Homeಮುಖಪುಟಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ: ರಾಜಸ್ಥಾನ ಬಿಕ್ಕಟ್ಟಿನ ಕುರಿತು ರಾಹುಲ್ ಗಾಂಧಿ

ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ: ರಾಜಸ್ಥಾನ ಬಿಕ್ಕಟ್ಟಿನ ಕುರಿತು ರಾಹುಲ್ ಗಾಂಧಿ

ಅಶೋಕ್ ಗೆಹ್ಲೋಟ್ ಸರ್ಕಾರವು ಉಳಿಯಲು ಹೆಣಗಾಡುತ್ತಿರುವ ಪರಿಸ್ಥಿತಿ ಕುರಿತು ಕಾಂಗ್ರೆಸ್ ಸೋಮವಾರ ದೇಶಾದ್ಯಂತ ಪ್ರತಿಭಟನೆ ನಡೆಸಲು ಯೋಜಿಸುತ್ತಿದೆ.

- Advertisement -
- Advertisement -

ರಾಜಸ್ಥಾನದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಜನರನ್ನು ಸಜ್ಜುಗೊಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ವಿಡಿಯೋ ಒಂದನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ #SpeakUpForDemocracy (ಪ್ರಜಾಪ್ರಭುತ್ವಕ್ಕಾಗಿ ಮಾತನಾಡಿ) ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಅಶೋಕ್ ಗೆಹ್ಲೋಟ್ ಸರ್ಕಾರವು ಉಳಿಯಲು ಹೆಣಗಾಡುತ್ತಿರುವ ಪರಿಸ್ಥಿತಿ ಕುರಿತು ಕಾಂಗ್ರೆಸ್ ಸೋಮವಾರ ದೇಶಾದ್ಯಂತ ಪ್ರತಿಭಟನೆ ನಡೆಸಲು ಯೋಜಿಸುತ್ತಿದೆ. ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರ ಅಧಿಕೃತ ನಿವಾಸ ಮತ್ತು ಅಧ್ಯಕ್ಷ ಭವನದ ಹೊರಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.

ಇಡೀ ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವಾಗ ಬಿಜೆಪಿಯು “ಸಂವಿಧಾನವನ್ನು ಉರುಳಿಸಿದೆ ಮತ್ತು ಪ್ರಜಾಪ್ರಭುತ್ವವನ್ನು ಕೆಡವಿದೆ” ಎಂದು ವೀಡಿಯೊದಲ್ಲಿ ಕಾಂಗ್ರೆಸ್ ಆರೋಪಿಸಿದೆ.

ಮಧ್ಯಪ್ರದೇಶದಲ್ಲೂ ಬಿಜೆಪಿ ಇದೇ ರೀತಿ ಮಾಡಿದೆ ಎಂದು ಹೇಳಿರುವ ಅವರು, “ನಮ್ಮ ಸಾಂವಿಧಾನಿಕ ಹಕ್ಕುಗಳಲ್ಲಿರುವ ವಿಧಾನಸಭೆ ಅಧಿವೇಶನವನ್ನು ತಕ್ಷಣವೇ ಕರೆಯಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ವೀಡಿಯೊದಲ್ಲಿ ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನ ಆರಂಭಿಸುವ ಪ್ರಸ್ತಾಪವನ್ನು ರಾಜಸ್ಥಾನ ರಾಜ್ಯಪಾಲ ಕಾಳ್‌ರಾಜ್ ಮಿಶ್ರಾ ತಿರಸ್ಕರಿಸಿದ್ದಾರೆ. ಎರಡನೆಯ ಪ್ರಸ್ತಾವವನ್ನು ಇಂದು ಸಲ್ಲಿಸಲಾಯಿತು. ಅದನ್ನು ಅವರು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು.

ಸಚಿನ್ ಪೈಲಟ್ ಬಣ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದ್ದು, ಸ್ಪೀಕರ್ ತೆಗೆದುಕೊಂಡಿರುವ ನಿರ್ಧಾರಗಳಿಗೆ ನ್ಯಾಯಾಲಯ ಹಸ್ತಕ್ಷೇಪ ಮಾಡಬಹುದೇ ಎಂದು ಸಹ ನಿರ್ಧರಿಸುತ್ತದೆ.


ಇದನ್ನೂ ಓದಿ: ಜುಲೈ 31ರಿಂದ ವಿಧಾನಸಭೆ ಅಧಿವೇಶನ ನಡೆಸಿ: ರಾಜ್ಯಪಾಲರಿಗೆ ಹೊಸ ಪ್ರಸ್ತಾಪ ಕಳುಹಿಸಿದ ಗೆಹ್ಲೋಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

0
ಲೋಕಸಭೆ ಚುನಾವಣೆಗೆ "ದೇವರು ಮತ್ತು ಪೂಜಾ ಸ್ಥಳಗಳ" ಹೆಸರಿನಲ್ಲಿ ಮತ ಕೇಳುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ...