Homeಮುಖಪುಟಸೋನಿಯಾ, ರಾಹುಲ್‌, ಪ್ರಿಯಾಂಕಾ ರಾಜೀನಾಮೆ ಸಾಧ್ಯತೆ: ಎನ್‌ಡಿಟಿವಿ ವರದಿ

ಸೋನಿಯಾ, ರಾಹುಲ್‌, ಪ್ರಿಯಾಂಕಾ ರಾಜೀನಾಮೆ ಸಾಧ್ಯತೆ: ಎನ್‌ಡಿಟಿವಿ ವರದಿ

- Advertisement -
- Advertisement -

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ತಮ್ಮ ಸ್ಥಾನಗಳಿಗೆ ನಾಳೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಆದರೆ ವರದಿಯನ್ನು ಕಾಂಗ್ರೆಸ್ ಅಲ್ಲಗಳೆದಿದೆ.

ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಭಾನುವಾರ ಕಾರ್ಯಕಾರಿ ಸಮಿತಿ ಸಭೆಯನ್ನು ಸೇರಲಿದೆ. ಸಭೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು ಚರ್ಚೆಗೆ ಗ್ರಾಸವಾಗಿದೆ.

ಎನ್‌ಡಿಟಿವಿ ವರದಿಯನ್ನು ಅಲ್ಲಗಳೆದಿರುವ ಕಾಂಗ್ರೆಸ್ ನಾಯಕ ರಣದೀಪ್‌ ಸಿಂಗ್ ಸರ್ಜೇವಾಲ, “ಈ ರೀತಿಯ ಆಧಾರ ರಹಿತ ಸುದ್ದಿಗಳನ್ನು ಎನ್‌ಡಿಟಿವಿ ಪ್ರಕಟಿಸಿರುವುದು ಸರಿಯಲ್ಲ. ಬಿಜೆಪಿ ಮೂಲಗಳಿಂದ ಬರುವ ಇಂತಹ ಕಾಲ್ಪನಿಕ ವರದಿಗಳನ್ನು ಪ್ರಕಟಿಸುವುದು ಅನ್ಯಾಯವಾಗಿದೆ” ಎಂದು ಟೀಕಿಸಿದ್ದಾರೆ.

ಭಾನುವಾರ ಸಂಜೆ 4 ಗಂಟೆಗೆ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಹಿಂದೆಯೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ರಾಹುಲ್‌ ಅವರು ಲೋಕಸಭಾ ಚುನಾವಣೆಯ ಬಳಿಕ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಸೋನಿಯಾ ಗಾಂಧಿಯವರೇ ಪಕ್ಷದ ಅಧ್ಯಕ್ಷರಾಗಿದ್ದಾರೆ. ಪಂಜಾಬ್‌ನಲ್ಲಿ ಅಧಿಕಾರ ಕಳೆದುಕೊಳ್ಳುವ ಜೊತೆಗೆ ಐದು ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್‌ ತೀವ್ರ ಹಿನ್ನಡೆ ಕಂಡಿದೆ. ಹೀಗಾಗಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕೂಗು ಎದ್ದಿದೆ ಎಂದು ಮೂಲಗಳು ಹೇಳಿವೆ.

ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಪ್ರಚಾರ ನಡೆಸಿದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 403ರಲ್ಲಿ ಕೇವಲ 2 ಸ್ಥಾನಗಳನ್ನು ಪಡೆದುಕೊಂಡಿದೆ. ಕೆಲವು ಭಿನ್ನಮತೀಯರು ನಿನ್ನೆ ಸಂಜೆ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ಮನೆಯಲ್ಲಿ ಸಭೆ ನಡೆಸಿದರು ಹಾಗೂ ಮುಂದಿನ ದಾರಿಯ ಕುರಿತು ಚರ್ಚಿಸಿದರು ಎಂದು ವರದಿಯಾಗಿದೆ.

ಎನ್‌ಡಿಟಿವಿ ಜೊತೆ ಮಾತನಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಗಾಂಧಿ ಕುಟುಂಬವಿಲ್ಲದೆ, ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಉಳಿಯಲು ಸಾಧ್ಯವಿಲ್ಲ. ಅವರು ಕಾಂಗ್ರೆಸ್ ಪಕ್ಷದ ಒಗ್ಗಟ್ಟಿಗೆ ಪ್ರಮುಖರು. ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಉಳಿಯುವುದು ಅಸಾಧ್ಯ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ಓವೈಸಿ ಪಕ್ಷ ಎಸ್‌ಪಿಗೆ ಮುಳುವಾಯಿತೆ? ಬಿಜೆಪಿ ಅತಿ ಕಡಿಮೆ ಅಂತರದಲ್ಲಿ ಗೆದ್ದ ಕ್ಷೇತ್ರಗಳಿವು…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...