Homeಮುಖಪುಟದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ: ವಿದ್ಯಾರ್ಥಿಗಳ ಪರ ದನಿಯೆತ್ತಿದ ನಾಲ್ವರು ಅಧ್ಯಾಪಕರ ಅಮಾನತು

- Advertisement -
- Advertisement -

ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯ (SAU)ದಲ್ಲಿ ವಿದ್ಯಾರ್ಥಿಗಳ ಪರ ದನಿಯೆತ್ತಿದ ಏಕೈಕ ಕಾರಣಕ್ಕಾಗಿ ಅವರ ಮೇಲೆ ದುಷ್ಕೃತ್ಯದ ಆರೋಪ ಹೊರಿಸಿ ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ಆಡಳಿತ ಮಂಡಳಿಯ ಈ ಕ್ರಮದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಹಲವು ಅಧ್ಯಾಪಕ ಸಂಘಗಳು ಕೂಡ ಪತ್ರ ಬರೆದಿದ್ದು ಅಮಾನತುಗೊಂಡ ಅಧ್ಯಾಪಕರಿಗೆ ಬೆಂಬಲ ಘೋಷಿಸಿವೆ.

ಜೂನ್ 16, 2023 ರಂದು ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು ವಿಶ್ವವಿದ್ಯಾನಿಲಯದ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪದ ಮೇಲೆ ಸ್ನೇಹಶಿಶ್ ಭಟ್ಟಾಚಾರ್ಯ (ಅರ್ಥಶಾಸ್ತ್ರ ವಿಭಾಗ), ಶ್ರೀನಿವಾಸ್ ಬುರ್ರಾ (ಕಾನೂನು ಅಧ್ಯಯನ ವಿಭಾಗ), ಇರ್ಫಾನುಲ್ಲಾ ಫಾರೂಕಿ (ಸಾಮಾಜಿಕ ವಿಜ್ಞಾನ ವಿಭಾಗ), ಮತ್ತು ರವಿಕುಮಾರ್ (ಸಾಮಾಜಿಕ ವಿಜ್ಞಾನ ವಿಭಾಗ) ಅವರನ್ನು ಅಮಾನತುಗೊಳಿಸಿದೆ.

ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ (SAARC)ದ ವತಿಯಿಂದ ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯವು (SAU) 2010 ರ ಶೈಕ್ಷಣಿಕ ವರ್ಷದಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಶ್ರೀಲಂಕಾ ಮತ್ತು ಪಾಕಿಸ್ತಾನ ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಈ ಹಿಂದೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಭಾಯಿಸುವಲ್ಲಿ ಆಡಳಿತ ಮಂಡಳಿಯ “ನಿರಂಕುಶ ಕ್ರಮಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ ಏಕೈಕ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದು ರಾಜಕೀಯ ಪ್ರತೀಕಾರವಾಗಿದ್ದು, ಶೈಕ್ಷಣಿಕ ಸಂಸ್ಥೆಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಪ್ರಭುತ್ವದ ಹಕ್ಕಿನ ಉಲ್ಲಂಘನೆಯಾಗಿದೆ. ಹಲವು ವರ್ಷಗಳಿಂದ ಸಾರ್ಕ್ ಸಭೆ ರದ್ದಾದ ಕಾರಣ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ರಚನೆಯಾಗದ ಕಾರಣ ಹಾಲಿ ಅಧ್ಯಕ್ಷ, ಉಪಾಧ್ಯಕ್ಷ, ರಿಜಿಸ್ಟ್ರಾರ್ ಸೇರಿದಂತೆ ಪ್ರಾಧ್ಯಾಪಕರ ಕೂಟ ವಿವಿಯನ್ನು ವಿಚಿತ್ರವಾಗಿ ನಡೆಸುತ್ತಿದೆ. ಪ್ರಸ್ತುತ ಅಮಾನತು ಆದೇಶವು ಆಡಳಿತ ಮಂಡಳಿಯ ಸರ್ವಾಧಿಕಾರ ಮತ್ತು ಅನಿಯಂತ್ರಿತ ಕ್ರಮಗಳ ವಿರುದ್ಧ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಮತ್ತು ಪ್ರಾಧ್ಯಾಪಕರನ್ನು ಬೆದರಿಸಿ ಮೌನಗೊಳಿಸುವ ಕುತಂತ್ರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2021 ರಲ್ಲಿ, ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಉತ್ತಮ ಹಾಸ್ಟೆಲ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಸೆಪ್ಟೆಂಬರ್ 2022 ರಲ್ಲಿ, ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿವೇತನವನ್ನು ಹೆಚ್ಚಿಸಬೇಕು ಮತ್ತು ವಿಶ್ವವಿದ್ಯಾಲಯದ ಕೆಲವು ಶಾಸನಬದ್ಧ ಸಮಿತಿಗಳಲ್ಲಿ, ವಿಶೇಷವಾಗಿ ಲಿಂಗ ಸಂವೇದನೆ ಮತ್ತು ಲೈಂಗಿಕ ಕಿರುಕುಳದ ಸಮಿತಿಗಳಲ್ಲಿ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಾತಿನಿಧ್ಯವನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು. ಆಗ ಅಕ್ಟೋಬರ್ 13, 2022 ರ ಸಂಜೆ, ಹಂಗಾಮಿ ಅಧ್ಯಕ್ಷರ ಕಚೇರಿಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ವಿಶ್ವವಿದ್ಯಾಲಯದ ಆಡಳಿತವು ದೆಹಲಿ ಪೊಲೀಸರನ್ನು ಕರೆಸಿತ್ತು. ಈ ಕ್ರಮದ ವಿರುದ್ಧ ಹದಿಮೂರು ಅಧ್ಯಾಪಕರು ವಿಶ್ವವಿದ್ಯಾಲಯದ ಆಡಳಿತಕ್ಕೆ ಪತ್ರ ಬರೆದಿದ್ದರು. ನವೆಂಬರ್ 1, 2022 ರಂದು, ಹಲವಾರು ಅಧ್ಯಾಪಕರು ಹಂಗಾಮಿ ಅಧ್ಯಕ್ಷರು, ಹಂಗಾಮಿ ಉಪಾಧ್ಯಕ್ಷರು ಮತ್ತು ಹಂಗಾಮಿ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಈ ರೀತಿಯ ಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

