದರ ಸಾರ್ವಭೌಮತ್ವದ ವಿರುದ್ಧ ತೊಂದರೆ ಕೊಡುವ ಮತ್ತು ಕಾನೂನುಬಾಹಿರ ದಾಳಿಯನ್ನು ಪ್ರಾರಂಭಿಸಿದ ಬಳಿಕ ಏಕಪಕ್ಷೀಯ ಮಿಲಿಟರಿಸಂನ ಅಪಾಯಕಾರಿ ಪರಿಣಾಮಗಳನ್ನು ಜಗತ್ತು ಮತ್ತೊಮ್ಮೆ ಕಂಡಿದೆ ಎಂದು ಸೋನಿಯಾ ಗಾಂಧಿ ಬೊಟ್ಟು ಮಾಡಿದ್ದಾರೆ.

ಇರಾನ್ ನೆಲದಲ್ಲಿ ನಡೆದ ಈ ಬಾಂಬ್ ದಾಳಿಗಳು ಮತ್ತು ಗುರಿಯಿಟ್ಟು ನಡೆದ ಹತ್ಯೆಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸಿದೆ. ಇದು ಗಂಭೀರ ಪ್ರಾದೇಶಿಕ ಮತ್ತು ಜಾಗತಿಕ ಪರಿಣಾಮಗಳೊಂದಿಗೆ ಅಪಾಯಕಾರಿ ಅಸ್ತಿರತೆಯನ್ನು ಉಂಟು ಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಗಾಝಾದಲ್ಲಿ ಕ್ರೂರ ಆಕ್ರಮಣ ಸೇರಿದಂತೆ ಇಸ್ರೇಲ್‌ನ ಇತ್ತೀಚಿನ ಹಲವು ಕ್ರಮಗಳಂತೆ, ಈ ಕಾರ್ಯಾಚರಣೆಯನ್ನು ನಾಗರಿಕ ಜೀವನ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ನಡೆಸಲಾಗಿದೆ. ಈ ಕ್ರಮಗಳು ಅಸ್ಥಿರತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಮತ್ತಷ್ಟು ಸಂಘರ್ಷದ ಬೀಜಗಳನ್ನು ಬಿತ್ತುತ್ತದೆ” ಎಂದಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಪ್ರಸ್ತುತ ಇಸ್ರೇಲಿ ನಾಯಕತ್ವವು “ಶಾಂತಿಯನ್ನು ದುರ್ಬಲಗೊಳಿಸುವ ಮತ್ತು ಉಗ್ರವಾದವನ್ನು ಪೋಷಿಸುವ ದೀರ್ಘ ಮತ್ತು ದುರದೃಷ್ಟಕರ ದಾಖಲೆಯನ್ನು ಹೊಂದಿದೆ” ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ದಾಖಲೆಯನ್ನು ಗಮನಿಸಿದರೆ, “ನೆತನ್ಯಾಹು ಅವರು ಒಪ್ಪಂದಕ್ಕಿಂತ ಉದ್ವಿಗ್ನತೆಯನ್ನು ಹೆಚ್ಚಿಸಿಕೊಳ್ಳುವುದರಲ್ಲಿ ಆಶ್ಚರ್ಯವೇನಿಲ್ಲ” ಎಂದಿದ್ದಾರೆ.

