Homeಮುಖಪುಟಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : 'ತುರ್ತು ಮಿಲಿಟರಿ ಆಡಳಿತ' ವಾಪಸ್

ಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : ‘ತುರ್ತು ಮಿಲಿಟರಿ ಆಡಳಿತ’ ವಾಪಸ್

- Advertisement -
- Advertisement -

ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದೇಶದ ಮೇಲೆ ಹೇರಿದ್ದ ‘ತುರ್ತು ಮಿಲಿಟರಿ ಆಡಳಿತ’ವನ್ನು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ನೇತೃತ್ವದ ಸರ್ಕಾರ ಬುಧವಾರ (ಡಿ.4) ನಸುಕಿನಲ್ಲಿ ಹಿಂಪಡೆದಿದೆ.

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಇದರಿಂದ ಬೆದರಿದ ಸರ್ಕಾರ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಮಂಗಳವಾರ (ಡಿ.3) ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದ್ದರು. ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಅಧ್ಯಕ್ಷರು ಮಣಿದಿದ್ದಾರೆ.

ದೇಶದ ವಿರೋಧ ಪಕ್ಷಗಳು ಸಂಸತ್‌ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿದ್ದ ಅಧ್ಯಕ್ಷ ಸುಕ್‌ ಯೋಲ್‌ ಅವರು, ಮಂಗಳವಾರದಿಂದಲೇ ‘ತುರ್ತು ಮಿಲಿಟರಿ ಆಡಳಿತ’ವನ್ನು ಜಾರಿಗೊಳಿಸಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ಹೇಳಿದ್ದರು.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಮಿಲಿಟರಿ ಆಡಳಿತ ಘೋಷಣೆ ಬಳಿಕ ಏನಾಯಿತು?

ಮಂಗಳವಾರ ರಾತ್ರಿ ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತ್ತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು ಸಂಸದರು ಅಸೆಂಬ್ಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ದ. ಕೊರಿಯಾ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಪ್ರತಿಭಟನೆ ನಡೆಸಿದ ಜನರು

ಬಳಿಕ ಆಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಹಿಂಪಡೆದರು. ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಹೋಗುವ ಸಂಭವವಿದೆ. ಯೋಲ್ ಅವರ ವಾಗ್ದಂಡನೆಗೆ ಮಾಡಲು ಸಂಸತ್ತಿನ 3ನೇ 2ರಷ್ಟು ಬೆಂಬಲ ಬೇಕಾಗುತ್ತದೆ ಮತ್ತು 9 ಸದಸ್ಯರ ಸಾಂವಿಧಾನಿಕ ನ್ಯಾಯಾಲಯದಲ್ಲಿ ಕನಿಷ್ಠ 6 ನ್ಯಾಯಮೂರ್ತಿಗಳು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅದನ್ನು ಬೆಂಬಲಿಸಬೇಕಾಗುತ್ತದೆ. ಪ್ರಮುಖ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಮತ್ತು 5 ಸಣ್ಣ ವಿರೋಧ ಪಕ್ಷಗಳು ವಾಗ್ದಂಡನೆ ಗೊತ್ತುವಳಿ ಸಲ್ಲಿಸಿವೆ.

ಈ ನಡುವೆ, ಯೋಲ್ ಅವರ ಬೆಂಬಲಿಗರು ಹಾಗೂ ಹಲವು ಸಚಿವರು ಪದಚ್ಯುತಿ ಭೀತಿಯಿಂದಾಗಿ ಬುಧವಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಯೋಲ್ ಮಾತ್ರ ಮೌನವಾಗಿದ್ದಾರೆ. ಒಂದು ವೇಳೆ ಯೋಲ್ ಪದಚ್ಯುತಿ ಆದರೆ ಹಾಲಿ ಪ್ರಧಾನಿ ಹಾನ್ ಡಕ್ ಸೂ ಮುಂದಿನ ಅಧ್ಯಕ್ಷರಾಗಲಿದ್ದಾರೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಧ್ಯಕ್ಷ ಯೋಲ್ ಸ್ವೀಕರಿಸಿದ್ದು, ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ನೇಮಿಸಿದ್ದಾರೆ.

ಇದನ್ನೂ ಓದಿ : ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...