Homeಕರ್ನಾಟಕಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಸೌಜನ್ಯ ಪ್ರಕರಣದ ವಿಡಿಯೊ | ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ವಿಡಿಯೊ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಅವರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯಾಗಿದ್ದ ಸೌಜನ್ಯ (17) ಅವರನ್ನು ಅಕ್ಟೋಬರ್ 9, 2012 ರಂದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ, 2023 ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು) ಅಡಿಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಈ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿಗೆ ಮಧ್ಯಂತರ ಪರಿಹಾರ ನೀಡಿದ್ದಾರೆ. ಸೌಜನ್ಯ ಪ್ರಕರಣದ ವಿಡಿಯೊ

ಸಮೀರ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ‘ಧೂತ: ಸಮೀರ್ ಎಂಡಿ’ಯಲ್ಲಿ “ಊರಿಗೆ ದೊಡ್ಡವರೆ ಕೊಲೆ ಮಾಡಿದವರಾ; ಧರ್ಮಸ್ಥಳ ಸೌಜನ್ಯ ಪ್ರಕರಣ” ಎಂಬ ಶೀರ್ಷಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ವಿಡಿಯೊದ ಥಂಬ್‌ನೈಲ್‌ನಲ್ಲಿ ಅವರು ”ಧರ್ಮಸ್ಥಳ ಹಾರರ್‌” ಎಂಬ ಪೋಸ್ಟರ್ ಹಾಕಿದ್ದರು. ಈ ವಿಡಿಯೊ ಪ್ರಸ್ತುತ 180 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಈ ವೀಡಿಯೊದಲ್ಲಿ ಅವರು ಧರ್ಮಸ್ಥಳ ಪ್ರದೇಶದಲ್ಲಿ ದಶಕಗಳ ಕಾಲ ನಡೆದ ಹಲವಾರು ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾತನಾಡಿದ್ದರು. ಅದರಲ್ಲೂ ವಿಶೇಷವಾಗಿ 2012 ರ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ, ಸಂತೋಷ್ ರಾವ್ ಅವರನ್ನು ತಪ್ಪಾಗಿ ಬಂಧಿಸಿದ್ದು, ನಂತರದ ಅವರು ಖುಲಾಸೆಗೊಂಡಿದ್ದನ್ನು ಮತ್ತು ಹಲವು ಕಾಣದ ಕೈಗಳು ಕ್ರಿಮಿನಲ್ ತನಿಖೆಗಳಲ್ಲಿ ಪ್ರಭಾವ ಬೀರಿದ ಬಗ್ಗೆ ಮಾತನಾಡಿದ್ದರು.

ಅದಾಗ್ಯೂ, ಈ ವಿಡಿಯೊ ರಾಜ್ಯದಾದ್ಯಂತ ವ್ಯಾಪಕ ಸಂಚಲನ ಮೂಡಿಸಿತ್ತು. ಈ ನಡುವೆ ಮಾರ್ಚ್ 5, 2025 ರಂದು, ಕೌಲ್ ಬಜಾರ್ ಪೊಲೀಸರು ಸಮೀರ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿದ್ದರು. ಸಮೀರ್ ಅವರ ಈ ವೀಡಿಯೊದಲ್ಲಿ ಧರ್ಮಸ್ಥಳ ಮತ್ತು ಅದರ ಧಾರ್ಮಿಕ ನಾಯಕರ ಬಗ್ಗೆ ಜನರಿಗೆ ಇದ್ದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿತ್ತು.

ಸಮೀರ್ ಪರ ವಾದ ಮಂಡಿಸಿದ ವಕೀಲ ಎ. ವೇಲನ್, ಕಾನೂನು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಜೊತೆಗೆ ಈ ಎಫ್‌ಐಆರ್‌ ಸಮೀರ್‌ ಅವರ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 299 ಅಡಿಯಲ್ಲಿ ವ್ಯಾಖ್ಯಾನ ಮಾಡಿದ್ದ ಪೊಲೀಸರ ಕ್ರಮಕ್ಕೆ ಅನುಮತಿ ನೀಡಿದರೆ ಅದು ಅಪಾಯಕಾರಿ ಪೂರ್ವ ನಿದರ್ಶನವಾಗಲಿದೆ ಎಂದು ಎತ್ತಿ ತೋರಿಸಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜ್ಯದ ಕರಾವಳಿ ಪ್ರದೇಶದಲ್ಲಿ ಸೌಜನ್ಯ ಪ್ರಕರಣವು ವ್ಯಾಪಕವಾಗಿ ಚರ್ಚಿಸಲ್ಪಟ್ಟ ಪ್ರಕರಣವಾಗಿತ್ತು. ನೇತ್ರಾವತಿ ನದಿಯ ಬಳಿ ಸೌಜನ್ಯ ಅವರ ಶವ ಪತ್ತೆಯಾಗಿದ್ದು, ಈ ವೇಳೆ ಅವರ ಕೈಗಳನ್ನು ಶಾಲಿನಿಂದ ಮರಕ್ಕೆ ಕಟ್ಟಲಾಗಿತ್ತು.

ಇದರ ನಂತರ ಪೊಲೀಸರು ಸಂತೋಷ್ ರಾವ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದರು. ಆದರೆ ಜೂನ್ 16, 2023 ರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿತ್ತು. ಕಾನೂನು ಪ್ರಕ್ರಿಯೆಗಳ ಉದ್ದಕ್ಕೂ, ಸೌಜನ್ಯ ಅವರ ಕುಟುಂಬವು ಸಂತೋಷ್ ರಾವ್ ಅವರನ್ನು ತಪ್ಪಾಗಿ ಆರೋಪಿಸಲಾಗಿದೆ ಎಂದು ವಾದಿಸಿತ್ತು. ಜೊತೆಗೆ ತನಿಖೆಯಲ್ಲಿನ ನ್ಯೂನತೆಗಳನ್ನು ಆರೋಪಿಸಿ ಧರ್ಮಸ್ಥಳದ ಧಾರ್ಮಿಕ ಮುಖಂಡ ವೀರೇಂದ್ರ ಹೆಗ್ಗಡೆ ನಿಜವಾದ ಅಪರಾಧಿಗಳನ್ನು ರಕ್ಷಿಸಿದ್ದಾರೆ ಎಂದು ಪ್ರತಿಪಾದಿಸಿತ್ತು.

ಸಂತೋಷ್ ರಾವ್ ಅವರು ಖುಲಾಸೆಗೊಂಡ ನಂತರ ಕೂಡಾ ಸಾರ್ವಜನಿಕ ಪ್ರತಿಭಟನೆಗಳು ನಡೆದಿದ್ದವು. ಜೊತೆಗೆ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು ಕರೆಗಳು ಬಂದವು. 11 ವರ್ಷಗಳ ತನಿಖೆಯ ನಂತರ, ಬೆಂಗಳೂರಿನ ನ್ಯಾಯಾಲಯವು 2023 ರಲ್ಲಿ ಪ್ರಕರಣದ ಏಕೈಕ ಆರೋಪಿ ಸಂತೋಷ್ ರಾವ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...