ಅಮೆರಿಕ ಅಧ್ಯಕ್ಷರನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಜೂನ್ 17 ರಂದು ತನ್ನ ಸ್ವಂತ ಗುಪ್ತಚರ ಮುಖ್ಯಸ್ಥರ ಮೌಲ್ಯಮಾಪನವನ್ನು ತಳ್ಳಿಹಾಕಿ, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳಲು ತುಂಬಾ ಹತ್ತಿರದಲ್ಲಿದೆ ಎಂದು ಟ್ರಂಪ್ ಹೇಳಿರುವುದು ತೀವ್ರ ನಿರಾಶಾದಾಯಕ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಗತ್ತು ನಿರೀಕ್ಷಿಸುತ್ತಿರುವುದು ಮತ್ತು ಜಗತ್ತಿಗೆ ಬೇಕಾಗಿರುವುದು ಸತ್ಯಗಳನ್ನು ಆಧರಿಸಿದ ರಾಜತಾಂತ್ರಿಕತೆಯಿಂದ ದೇಶ ನಡೆಸಲ್ಪಡುವ ನಾಯಕತ್ವ ಆಗಿದೆ. ಅಲ್ಲದೆ, ಬಲವಂತ ಅಥವಾ ಸುಳ್ಳುಗಳಿಂದಲ್ಲ ದೇಶ ನಡೆಸುವವರು ಅಲ್ಲ. ಇರಾನ್ ಭಾರತದ ದೀರ್ಘಕಾಲದ ಸ್ನೇಹಿತನಾಗಿದ್ದು, ದೊಡ್ಡ ಮಟ್ಟದ ನಾಗರಿಕ ಸಂಬಂಧಗಳೊಂದಿಗೆ ಅದು ನಮ್ಮೊಂದಿಗೆ ಇದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಂದರ್ಭಗಳಲ್ಲಿ ಭಾರತಕ್ಕೆ ದೃಢ ಬೆಂಬಲ ನೀಡಿದ ಇತಿಹಾಸ ಇರಾನ್‌ಗೆ ಇದೆ. 1994 ರಲ್ಲಿ, ಕಾಶ್ಮೀರ ವಿಷಯದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಭಾರತವನ್ನು ಟೀಕಿಸುವ ನಿರ್ಣಯವನ್ನು ತಡೆಯಲು ಇರಾನ್ ಸಹಾಯ ಮಾಡಿತ್ತು” ಎಂದು ತಿಳಿಸಿದ್ದಾರೆ.

“ವಾಸ್ತವವಾಗಿ, ಇಸ್ಲಾಮಿಕ್ ಗಣರಾಜ್ಯ ಇರಾನ್ ಭಾರತದೊಂದಿಗೆ ಹೆಚ್ಚು ಸಹಕಾರಿಯಾಗಿದೆ. ಅದರ ಪೂರ್ವವರ್ತಿ ಇರಾನ್ ಸಾಮ್ರಾಜ್ಯಶಾಹಿ ರಾಜ್ಯವು 1965 ಮತ್ತು 1971 ರ ಯುದ್ಧಗಳಲ್ಲಿ ಪಾಕಿಸ್ತಾನದ ಕಡೆಗೆ ವಾಲಿತ್ತು” ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಶಕಗಳಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಸಂಬಂಧಗಳನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, “ಈ ವಿಶಿಷ್ಟ ಸ್ಥಾನವು ನಮ್ಮ ದೇಶಕ್ಕೆ ನೈತಿಕ ಜವಾಬ್ದಾರಿ ಮತ್ತು ರಾಜತಾಂತ್ರಿಕ ಚೌಕಟ್ಟನ್ನು ಒದಗಿಸುತ್ತದೆ. ಇದು ಉದ್ವಿಗ್ನತೆ ಮತ್ತು ಶಾಂತಿಗೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಹೇಳಿದ್ದಾರೆ.

“ಇದು ಕೇವಲ ಅಮೂರ್ತ ತತ್ವವಲ್ಲ. ಲಕ್ಷಾಂತರ ಭಾರತೀಯ ನಾಗರಿಕರು ಪಶ್ಚಿಮ ಏಷ್ಯಾದಾದ್ಯಂತ ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ. ಇದು ಈ ಪ್ರದೇಶದಲ್ಲಿ ಶಾಂತಿಯನ್ನು ಪ್ರಮುಖ ರಾಷ್ಟ್ರೀಯ ಹಿತಾಸಕ್ತಿಯ ವಿಷಯವನ್ನಾಗಿ ಮಾಡುತ್ತದೆ.”

ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....