ಆದರೆ ವಿಶ್ವವಿದ್ಯಾನಿಲಯವು ನವೆಂಬರ್ 4, 2022 ರಂದು 5 ವಿದ್ಯಾರ್ಥಿಗಳನ್ನು ಉಚ್ಚಾಟನೆ ಮಾಡಿತು. ಅವರು ಹಳ್ಳಿಗಾಡಿನ ಬಡ ವಿದ್ಯಾರ್ಥಿಗಳಾಗಿದ್ದರು. ನವೆಂಬರ್ 5 ರಂದು, ವಿಶ್ವವಿದ್ಯಾನಿಲಯದ 15 ಅಧ್ಯಾಪಕರು ವಿಶ್ವವಿದ್ಯಾನಿಲಯದ ಸಮುದಾಯಕ್ಕೆ ಇಮೇಲ್ ಬರೆದು ವಿಶ್ವವಿದ್ಯಾನಿಲಯದ ಆಡಳಿತದ ಈ ಅನಿಯಂತ್ರಿತ ಕ್ರಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸಿದ್ದರು. ಇದೀಗ ವಿಶ್ವವಿದ್ಯಾಲವು ಆ ಪ್ರಾಧ್ಯಪಕರನ್ನೇ ಅಮಾನತು ಮಾಡಿ ಆದೇಶ ಹೊರಡಿಸಿದೆ.

SAU ನ ನಾಲ್ವರು ಅಧ್ಯಾಪಕರ ಅಮಾನತು “ಆಘಾತಕಾರಿ ಕಾನೂನುಬಾಹಿರ ಕ್ರಮ” ಎಂದು ಕರೆದಿರುವ ಕೇಂದ್ರೀಯ ವಿಶ್ವವಿದ್ಯಾಲಯಗಳ ಶಿಕ್ಷಕರ ಸಂಘಗಳ ಒಕ್ಕೂಟ (FEDCUTA) ಈ ಎಲ್ಲಾ ಕಾನೂನುಬಾಹಿರ ಕ್ರಮಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಆಡಳಿತವನ್ನು ಒತ್ತಾಯಿಸಿದೆ.

ದಕ್ಷಿಣ ಏಷ್ಯಾ ವಿಶ್ವವಿದ್ಯಾನಿಲಯದ ಆಡಳಿತವು ನಾಲ್ವರು ಅಧ್ಯಾಪಕರನ್ನು ಅಮಾನತುಗೊಳಿಸಿರುವುದನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶಿಕ್ಷಕರ ಸಂಘ (ಜೆಎನ್‌ಯುಟಿಎ) ತೀವ್ರವಾಗಿ ಖಂಡಿಸಿದೆ. ಆಡಳಿತದ ಅನಿಯಂತ್ರಿತ ಮತ್ತು ನಿರಂಕುಶ ಕ್ರಮಗಳ ವಿರುದ್ಧ ಧ್ವನಿ ಎತ್ತುವ ಶಿಕ್ಷಕ ಸಮುದಾಯದವರಲ್ಲಿ ಭಯ ಹುಟ್ಟಿಸುವ ಮತ್ತು ಭಯವನ್ನು ಹರಡುವ ಪ್ರಯತ್ನವನ್ನು ಇದು ಸ್ವೀಕಾರಾರ್ಹವಲ್ಲ ಎಂದು ಅದು ಕಿಡಿಕಾರಿದೆ.

ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...