ಕೊರೊನಾ ಸಾಂಕ್ರಾಮಿಕ ರೋಗ ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರನ್ನು ಬಲಿಪಡೆದಿದೆ. ಇಡೀ ದೇಶವೇ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕಂಬನಿ ಮಿಡಿದಿದೆ. ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ, 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿರುವ ಈ ಗಾನ ಗಂಧರ್ವನ ಅಗಲಿಕೆಗೆ ಸಿನಿ ದಿಗ್ಗಜರು, ರಾಜಕಾರಣಿಗಳು ಸೇರಿ ವಯಸ್ಸಿನ ಭೇದವಿಲ್ಲದೇ ಜನ ಸಾಮಾನ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇರಳ ಸಿಎಂ ಪಿಣರಾಯಿ ವಿಜಯನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ, ಸದಾನಂದ ಗೌಡ, ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿ.ಕೆ.ಶಿವಕುಮಾರ್‌, ಡಾ,ಸುಧಾಕರ್‌ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಸಂಗೀತ ನಿರ್ದೇಶಕರಾದ ಹಂಸಲೇಖ, ಎ.ಆರ್.ರೆಹಮಾನ್, ಅರ್ಜುನ್ ಜನ್ಯ, ಗುರುಕಿರಣ್,  ಗಾಯಕರಾದ ಶ್ರೇಯಾ ಘೋಷಾಲ್, ರಾಜೇಶ್ ಕೃಷ್ಣನ್, ಸಂಗೀತಾ ಕಟ್ಟಿ, ನಿರ್ದೇಶಕ ಎಸ್.ಎಸ್.ರಾಜಮೌಳಿ,  ನಟರಾದ ರಜನಿಕಾಂತ್, ಅನಿಲ್ ಕಪೂರ್‌, ಸಲ್ಮಾನ್ ಖಾನ್, ಕಮಲ್ ಹಾಸನ್, ಅಜಿತ್ ಕುಮಾರ್‌, ಮಹೇಶ್ ಬಾಬು, ನಿತೀನ್,  ಪುನೀತ್ ರಾಜ್‌ಕುಮಾರ್‌, ಕಿಚ್ಚ ಸುದೀಪ್, ದರ್ಶನ್ ತೂಗುದೀಪ, ರಿತೇಷ್ ದೇಶ್‌ಮುಖ್, ರಾಮ್‌ಚರಣ್, ಜ್ಯೂ.ಎನ್‌ಟಿಆರ್‌,  ನಟಿಯರಾದ ಪ್ರಿಯಾಮಣಿ, ಸಂಯುಕ್ತಾ ಹೊರನಾಡು,ಕ್ರಿಕೆಟಿಗ ಗೌತಮ್ ಗಂಭೀರ್, ಅನಿಲ್ ಕುಂಬ್ಳೆ‌ ಸೇರಿ ಹಲವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

 

ಗಾನ ಗಂಧರ್ವನ ಅಗಲಿಕೆಯಿಂದ ಈಡಿ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.


ಇದನ್ನೂ ಓದಿ: ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ!

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts

LEAVE A REPLY

Please enter your comment!
Please enter your name here