HomeUncategorizedಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

ಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

- Advertisement -
- Advertisement -

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಮಂಡಿಸಿದ ಹಕ್ಕುಚ್ಯುತಿ ಪ್ರಸ್ತಾಪವನ್ನು ವಿಧಾನಮಂಡಲದ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಬೆಳ್ತಂಗಡಿಯ ಅರಣ್ಯಾಧಿಕಾರಿಗಳಿಂದ ನನಗೆ ಹಕ್ಕು ಚ್ಯುತಿಯಾಗಿದೆ ಎಂದು ಆರೋಪಿಸಿದ ಶಾಸಕ ಹರೀಶ್ ಪೂಂಜಾ, ಮಂಗಳವಾರ ವಿಧಾನಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಂಡಿಸಲು ಅವಕಾಶ ಕೋರಿದರು. ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸಿದರು.

ಬೆಳ್ತಂಗಡಿ ಅರಣ್ಯಾಧಿಕಾರಿಗಳು ಶಾಸಕ ಹರೀಶ್ ಪೂಂಜಾ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಅರಣ್ಯಾಧಿಕಾರಿಗಳನ್ನು ಅಮಾನತು ಮಾಡಬೇಕು. ಶಾಸಕರ ರಕ್ಷಣೆ ನಿಮ್ಮ ಜವಾಬ್ದಾರಿ. ಶಾಸಕರಿಂದ ಹಕ್ಕುಚ್ಯುತಿ ಪಡೆದುಕೊಂಡು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್‌ಗೆ ಆಗ್ರಹಿಸಿದರು.

ಬಿಜೆಪಿ ಶಾಸಕರ ಒತ್ತಾಯಕ್ಕೆ ಮಣಿದ ಸ್ಪೀಕರ್ ಖಾದರ್, ಹಕ್ಕುಚ್ಯುತಿ ಮಂಡನೆಗೆ ಹರೀಶ್ ಪೂಂಜಾ ಅವರಿಗೆ ಅನುಮತಿ ನೀಡಿದರು. ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯ ಮೂವರು ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

ಹಕ್ಕುಚ್ಯುತಿ ಮಂಡನೆಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮೀಸಲು ಅರಣ್ಯವನ್ನು ಅತಿಕ್ರಮಿಸಿ ಕೃಷಿ ಮಾಡಿದ್ದಕ್ಕೆ ದೂರು ದಾಖಲಾಗಿದೆ. ಅತಿಕ್ರಮಣ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾದಾಗ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ನಾನು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದಾಗ ಅತಿಕ್ರಮಣದ ಬಗ್ಗೆ ತಿಳಿಸಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ತರಿಸುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ್ದೆ. ನನ್ನ ಕಾಲ್ ರೆಕಾರ್ಡ್‌ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದೀರಿ. ಇದು ಸರಿಯಾದ ಕ್ರಮವಲ್ಲ ಎಂದರು.

ಈಶ್ವರ್ ಖಂಡ್ರೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಸುನೀಲ್ ಕುಮಾರ್, ಹಕ್ಕುಚ್ಯುತಿ ಬಗ್ಗೆ ಸಚಿವರು ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದರು. ಈ ವೇಳೆ ಸಚಿವ ಖಂಡ್ರೆ ಬೆಂಬಲಕ್ಕೆ ಬಂದ ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವರು ಪ್ರಕರಣದ ಬಗ್ಗೆ ಸದನಕ್ಕೆ ಮಾಹಿತಿ ನೀಡುತ್ತಿದ್ದಾರೆ ಎಂದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಪ್ರಕರಣದ ಹಿನ್ನೆಲೆ :

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಅವರು ಮೀಸಲು ಅರಣ್ಯದ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅ.6 ರಂದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸಿದ್ದರು.

ಈ ವಿಚಾರ ತಿಳಿದು ಶಾಸಕ ಹರೀಶ್ ಪೂಂಜಾ ಅ.7ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಕುರಿತ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಅರಣ್ಯ ಇಲಾಖೆ ಜಾಗವನ್ನು ಒತ್ತುವರಿ ನಡೆಸಿದವರು ಹಾಗೂ ಅದಕ್ಕೆ ಸಹಕರಿಸಿದ 11 ಜನರ ವಿರುದ್ಧ ಅ. 7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.

ಅ. 9 ರಂದು ಮತ್ತೆ ಮೇಲಧಿಕಾರಿಗಳ ಆದೇಶದಂತೆ ಎಸಿಎಫ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ.ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಲೋಲಾಕ್ಷ ಅವರ ಮನೆಯ ಶೆಡ್ ತೆರವಿಗೆ ಮುಂದಾಗಿದ್ದರು. ಈ ವೇಳೆ ಹರೀಶ್ ಪೂಂಜಾ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ತೆರಳಿ ಲೋಲಾಕ್ಷ ಅವರ ಮನೆ ತೆರವು ಮಾಡದಂತೆ ನೋಡಿಕೊಂಡಿದ್ದರು.

ಈ ವೇಳೆ ಅರಣ್ಯಾಧಿಕಾರಿ ಮತ್ತು ಹರೀಶ್ ಪೂಂಜಾ ನಡುವೆ ವಾಗ್ವಾದ ನಡೆದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅಸಂಸದೀಯ ಪದ ಬಳಸಿ ಬೈದಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಬಿಜೆಪಿ-ಕಾಂಗ್ರೆಸ್‌ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು. ಈ ಸಂಬಂಧ ಅರಣ್ಯಾಧಿಕಾರಿ ಅ.13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ : ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...