Homeಮುಖಪುಟನಾಳೆ ಕಾಂಗ್ರೆಸ್ ಭಿನ್ನಮತೀಯರ ಸಭೆ ನಡೆಸಲಿರುವ ಸೋನಿಯಾ ಗಾಂಧಿ; ರಾಹುಲ್, ಪ್ರಿಯಾಂಕ ಸಾಥ್

ನಾಳೆ ಕಾಂಗ್ರೆಸ್ ಭಿನ್ನಮತೀಯರ ಸಭೆ ನಡೆಸಲಿರುವ ಸೋನಿಯಾ ಗಾಂಧಿ; ರಾಹುಲ್, ಪ್ರಿಯಾಂಕ ಸಾಥ್

ಕಾಂಗ್ರೆಸ್‌ನಲ್ಲಿ ನಾಯಕತ್ವ ಹಾಗೂ ಪಕ್ಷದೊಳಗೆ ಸಾಂಸ್ಥಿಕ ಬದಲಾವಣೆ ಮಾಡಬೇಕು ಎಂದು 23 ಕಾಂಗ್ರೆಸ್ ನಾಯಕರು ಪತ್ರ ಬರೆದಿದ್ದರು.

- Advertisement -
- Advertisement -

ನಾಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಭಿನ್ನಮತಿಯರ ನಡುವೆ ನಡೆಯಲಿರುವ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ. “ಜಿ -23” ಎಂದು ಕರೆಯಲ್ಪಡುವ 23 “ಭಿನ್ನಮತೀಯರ” ಗುಂಪಿನೊಂದಿಗೆ ನಾಳೆ ಸಭೆ ನಡೆಯಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಕಾಂಗ್ರೆಸ್‌ನಲ್ಲಿ ನಾಯಕತ್ವ ಹಾಗೂ ಪಕ್ಷದೊಳಗೆ ಸಾಂಸ್ಥಿಕ ಬದಲಾವಣೆ ಮಾಡಬೇಕು ಎಂದು ಪತ್ರ ಬರೆದಿದ್ದ ನಾಯಕರೊಂದಿಗೆ ನಡೆಯುವ ಗಾಂಧಿ ಕುಟುಂಬದ ಸಭೆಯು ತಿಂಗಳುಗಳಿಂದ ನಡೆಯುತ್ತಿರುವ ಆಂತರಿಕ ಕಚ್ಚಾಟವನ್ನು ಸಾಮರಸ್ಯದೆಡೆಗೆ ಕೊಂಡೊಯ್ಯುಲು ಕೆಲಸ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಆದರೆ ಸಭೆಗೆ ಪತ್ರಕ್ಕೆ ಸಹಿ ಹಾಕದ ಇತರ ನಾಯಕರು ಸಹ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಸಾಂಸ್ಥಿಕ ಚುನಾವಣೆಗೆ ಮುಂಚಿತವಾಗಿ ಸೋನಿಯಾ ಗಾಂಧಿ ವಿವಿಧ ಗುಂಪುಗಳನ್ನು ಭೇಟಿಯಾಗುತ್ತಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸಭೆಗೆ ಸೋನಿಯಾ ಗಾಂಧಿಯನ್ನು ಒಪ್ಪಿಸುವಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್‌ನಲ್ಲಿ ಪಕ್ಷದ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡ ಕಮಲ್ ನಾಥ್, ಇದುವರೆಗೂ ಭಿನ್ನಮತೀಯರಿಂದ ದೂರ ಉಳಿದಿದ್ದರು. ಮೂಲಗಳ ಪ್ರಕಾರ ಅವರು ಈಗ ಭಿನ್ನಮತೀಯರನ್ನು ಬೆಂಬಲಿಸಿದ್ದಾರೆ ಎನ್ನಲಾಗಿದೆ.

2014 ರಲ್ಲಿ ಅಧಿಕಾರ ಕಳೆದುಕೊಂಡಾಗಿನಿಂದ ಪಕ್ಷವು ಹಿನ್ನಡೆ ಅನುಭವಿಸುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಕಾಂಗ್ರೆಸ್‌‌ನ 23 ನಾಯಕರು “ಸಕ್ರಿಯ ಮತ್ತು ಗೋಚರ ನಾಯಕತ್ವ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ”ಗೆ ಕರೆ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಜಿಯೋದಿಂದ ಪೋರ್ಟ್‌ ಆಗುತ್ತಿರುವ ರೈತ, ಕಸ್ಟಮರ್‌ ಕೇರ್‌ ಜೊತೆ ಹೇಳಿದ್ದೇನು? ವಿಡಿಯೋ ನೋಡಿ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...