Homeಅಂತರಾಷ್ಟ್ರೀಯವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳದಂತೆ ಹಾರ್ವರ್ಡ್ ವಿವಿಗೆ ನಿರ್ಬಂಧ ವಿಧಿಸಿದ ಟ್ರಂಪ್ ಆಡಳಿತ: ದಕ್ಷಿಣ ಏಷ್ಯಾ ವಿದ್ಯಾರ್ಥಿ...

ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳದಂತೆ ಹಾರ್ವರ್ಡ್ ವಿವಿಗೆ ನಿರ್ಬಂಧ ವಿಧಿಸಿದ ಟ್ರಂಪ್ ಆಡಳಿತ: ದಕ್ಷಿಣ ಏಷ್ಯಾ ವಿದ್ಯಾರ್ಥಿ ಸಂಘ ಖಂಡನೆ

- Advertisement -
- Advertisement -

ಮಹತ್ವದ ಬೆಳವಣಿಗೆಯೊಂದರಲ್ಲಿ, ಟ್ರಂಪ್ ಆಡಳಿತವು ಗುರುವಾರ (ಮೇ.22) ಹಾರ್ವರ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮತ್ತು ವಿನಿಮಯ ಸಂದರ್ಶಕ ಕಾರ್ಯಕ್ರಮ (ಎಸ್‌ಇವಿಪಿ) ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಅಮೆರಿಕದ ಗೃಹ ಭದ್ರತಾ ಇಲಾಖೆಗೆ ಆದೇಶಿಸಿದೆ.

ಇದರರ್ಥ ಹಾರ್ವರ್ಡ್ ಇನ್ನು ಮುಂದೆ ವಿದೇಶಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಪ್ರಸ್ತುತ ಇರುವ ವಿದೇಶಿ ವಿದ್ಯಾರ್ಥಿಗಳು ಬೇರೆಗೆ ಸ್ಥಳಾಂತರ ಆಗಬೇಕು. ಇಲ್ಲದಿದ್ದರೆ ಅವರು ಅಮೆರಿಕದಲ್ಲಿ ಉಳಿದುಕೊಳ್ಳುವ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಟ್ರಂಪ್ ಆಡಳಿತದ ಈ ನಿರ್ಧಾರವನ್ನು ವಿವಿಯ ದಕ್ಷಿಣ ಏಷ್ಯಾದ ವಿದ್ಯಾರ್ಥಿ ಸಂಘ ಬಲವಾಗಿ ಖಂಡಿಸಿದೆ. ಇದು ‘ಅನಗತ್ಯ ನಿರ್ಧಾರ’ ಮತ್ತು ವಿವಿ ಮೇಲಿನ ‘ಘೋರ ದಾಳಿ’ ಎಂದು ಕರೆದಿರುವ ಸಂಘ, ವಿವಿ ಆಡಳಿತ ತನ್ನ ಅಂತಾರಾಷ್ಟ್ರೀಯ ವಿದ್ಯಾರ್ಥಿ ಸಮುದಾಯಕ್ಕೆ ದೃಢವಾದ ಬೆಂಬಲ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದೆ.

ವಿದೇಶಿ ವಿದ್ಯಾರ್ಥಿಗಳು ವಿವಿಗೆ ದಾಖಲಾಗುವುದನ್ನು ತಡೆಯುವುದಲ್ಲದೆ, ಪ್ರಸ್ತುತ ಇರುವ ವಿದ್ಯಾರ್ಥಿಗಳು ಬೇರೆಡೆಗೆ ವರ್ಗಾವಣೆಯಾಗುವಂತೆ ಒತ್ತಾಯಿಸುವ ಬಗ್ಗೆ ಸಂಘ ಕಳವಳ ವ್ಯಕ್ತಪಡಿಸಿದೆ. ಈ ಸಂದಿಗ್ಥ ಪರಿಸ್ಥಿತಿಯಲ್ಲಿ ನಮ್ಮ ದಕ್ಷಿಣ ಏಷ್ಯಾದ ಗೆಳೆಯರು ಮತ್ತು ಇಡೀ ವಿದೇಶಿ ವಿದ್ಯಾರ್ಥಿ ಸಮುದಾಯದೊಂದಿಗೆ ನಾವು ಇದ್ದೇವೆ ಎಂದು ಸಂಘ ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೊಂಡಿದೆ.

ಎಲ್ಲಾ ವಿದೇಶಿ ವಿದ್ಯಾರ್ಥಿಗಳು ನಮ್ಮ ಸಂಘ ಮತ್ತು ಹಾರ್ವರ್ಡ್ ವಿವಿಯ ಅವಿಭಾಜ್ಯ ಅಂಗ ಎಂದು ಸಂಘ ತಿಳಿಸಿದೆ.

1986ರಲ್ಲಿ ಸ್ಥಾಪನೆಯಾದ ದಕ್ಷಿಣ ಏಷ್ಯಾ ವಿದ್ಯಾರ್ಥಿ ಸಂಘ ನೂರಾರು ಸದಸ್ಯರನ್ನು ಹೊಂದಿರುವ ಹಾರ್ವರ್ಡ್ ಕ್ಯಾಂಪಸ್‌ನಲ್ಲಿ ಅತಿದೊಡ್ಡ ಮತ್ತು ಅತ್ಯಂತ ಸಕ್ರಿಯ ವಿದ್ಯಾರ್ಥಿ ಗುಂಪುಗಳಲ್ಲಿ ಒಂದಾಗಿದೆ. ಇದು ಎಲ್ಲಾ ಹಿನ್ನೆಲೆಯ ದಕ್ಷಿಣ ಏಷ್ಯನ್ನರಿಗೆ, ಮುಖ್ಯವಾಗಿ ವಲಸಿಗರು, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗಾಗಿ ಕೆಲಸ ಮಾಡುತ್ತದೆ.

ಪ್ರಸ್ತುತ, ಹಾರ್ವರ್ಡ್ ತನ್ನ ಸಂಸ್ಥೆಗಳಲ್ಲಿ ಪ್ರಪಂಚದ ವಿವಿಧ ಭಾಗಗಳ ಒಟ್ಟು 10,158 ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ನೆಲೆ ಕಲ್ಪಿಸಿದೆ.

ಹಾರ್ವರ್ಡ್ ಅಂತಾರಾಷ್ಟ್ರೀಯ ಕಚೇರಿಯ ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳ ಪ್ರಕಾರ, 2024-25ನೇ ಶೈಕ್ಷಣಿಕ ವರ್ಷದಲ್ಲಿ ಹಾರ್ವರ್ಡ್ ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲಾ ಸಂಸ್ಥೆಗಳಲ್ಲಿ ಭಾರತದ 788 ವಿದ್ಯಾರ್ಥಿಗಳು ಮತ್ತು ಸಂಶೋಧಕರು ಇದ್ದಾರೆ.

ಆಪರೇಷನ್ ಸಿಂಧೂರದ ಭಾಗವಾಗಿದ್ದ ಮಹಿಳಾ ವಿಂಗ್ ಕಮಾಂಡರನ್ನು ತೆಗೆದುಹಾಕದಂತೆ ಸುಪ್ರಿಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...