Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....