Homeಮುಖಪುಟಶೀಘ್ರವೆ ರಾಜ್ಯತ್ವ ಮರುಸ್ಥಾಪನೆಯ ಭರವಸೆಯಿದೆ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

ಶೀಘ್ರವೆ ರಾಜ್ಯತ್ವ ಮರುಸ್ಥಾಪನೆಯ ಭರವಸೆಯಿದೆ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರದ ಕೇಂದ್ರಾಡಳಿತ ಸ್ಥಾನಮಾನವು ತಾತ್ಕಾಲಿಕ ಹಂತವಾಗಿದ್ದು, ಅದರ ರಾಜ್ಯತ್ವವನ್ನು ಮರುಸ್ಥಾಪಿಸುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸುತ್ತದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಭರವಸೆ ವ್ಯಕ್ತಪಡಿಸಿದ್ದಾರೆ. ಶೀಘ್ರವೆ ರಾಜ್ಯತ್ವ

“ನಾವು ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಕೇಂದ್ರಾಡಳಿತ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಮಗೆ ಸಮಯ ಹಿಡಿಯಿತು. ನಾವು ಈ ಹಿಂದೆ ಕೂಡಾ ಸರ್ಕಾರ ರಚನೆ ಮಾಡಿದ್ದೇವೆ. ಆದರೆ ಅದಕ್ಕೂ ಪ್ರಸ್ತುತ ಕೇಂದ್ರಾಡಳಿತದ ಸ್ವರೂಪಕ್ಕೂ ಅಜಗಜಾಂತರ ವ್ಯತ್ಯಾಸವಿದೆ” ಎಂದು ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಶೀಘ್ರವೆ ರಾಜ್ಯತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ಚುನಾವಣಾ ಭರವಸೆಗಳಿಗೆ ಬದ್ಧರಾಗಿದ್ದೇವೆ. ಕೆಲವು ಭರವಸೆಗಳನ್ನು ಜಾರಿಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಜೊತೆಗೆ ಇತರ ಭರವಸೆಗಳ ಈಡೇರಿಕೆಗಳಿಗಾಗಿ ನಮಗೆ ವ್ಯವಸ್ಥೆಯಲ್ಲಿ ಬದಲಾವಣೆಯ ಅಗತ್ಯವಿದೆ. ಜಮ್ಮು ಕಾಶ್ಮೀರ ಕೇಂದ್ರಾಡಳಿತ ಆಗಿರುವುದು ತಾತ್ಕಾಲಿಕ ಹಂತ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ನಾವು ಈಗ ನೀಡಿದ ಭರವಸೆಗಳನ್ನು ಈಡೇರಿಸಬಹುದೆಂಬ ನಿರೀಕ್ಷೆಯಲ್ಲಿದ್ದೇವೆ. ರಾಜ್ಯದ ಸ್ಥಾನಮಾನದ ಮರುಸ್ಥಾಪನೆ ನಮ್ಮ ಅತಿದೊಡ್ಡ ಭರವಸೆಯಾಗಿದೆ. ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ರಾಜ್ಯ ಸ್ಥಾನಮಾನವನ್ನು ಆದಷ್ಟು ಬೇಗ ಮರುಸ್ಥಾಪಿಸಬೇಕು ಎಂದು ಹೇಳಿದೆ. ಅಂದಿನಿಂದ ಒಂದು ವರ್ಷ ಕಳೆದಿದೆ, ಹಾಗಾಗಿ ಈ ಒಂದು ವರ್ಷ ಅದಕ್ಕೆ ಸಾಕಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಜನರ ಭಾವನೆಗಳನ್ನು ಗೌರವಿಸಬೇಕು ಅವರ ಆಶಯಗಳನ್ನು ಈಡೇರಿಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಇದು ಸಂವಾದವೇ ಹೊರತು, ಪತ್ರಿಕಾಗೋಷ್ಠಿಯಲ್ಲ ಎಂದು ಹೇಳಿದ್ದಾರೆ.

“ಸಾಮಾಜಿಕ ಮಾಧ್ಯಮದ ಊಹಾಪೋಹದಂತೆ ನಾವು ಯಾವುದೇ ದೊಡ್ಡ ಘೋಷಣೆಗಳನ್ನು ಮಾಡುತ್ತಿಲ್ಲ. ನಾವು ಕೇವಲ ಸಂವಾದವನ್ನು ಹೊಂದಲು ಬಯಸಿದ್ದು, ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲು ನಾವು ಪ್ರಯತ್ನಿಸುತ್ತೇವೆ. ವರ್ಷಕ್ಕೆ ಎರಡು ಬಾರಿ ಯಾವುದೇ ಅಜೆಂಡಾ ಇಲ್ಲದೆ ಈ ರೀತಿಯ ಸಂವಾದವನ್ನು ಹೊಂದಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್‌ಐಆರ್

ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...