Homeಮುಖಪುಟಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ...

ಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ ಘೋಷಣೆ

- Advertisement -
- Advertisement -

ಸಂಭಾಲ್: ಇತ್ತೀಚಿಗೆ ಶಾಹಿ ಜಾಮಾ ಮಸೀದಿ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು  ಸಮಾಜವಾದಿ ಪಕ್ಷದ (ಎಸ್‌ಪಿ) ಹನ್ನೊಂದು ಸದಸ್ಯರ ನಿಯೋಗವು ಸೋಮವಾರ ಸಂಭಾಲ್‌ಗೆ ಭೇಟಿ ನೀಡಿತು. ನಿಯೋಗವು ನೊಂದ ಕುಟುಂಬಗಳಿಗೆ ಸಂತಾಪ ಸೂಚಿಸಿ, ಚೆಕ್ ರೂಪದಲ್ಲಿ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಿತು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು, ಈ ಸರಕಾರವು ಮುಸ್ಲಿಂ ಸಮುದಾಯದ ಬಗ್ಗೆ ಸಂವೇದನಾಶೀಲತೆ ಹೊಂದಿಲ್ಲ. ಅದು ಮುಸ್ಲಿಮರ ಬಗ್ಗೆ ಅದಕ್ಕೆ ಸಹಾನುಭೂತಿ ಇಲ್ಲ. ರಾಜಕೀಯ ಲಾಭಕ್ಕಾಗಿ ಹಿಂದೂ-ಮುಸ್ಲಿಂರ ನಡುವೆ ದ್ವೇಷವನ್ನು ಬೆಳೆಸುವುದು, ಕೋಮುವಾದದಲ್ಲಿ ಜನರನ್ನು ವಿಭಜಿಸುವುದು ಅದರ ಅಜೆಂಡಾವಾಗಿದೆ ಎಂದು  ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು

ಸಂಭಾಲ್ ಶಾಹಿ ಜಾಮಾ ಮಸೀದಿ ಬಳಿ ಪೊಲೀಸ್ ಪೋಸ್ಟ್ ನಿರ್ಮಾಣಕ್ಕೂ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ ತನಿಖೆಯಾಗಲಿ, ಸೂಕ್ತ ಪರಿಹಾರ ನೀಡದೇ ಖಾಸಗಿ ಜಮೀನು ಒತ್ತುವರಿ ಮಾಡಿಕೊಂಡಿರುವ ಆಡಳಿತದ ಕಾನೂನುಬದ್ಧತೆ ಏನು ಎಂದು ಪ್ರಶ್ನಿಸಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಅಡಿಯಲ್ಲಿ ಮಸೀದಿಯ ಪಾರಂಪರಿಕ ಸ್ಥಾನಮಾನವನ್ನು ಸರ್ವೆಯ ಮೂಲಕ ಸಮೀಕ್ಷೆ ನಡೆಸುವ ಕಾನೂನುಬದ್ಧತೆಯನ್ನು ಅವರು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಚುನಾವಣಾ ದುರುಪಯೋಗದ ಬಗ್ಗೆ ಆರೋಪಿಸಿರುವ ಪಾಂಡೆ ಅವರು, ನವೆಂಬರ್ 20 ರಂದು ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಬೆದರಿಸುವ ಪುರಾವೆಗಳಿವೆ ಎಂದು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಮತದಾರರಿಗೆ ಬೆದರಿಕೆ ಹಾಕಲು ಮತ್ತು ಮತದಾನ ಮಾಡದಂತೆ ಅವರನ್ನು ನಿರುತ್ಸಾಹಗೊಳಿಸಲು ಬಳಸಲಾಗುತ್ತಿತ್ತು. ಈ ಹೇಳಿಕೆಯನ್ನು ಸಾಬೀತುಪಡಿಸಲು ನನ್ನ ಬಳಿ ಮತದಾನದ ದಿನದ ದಾಖಲೆಗಳಿವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯವರ ತವರು ಗೋರಖ್‌ಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದವರಾಗಿದ್ದರೂ, ನಗರವು ದೈನಂದಿನ ಗುಂಡಿನ ಸಪ್ಪಳದ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ನಿರುದ್ಯೋಗ ಮತ್ತು ಹಣದುಬ್ಬರ ಅನಿಯಂತ್ರಿತವಾಗಿ ಏರುತ್ತಿದೆ. ಈ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರವು ಸುಳ್ಳು ಪ್ರಚಾರದ ಮೂಲಕ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವಲ್ಲಿ ನಿರತವಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮಾತನಾಡಿ,  ಪೊಲೀಸರು ಆಧಾರರಹಿತ ಊಹೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಪೊಲೀಸರು ಜನರ ಬಳಿ ಬಂದೂಕುಗಳಿವೆ ಎಂದು ಯಾವ ಪುರಾವೆಗಳ ಆಧಾರದ ಮೇಲೆ ಕಂಡುಕೊಂಡಿದ್ದಾರೆ? ಹಿಂಸಾಚಾರವನ್ನು ಪ್ರಚೋದಿಸುವುದು ನಮ್ಮ ಉದ್ದೇಶವಾಗಿದ್ದರೆ, ಸಮೀಕ್ಷೆಯ ಮೊದಲ ದಿನ ಏಕೆ ಗಲಭೆಗಳು ಸಂಭವಿಸಲಿಲ್ಲ? ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗ ವಿಶ್ವಾಸವಿದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಅವರು ಹೇಳಿದರು.

