Homeಅಂತರಾಷ್ಟ್ರೀಯಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

- Advertisement -
- Advertisement -

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ ಹಿಂದೆ ನೀಡಿದ್ದ ನಿರಾಕರಣೆಗಿಂತ ಇದು ಒಂದು ಹೆಜ್ಜೆ ಮುಂದಿನ ಕ್ರಮ ಎಂದಿದ್ದಾರೆ.

ಇರಾನ್ ವಿರುದ್ಧದ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಕ್ರಮಗಳಿಗಾಗಿ ಮಿಲಿಟರಿ ನೆಲೆಗಳ ಬಳಕೆಯನ್ನಾಗಲಿ ಅಥವಾ ವಾಯುಪ್ರದೇಶದ ಬಳಕೆಯನ್ನಾಗಲಿ ನಾವು ಅನುಮತಿಸುವುದಿಲ್ಲ ಎಂದು ರೋಬಲ್ಸ್ ಮ್ಯಾಡ್ರಿಡ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್ ಸೋಮವಾರ ಮಿಲಿಟರಿ ಮೂಲಗಳನ್ನು ಉಲ್ಲೇಖಿಸಿ ಈ ಸುದ್ದಿಯನ್ನು ಮೊದಲು ವರದಿ ಮಾಡಿತ್ತು.

ವಾಯುಪ್ರದೇಶದ ಈ ನಿರ್ಬಂಧದಿಂದಾಗಿ, ಮಧ್ಯಪ್ರಾಚ್ಯದ ಗುರಿಗಳತ್ತ ಸಾಗುವ ಮಿಲಿಟರಿ ವಿಮಾನಗಳು ನ್ಯಾಟೋ ಸದಸ್ಯ ರಾಷ್ಟ್ರವಾದ ಸ್ಪೇನ್ ಅನ್ನು ಬಳಸಲಾಗದೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗುತ್ತದೆ. ಆದರೆ, ಇದು ತುರ್ತು ಪರಿಸ್ಥಿತಿಗಳನ್ನು ಒಳಗೊಂಡಿರುವುದಿಲ್ಲ ಎಂದು ‘ಎಲ್ ಪೈಸ್’ ವರದಿ ಹೇಳಿದೆ.

ಏಕಪಕ್ಷೀಯವಾಗಿ ಮತ್ತು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿ ಆರಂಭಿಸಲಾದ ಯುದ್ಧದಲ್ಲಿ ಭಾಗವಹಿಸದಿರಲು ಅಥವಾ ಬೆಂಬಲ ನೀಡದಿರಲು ಸ್ಪೇನ್ ಸರ್ಕಾರ ಈಗಾಗಲೇ ಕೈಗೊಂಡಿರುವ ನಿರ್ಧಾರದ ಭಾಗವಾಗಿ ವಾಯು ಪ್ರದೇಶ ಮುಚ್ಚಲಾಗಿದೆ ಎಂದು ಸ್ಪೇನ್ ಆರ್ಥಿಕ ಸಚಿವ ಕಾರ್ಲೋಸ್ ಕ್ಯೂರ್ಪೋ ರೇಡಿಯೊ ಕೆಡೆನಾ ಸೆರ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಸ್ಪೇನ್‌ನ ಈ ವಾಯುಪ್ರದೇಶ ನಿರ್ಬಂಧದ ನಿರ್ಧಾರವು ಅಮೆರಿಕದೊಂದಿಗಿನ ಸಂಬಂಧವನ್ನು ಹದಗೆಡಿಸಬಹುದೇ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಈ ದಾಳಿಗಳನ್ನು ಅವರು ‘ಬೇಜವಾಬ್ದಾರಿಯುತ ಮತ್ತು ಕಾನೂನುಬಾಹಿರ’ ಎಂದು ಬಣ್ಣಿಸಿದ್ದಾರೆ.

ಯುದ್ಧದಲ್ಲಿ ಅಮೆರಿಕಕ್ಕೆ ತನ್ನ ಸೇನಾ ನೆಲೆಗಳನ್ನು ಬಳಸಲು ಅವಕಾಶ ನೀಡದ ಕಾರಣಕ್ಕೆ ಮ್ಯಾಡ್ರಿಡ್ (ಸ್ಪೇನ್ ಸರ್ಕಾರ) ಜೊತೆಗಿನ ವ್ಯಾಪಾರ ಸಂಬಂಧವನ್ನು ಕಡಿತಗೊಳಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...