Homeಮುಖಪುಟಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ಕಳೆದ ಜುಲೈನಲ್ಲಿ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷಕ್ಕೆ ನೂತನ ಅಧ್ಯಕ್ಷರು ಆಯ್ಕೆಯಾಗುವವರೆಗೂ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಕಳೆದ ಜುಲೈನಲ್ಲಿ ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ನಂತರ ಸೋನಿಯಾ ಗಾಂಧಿಯವರು ಹಂಗಾಮಿ ಮುಖ್ಯಸ್ಥರಾಗಿ ಇಂದಿಗೆ ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಶಶಿ ತರೂರ್ ಸೇರಿದಂತೆ ಹಲವರು ಹೊಸ ಅಧ್ಯಕ್ಷರು ಬೇಕೆಂದು ಚರ್ಚೆ ಎತ್ತಿದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸದ್ಯಕ್ಕಂತೂ ಸೋನಿಯಾರವರೆ ಮುಂದುವರೆಯಲಿದ್ದಾರೆ ಎಂದಿದೆ.

1998 ರಿಂದ 2017ರವರೆಗೆ ಹೆಚ್ಚು ಕಡಿಮೆ 20 ವರ್ಷಗಳ ಸುಧೀರ್ಘ ಅವಧಿಗೆ ಸೋನಿಯಾ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿದ್ದರು. ಈ ಅವಯಲ್ಲಿ 2004 ಮತ್ತು 2009 ರಲ್ಲಿ ಯುಪಿಎ ನೇತೃತ್ವ ವಹಿಸಿ ಪಕ್ಷದ ಗೆಲುವಿನಲ್ಲಿ ಮತ್ತು ಕೇಂದ್ರದಲ್ಲಿ ಎರಡು ಭಾರಿ ಪಕ್ಷವು ಅಧಿಕಾರ ಹಿಡಿಯುವಲ್ಲಿ ಶ್ರಮಿಸಿದ್ದರು. ಆದರೆ 2014 ರಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲುಂಡಿತ್ತು.

2017ರ ಡಿಸೆಂಬರ್‌ನಲ್ಲಿ ಅವರ ಪಕ್ಷದ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದು ಅವರ ಮಗ ರಾಹುಲ್ ಗಾಂಧಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಹೊಸ ಹರುಪಿನೊಂದಿಗೆ ಕೆಲಸ ಮಾಡಿದರೂ ಸಹ ಅವರ ನೇತೃತ್ವದಲ್ಲಿ ಕಳೆದ ವರ್ಷ ಮೇ ತಿಂಗಳ ಸಾರ್ವತ್ರಿಕ ಚುನಾವಣೆಯ 543 ಸಂಸದೀಯ ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳಿಗೆ ಕುಸಿದಿತ್ತು. ಸೋಲಿನ ಹೊಣೆ ಹೊತ್ತ ರಾಹುಲ್ ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಮತ್ತೆ ಸೋನಿಯಾ ಗಾಂಧಿಯವರೇ ಹಂಗಾಮಿ ಅಧ್ಯಕ್ಷರಾಗುವ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಪೂರ್ಣಾವಧಿ ಅಧ್ಯಕ್ಷರು ಬೇಕು – ಶಶಿ ತರೂರ್

ಕಾಂಗ್ರೆಸ್‌ ಪಕ್ಷವು ಗೊತ್ತು ಗುರಿಯಿಲ್ಲದ ಹಡಗಿನಂತಾಗಿದೆ ಎಂಬ ಅಭಿಪ್ರಾಯ ಜನರ ಮನಸ್ಸಿನಲ್ಲಿದೆ. ಇದನ್ನು ತೊಡೆದುಹಾಕಲು ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯವಿದೆ ಎಂದು ಸಂಸದ ಶಶಿ ತರೂರ್‌ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾಗಾಂಧಿಯವರು ಆಯ್ಕೆಯಾದಾಗ ಅದನ್ನು ನಾನು ಸ್ವಾಗತಿಸಿದ್ದೆ. ಆದರೆ ನಿರಂತರವಾಗಿ ಅವರ ಮೇಲೆಯೇ ಹೊರೆ ಹಾಕುವುದು ಸರಿಯಲ್ಲ. ರಾಹುಲ್ ಗಾಂಧಿಯವರು ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ಭರವಸೆ ನನಗಿದೆ. ಆದರೆ ಅವರು ಒಪ್ಪದಿದ್ದರೆ ಹೊಸ ಅಧ್ಯಕ್ಷರು ಪಕ್ಷಕ್ಕೆ ಅತ್ಯಗತ್ಯ ಎಂದು ತರೂರ್ ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ನಡೆದ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಸಭಾ ಸಂಸದ ಹಾಗೂ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಸಂವಿಧಾನದಲ್ಲಿ ತಿಳಿಸಿರುವ ಚುನಾವಣಾ ವಿಧಾನವನ್ನು ಅನುಸರಿಸಲು ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದಾರೆ.

“ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದಾರೆ, ಸರಿಯಾದ ಕಾರ್ಯವಿಧಾನವನ್ನು ಜಾರಿಗೆ ತರುವವರೆಗೂ ಅವರೆ ಮುಂದುವರಿಯುತ್ತಾರೆ ಮತ್ತು ಭವಿಷ್ಯದಲ್ಲಿ ಚುನಾವಣಾ ವಿಧಾನವನ್ನು ಜಾರಿಗೆ ತರಲಾಗುವುದು” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಇರುವ ಕಾರಣ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ಪಕ್ಷ ತಿಳಿಸಿದೆ.


ಓದಿ:

ಗಡಿ ಬಿಕ್ಕಟ್ಟಿಗೆ ಕೇಂದ್ರದ ಅಸಮರ್ಪಕ ನೀತಿಗಳೇ ಕಾರಣ – ಸೋನಿಯಾ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...