ತನ್ನ ಧ್ವನಿಯನ್ನು ಹತ್ತಿಕ್ಕಲು ತನ್ನ ವಿರುದ್ಧ ವಿದ್ಯುತ್ ಕಳ್ಳತನದ ಸುಳ್ಳು ಪ್ರಕರಣವನ್ನು ದಾಖಲಿಸಿ, ತನ್ನನ್ನು ವೈಯಕ್ತಿಕವಾಗಿ ಗುರಿ ಮಾಡಲಾಗುತ್ತಿದೆ ಎಂದು ಬಾರ್ಕ್ ಆರೋಪಿಸಿದ್ದಾರೆ.

ನಿಯೋಗದಲ್ಲಿದ್ದ ಮತ್ತೊಬ್ಬ ಎಸ್‌ಪಿ ನಾಯಕ ಲಾಲ್ ಬಿಹಾರಿ ಯಾದವ್ ಮಾತನಾಡಿದರು. ಅವರು ಹಿಂಸಾಚಾರವನ್ನು ಪೊಲೀಸರು ನಿಭಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಾರೆ. “ಪೊಲೀಸರು ತಮಗೆ ಇಷ್ಟ ಬಂದಂತೆ ಜನರಿಗೆ ಕಿರುಕುಳ ನೀಡಿದ್ದಾರೆ. ಸಂಭಾಲ್ ಹಿಂಸಾಚಾರದ ಐದು ಬಲಿಪಶುಗಳ ಹತ್ಯೆಗೆ ಸಂಬಂಧಿಸಿ ಪೊಲೀಸರು ಏಕೆ ಪ್ರಕರಣವನ್ನು ದಾಖಲಿಸಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಯಾದವ್ ಅವರು ಸ್ಥಳೀಯ ಮುಸ್ಲಿಂ ಸಮುದಾಯದ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದು, “ಜನರು ಎಸೆದ ಇಟ್ಟಿಗೆಗಳು ಮತ್ತು ಕಲ್ಲುಗಳು ಆತ್ಮರಕ್ಷಣೆಯ ಕೃತ್ಯಗಳಾಗಿವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಭಾಲ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಎಸ್‌ಪಿ ನಿಯೋಗವು ಈ ಭೇಟಿ ನೀಡಿದೆ. ಸಂಭಾಲ್‌ನಲ್ಲಿ ನವೆಂಬರ್ 24ರಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ತಂಡವು ಮೊಘಲರ ಕಾಲದ ಮಸೀದಿಯನ್ನು ಸಮೀಕ್ಷೆ ನಡೆಸಲು ಬಂದಾಗ ಹಿಂಸಾಚಾರ ಸ್ಫೋಟಗೊಂಡಿತು. ಈ ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 50 ಮಂದಿಯನ್ನು ಬಂಧಿಸಲಾಗಿದೆ.

ಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ...

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...