Homeಕರ್ನಾಟಕ"ವಿಷ ಕಾರದೆ ಮಾತನಾಡಿ": ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

- Advertisement -
- Advertisement -

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ ‘ನಿಯಂತ್ರಣ ಕಾಯ್ದುಕೊಳ್ಳುವಂತೆ’ ಮಂಗಳವಾರ (ಜೂ. 2) ಹೈಕೋರ್ಟ್ ಸೂಚಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ 2025ರ ಅಕ್ಟೋಬರ್‌ನಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರಭಾಕರ್ ಭಟ್ ಅವರು ಮಾಡಿದ ಭಾಷಣದ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿತು.

ವಿಚಾರಣೆಯ ವೇಳೆ, ದೂರುದಾರೆ ಕರ್ನಾಟಕ ರಾಜ್ಯ ದಲಿತ ಹಕ್ಕುಗಳ ರಾಜ್ಯ ಸಮಿತಿಯ ಸದಸ್ಯೆ ಈಶ್ವರಿ ಪದ್ಮುಂಜ ಅವರು ವಾದ ಮಂಡಿಸಿ, ಅರ್ಜಿದಾರರು ‘ಬೆಳಗ್ಗೆ ಎದ್ದು ಮೈಕ್ ಹಿಡಿದು ಕೇವಲ ವಿಷ ಉಗುಳುತ್ತಾರೆ’ ಮತ್ತು ಅವರು ಮುಸ್ಲಿಮರ ವಿರುದ್ಧ ಹಲವು ಸಂದರ್ಭಗಳಲ್ಲಿ ಪದೇ ಪದೇ ಮಾತನಾಡಿದ್ದಾರೆ ಎಂದು ತಿಳಿಸಿದರು. ಅಲ್ಲದೆ, ಅರ್ಜಿದಾರರು ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಲು ನ್ಯಾಯಾಲಯದ ನಿರ್ದೇಶನವನ್ನು ಕೋರಿದರು.

ಈ ಹಂತದಲ್ಲಿ, ನ್ಯಾಯಾಲಯವು ಅರ್ಜಿದಾರರಿಗೆ ನಿಯಂತ್ರಣ ಕಾಯ್ದುಕೊಳ್ಳುವಂತೆ ಸಲಹೆ ನೀಡಿತು ಮತ್ತು “ವಿಷ ಕಾರದೆ, ನೀವು ಮಾತನಾಡಿ… ಪದೇ ಪದೇ ದೂರುಗಳು ದಾಖಲಾಗಲು ಯಾಕೆ ಅವಕಾಶ ನೀಡುತ್ತೀರಿ? ಆದರೆ, ಈ ವಿಷಯಕ್ಕೆ ನಾವು ಕಾನೂನಾತ್ಮಕವಾಗಿ ಉತ್ತರಿಸುತ್ತೇವೆ” ಎಂದಿತು.

ದೂರುದಾರರ ಆರೋಪದ ಪ್ರಕಾರ, ಆರೋಪಿಯು ಮುಸ್ಲಿಂ ಸಮುದಾಯದ ಜನನ ದರವನ್ನು ಹಿಂದೂ ಸಮುದಾಯದ ಜನನ ದರದೊಂದಿಗೆ ಹೋಲಿಸಿದ್ದರು ಮತ್ತು ‘ಮಹಾಲಿಂಗೇಶ್ವರ ಸ್ವಾಮಿ’ಗಾಗಿ ಹಿಂದೂಗಳ ಜನಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಹೇಳಿದ್ದರು. ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಿರುವುದನ್ನು ಪ್ರಸ್ತಾಪಿಸಿದ್ದರು ಮತ್ತು ‘ಪ್ರತಿಯೊಂದು ಹಿಂದೂ ಕುಟುಂಬದಲ್ಲಿ ಕನಿಷ್ಠ ಮೂರು ಮಕ್ಕಳನ್ನು’ ಹೊಂದುವಂತೆ ಅಲ್ಲಿದ್ದ ಜನಸಮೂಹಕ್ಕೆ ಕರೆ ನೀಡಿದ್ದರು.

ಈ ಹೇಳಿಕೆಗಳು ಎರಡೂ ಸಮುದಾಯಗಳ ಮಹಿಳೆಯರ ಘನತೆಗೆ ಧಕ್ಕೆ ತಂದಿವೆ, ಧಾರ್ಮಿಕ ದ್ವೇಷವನ್ನು ಉತ್ತೇಜಿಸಿವೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತಂದಿವೆ ಎಂದು ದೂರುದಾರರು ಆರೋಪಿಸಿದ್ದರು.

ಪ್ರಭಾಕರ ಭಟ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 3(5), 79, 196, 299 ಮತ್ತು 302 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಂಬಂಧಿತ ಇತರ ಅರ್ಜಿಗಳೊಂದಿಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಜೂನ್ 16ಕ್ಕೆ ನಿಗದಿಪಡಿಸಿದೆ.

ಪ್ರಭಾಕರ ಭಟ್ ಇಂತಹ ದ್ವೇಷಪೂರಿತ ಭಾಷಣಗಳನ್ನು ಮುಂದುವರಿಸದಂತೆ ಮಧ್ಯಂತರ ನಿರ್ದೇಶನ ನೀಡಬೇಕೆಂದು ದೂರುದಾರರು ಕೋರಿದಾಗ, ಆರೋಪಿಯು ಈಗಾಗಲೇ ತಾವು ಇದನ್ನು ಪುನರಾವರ್ತಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ನ್ಯಾಯಾಲಯ ತಿಳಿಸಿತು.

ಇದಕ್ಕೂ ಮುನ್ನ, ಇದೇ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಹೈಕೋರ್ಟ್ ವಿವಾದಾತ್ಮಕ ಭಾಷಣದ ಸಂಪೂರ್ಣ ಪ್ರತಿಲೇಖನವನ್ನು (ಟ್ರಾನ್ಸ್‌ಸ್ಕ್ರಿಪ್ಟ್) ಪಡೆದುಕೊಂಡಿತ್ತು ಮತ್ತು ಪ್ರಭಾಕರ ಭಟ್ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಆದೇಶಿಸಿತ್ತು; ಈ ಆದೇಶವನ್ನು ಇಂದಿನವರೆಗೂ ವಿಸ್ತರಿಸಿಕೊಂಡು ಬರಲಾಗಿದೆ.

ಪ್ರಭಾಕರ ಭಟ್ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಮತ್ತು ಎರಡನೇ ಪ್ರತಿವಾದಿ (ದೂರುದಾರರ) ಪರವಾಗಿ ವಕೀಲರಾದ ಬಾಲಕೃಷ್ಣ ಅವರು ಹಾಜರಾಗಿದ್ದರು.












ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...