Homeಕರ್ನಾಟಕಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯಾಳ ತಂದೆ, ಧರ್ಮಸ್ಥಳ ನಿವಾಸಿ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇಂದು (ಆ.30) ವಜಾಗೊಳಿಸಿದೆ ಎಂದು ವರದಿಯಾಗಿದೆ.

ಇದರ ಜೊತೆಗೆ ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಮತ್ತು ಆರೋಪಿ ಸಂತೋಷ್ ರಾವ್ ಅಕ್ರಮ ಬಂಧನಕ್ಕೆ ಪರಿಹಾರ ಕೋರಿದ್ದ ಅರ್ಜಿ ಕೂಡಾ ವಜಾ ಆಗಿದೆ ಎಂದು ತಿಳಿದು ಬಂದಿದೆ.

ಮೂರೂ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರ ಹೈಕೋರ್ಟ್ ಪೀಠ ಇಂದು ಪ್ರಕಟಿಸಿದೆ.

2012ರ ಅ.9ರಂದು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್‌ ರಾವ್‌ ಎಂಬಾತನನ್ನು ಬಂಧಿಸಿದ್ದರು. ನಂತರ ಪ್ರಕರಣವನ್ನು ಸಿಐಡಿ ತನಿಖೆ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂತೋಷ್‌ ರಾವ್‌ ನಿರಪರಾಧಿ, ಆತನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ ಎಂದು 2023ರ ಜೂನ್‌ 16ರಂದು ಸೆಷನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಆರೋಪಿಯ ಪಾತ್ರವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದೆ. ಸೂಕ್ತ ಸಮಯದಲ್ಲಿ ತನಿಖೆ ನಡೆಸಿಲ್ಲ ಎಂದು ಹೇಳಿತ್ತು. ಹಾಗಾಗಿ, ಇಡೀ ತನಿಖೆ ನ್ಯಾಯೋಚಿತವಾಗಿ ನಡೆದಿಲ್ಲ ಎಂದು ಮರುತನಿಖೆಗೆ ಆಗ್ರಹಿಸಿ ಕೋರ್ಟ್‌ ಮೊರೆ ಹೋಗಲಾಗಿತ್ತು.

ಇದನ್ನೂ ಓದಿ : ಪೋಕ್ಸೋ ಪ್ರಕರಣ : ಯಡಿಯೂರಪ್ಪ ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...