Homeಮುಖಪುಟರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

- Advertisement -
- Advertisement -

ರಾಜ್ಯಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮುಂಜಾನೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಸೋನಿಯಾ ಗಾಂಧಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಇತರರು ಬರಮಾಡಿಕೊಂಡಿದ್ದರು.

ಈ ಮಧ್ಯೆ ಕಾಂಗ್ರೆಸ್ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜಸ್ಥಾನದಿಂದ ಸೋನಿಯಾ ಗಾಂಧಿ ಅವರನ್ನು ನಾಮನಿರ್ದೇಶನ ಮಾಡಿದೆ. ಬಿಹಾರದಿಂದ ಕಾಂಗ್ರೆಸ್‌ನ ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ನಾಮನಿರ್ದೇಶನಗೊಂಡಿದ್ದಾರೆ.

ರಾಜಸ್ಥಾನದಿಂದ ಕಾಂಗ್ರೆಸ್ ಪಕ್ಷವು ಒಂದು ರಾಜ್ಯಸಭಾ ಸ್ಥಾನದಲ್ಲಿ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಇದೇ ಪ್ರಥಮ ಬಾರಿಗೆ ಅವರು ರಾಜ್ಯಸಭೆಯನ್ನು ಪ್ರವೇಶಿಸಲಿದ್ದಾರೆ. ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸೋನಿಯಾ ಗಾಂಧಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ.

15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಎಪ್ರಿಲ್ ತಿಂಗಳಲ್ಲಿ ನಿವೃತ್ತರಾಗುತ್ತಿದ್ದು, ತೆರವಾಗುತ್ತಿರುವ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಿಗದಿಯಾಗಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.

ರಾಜಸ್ಥಾನದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಒಂದು ಸ್ಥಾನದಲ್ಲಿ ಸುಲಭವಾಗಿ ಗೆಲುವು ಸಾಧಿಸಲಿದೆ. ಮಾಜಿ ಪ್ರಧಾನಿ ಮನೋಹನ್ ಸಿಂಗ್ ಅವರ ಆರು ವರ್ಷಗಳ ಅವಧಿಯು ಎಪ್ರಿಲ್ ತಿಂಗಳಲ್ಲಿ ಮುಕ್ತಾಯವಾಗುತ್ತಿರುವುದರಿಂದ ಅವರ ಸ್ಥಾನ ತೆರವಾಗುತ್ತಿದೆ. ಆಗಸ್ಟ್ 1964ರಿಂದ ಫೆಬ್ರವರಿ 1967ರವರೆಗೆ ಇಂದಿರಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದ ನಂತರ ಗಾಂಧಿ ಕುಟುಂಬದಿಂದ ರಾಜ್ಯಸಭೆಯನ್ನು ಪ್ರವೇಶಿಸುತ್ತಿರುವ ಎರಡನೆ ಸದಸ್ಯೆ ಸೋನಿಯಾ ಗಾಂಧಿಯಾಗಿದ್ದಾರೆ.

1998 ಮತ್ತು 2022ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1999ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಆಯ್ಕೆಯಾಗಿದ್ದರು ಮತ್ತು ಅಮೇಥಿಯನ್ನು ಉಳಿಸಿಕೊಂಡಿದ್ದರು. 2004ರಲ್ಲಿ ರಾಹುಲ್ ಗಾಂಧಿಗಾಗಿ ಅಮೇಥಿ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ನಾಮನಿರ್ದೇಶನಗೊಂಡಿರುವುದನ್ನು ಸ್ವಾಗತಿಸಿದ್ದಾರೆ ಮತ್ತು ಸೋನಿಯಾ ನಿರಂತರವಾಗಿ ರಾಜಸ್ಥಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ಹುದ್ದೆಯನ್ನು ತ್ಯಜಿಸಿದ್ದ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಗೆಹ್ಲೋಟ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಹಲವು ಬಾರಿ ಭೇಟಿ ಮಾಡಿದ್ದಾರೆ. ಕೆಲವು ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜೊತೆ ಭೇಟಿ ಮಾಡಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ದಲಿತ ವರನನ್ನು ಬಲವಂತವಾಗಿ ಕುದುರೆ ಮೇಲಿನಿಂದ ಇಳಿಸಿ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...