ಸೋನು ಸೂದ್‌ಗೆ ಕೊರೊನಾ, ನಿಮ್ಮ ಸಮಸ್ಯೆ ಬಗೆಹರಿಸಲು ಹೆಚ್ಚಿನ ಸಮಯ ಸಿಗಲಿದೆ ಎಂದ ನಟ

ಬಹುಭಾಷಾ ನಟ ಸೋನು ಸೂದ್‌ಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಈ ಕುರಿತು ನಟ ತಮ್ಮ ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ. ಸಾವಿರಾರು ಮಂದಿ ಅವರ ಟ್ವೀಟ್ ರಿಟ್ವೀಟ್ ಮಾಡಿದ್ದಾರೆ, ನೂರಾರು ಜನ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಕಳೆದ ವರ್ಷ ಯೋಜಿತವಲ್ಲದ ಲಾಕ್‌ಡೌನ್‌ನಲ್ಲಿ ತೊಂದರೆಗೊಳಗಾದ ಜನರ ಸಹಾಯಕ್ಕೆ ನಿಂತಿದ್ದ ನಟ ಇಂದಿಗೂ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ.

ಕೊರೊನಾ ಸಂಬಂಧ ಟ್ವೀಟ್ ಮಾಡಿರುವ ನಟ ಸೋನು ಸೂದ್ ” ಇಂದು ಬೆಳಗ್ಗೆ ಬಮದ ಕೊರೊನಾ ಟೆಸ್ಟ್ ವರದಿಯಲ್ಲಿ ಪಾಸಿಟಿವ್ ಬಂದಿದೆ. ತಕ್ಷಣ ನಾನು ಕ್ವಾರಂಟೈನ್ ಆಗಿ, ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನೀವು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ನನಗೀಗ ಹೆಚ್ಚಿನ ಸಮಯ ಸಿಗಲಿದೆ.  ನಿಮ್ಮೊಂದಿಗಿದ್ದೇನೆ ನಾನಿದ್ದೇನೆ ಎಂಬುದನ್ನು ಮರೆಯಬೇಡಿ” ಎಂದಿದ್ದಾರೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

ಕೊರೊನಾ ಪಾಸಿಟಿವ್ ಆಗಿದ್ದರೂ, ಮನಸ್ಸು ಮತ್ತು ಉತ್ಸಾಹ ಸೂಪರ್ ಪಾಸಿಟಿವ್ ಆಗಿದೆ ಎಂದಿದ್ದಾರೆ. ಸೋನು ಸೂದ್ ಅವರನ್ನು ಇತ್ತೀಚೆಗೆ ಪಂಜಾಬಿನ ಕೊರೊನಾ ವ್ಯಾಕ್ಸಿನೇಷನ್ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇಮಿಸಿದ್ದರು. ಸೋನು ಸೂದ್ ಏಪ್ರಿಲ್ 7 ರಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ಸರ್ಕಾರ ಸಹಾಯಕ್ಕೆ ಬರದಿದ್ದರೂ, ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು.

ಕೊರೊನಾದಿಂದ, ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ, ಅಗತ್ಯವಿರುವವರಿಗೆ ಸಹಾಯ ಮಾಡಲು ಸೋನು ಸೂದ್ ಮುಂಬೈನ ಜೂಹು ಪ್ರದೇಶದಲ್ಲಿರುವ ತಮ್ಮ 8 ಸ್ವತ್ತುಗಳನ್ನು ಅಡವಿಟ್ಟು 10 ಕೋಟಿ ರೂಪಾಯಿ ಸಂಗ್ರಹಿಸಿದ್ದರು ಎಂದು ಮನಿ ಕಂಟ್ರೋಲ್ ರಿಪೋರ್ಟ್ ವರದಿ ಮಾಡಿದೆ.

ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟನಿಗೆ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿ ದೊರಕಿದೆ.


ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here