Homeಮುಖಪುಟ9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟುವಿನಲ್ಲಿರುವ ಕೇಂದ್ರ ಸರ್ಕಾರದ ಅತ್ಯಾಧುನಿಕ ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ (ಐವಿಸಿ) ನಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ಲಸಿಕೆ ತಯಾರಾಗಿಲ್ಲ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಪಡೆದ ಆರ್‌ಟಿಐ ಉತ್ತರದ ಮೂಲಕ ತಿಳಿದು ಬಂದಿದೆ.

2020 ರ ಮಾರ್ಚ್ 28 ರಂದು ಮಧುರೈನ ಆನಂದ್ ರಾಜ್ ಅವರು ಆರ್‌ಟಿಐ ಮೂಲಕ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿರುವ ಎಚ್‌ಎಲ್‌ಎಲ್ ಬಯೋಟೆಕ್ ಲಿಮಿಟೆಡ್ (ಎಚ್‌ಬಿಎಲ್), ಕಾಂಪ್ಲೆಕ್ಸ್‌ನಲ್ಲಿ ಇಲ್ಲಿಯವರೆಗೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ ಎಂದು ಒಪ್ಪಿಕೊಂಡಿದೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಆರ್‌ಟಿಐಗೆ ನೀಡಿರುವ ಉತ್ತರದಲ್ಲಿ, “ವ್ಯಾಕ್ಸಿನ್‌ ಕಾಂಪ್ಲೆಕ್ಸ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನದಲ್ಲಿರುವ ಭಾರತ ಸರ್ಕಾರದ ಉದ್ಯಮವಾದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2012 ರಲ್ಲಿ ಮಂಜೂರಾಗಿದ್ದ 594 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಯಿತು. ಇದರ ಸಿಬ್ಬಂದಿ ಸಾಮರ್ಥ್ಯ 408 ಆಗಿದ್ದು, ಆದರೆ ಇನ್ನೂ ಸುಮಾರು 251 ಹುದ್ದೆಗಳು ಖಾಲಿ ಇವೆ. ಸ್ಥಾಪನೆಯಾದಾಗಿನಿಂದ ಇದುವರೆಗೂ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ” ಎಂದು ಉತ್ತರಿಸಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲು ಮಾಹಿತಿ ಸಂಗ್ರಹಿಸುವಾಗ ಕಳೆದ ಏಪ್ರಿಲ್‌ನಲ್ಲಿ ವರದಿಯನ್ನು ಪಡೆದುಕೊಂಡಿದ್ದೇನೆ. ಆದರೆ ಲಾಕ್‌ಡೌನ್ ಕಾರಣ ಅದನ್ನು ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಆರ್‌ಟಿಐ ಸಲ್ಲಿಸಿದ್ದ ಆನಂದ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ಲಸಿಕೆಗಳನ್ನು ತಯಾರಿಸಲು ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ ಅನ್ನು ಬಳಸಿಕೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಖಾಸಗಿ ಕಂಪೆನಿಗಳ ಹಿತಕ್ಕಾಗಿ ಈ ವ್ಯಾಕ್ಸಿನ್ ಕಾಂಪ್ಲೆಕ್ಸ್‌ ಅನ್ನು ನಿಷ್ಕ್ರಿಯವಾಗಿ ಇರಿಸಲಾಗಿದೆ ಎಂದು ಆರೋಪಿಸಿರುವ ಆನಂದ್‌ ರಾಜ್‌, “ರಾಜ್ಯ ಮಾನವ ಹಕ್ಕುಗಳ ಆಯೋಗ ತಮಿಳುನಾಡು ಮತ್ತು ಮದ್ರಾಸ್ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ತಿರುಪ್ಪೂರು ಸಿಪಿಐ ಸಂಸದ ಕೆ. ಸುಬ್ಬರಾಯಣ್ ಸೇರಿದಂತೆ ಹಲವಾರು ರಾಜಕೀಯ ಪಕ್ಷದ ನಾಯಕರು ಕೂಡ ಇತ್ತೀಚೆಗೆ ಇದೇ ರೀತಿಯ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಎಚ್‌ಬಿಎಲ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್ ‘ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಯಾಗಿದೆ’. ಇದು ದೇಶಕ್ಕೆ ಪರಿಣಾಮಕಾರಿ ವೆಚ್ಚದಲ್ಲಿ ಯುಐಪಿ (ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ) ಲಸಿಕೆಗಳನ್ನು ತಯಾರಿಸಲು ಮತ್ತು ಪೂರೈಸಲು ಹಾಗೂ ಯುನಿಸೆಫ್ ಸೇರಿದಂತೆ ಏಜೆನ್ಸಿಗಳಿಗೆ ರಫ್ತು ಮಾಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...