Homeಮುಖಪುಟನಾನಾ ಪಟೋಲೆ ಸ್ಪೀಕರ್‌ ಆಗಿ ಅವಿರೋಧ ಆಯ್ಕೆ: ವಿಪಕ್ಷ ನಾಯಕನಾಗಿ ದೇವೇಂದ್ರ ಫಡ್ನವಿಸ್‌

ನಾನಾ ಪಟೋಲೆ ಸ್ಪೀಕರ್‌ ಆಗಿ ಅವಿರೋಧ ಆಯ್ಕೆ: ವಿಪಕ್ಷ ನಾಯಕನಾಗಿ ದೇವೇಂದ್ರ ಫಡ್ನವಿಸ್‌

- Advertisement -
- Advertisement -

ಬಿಜೆಪಿಯ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ರವರು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ.

ಸದನದಲ್ಲಿ ಹೊಸದಾಗಿ ನೇಮಕಗೊಂಡ ಸ್ಪೀಕರ್ ನಾನಾ ಪಟೋಲೆ ಈ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಶಿವಸೇನೆಯ ಹಿರಿಯ ನಾಯಕರು, ಎನ್‌ಸಿಪಿ ಮತ್ತು ಕಾಂಗ್ರೆಸ್ ಮುಖಂಡರು ಫಡ್ನವೀಸ್ ಅವರನ್ನು ಅಭಿನಂದಿಸಿದ್ದಾರೆ.

49 ವರ್ಷದ ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂರು ದಿನಗಳ ನಂತರ ಅಗತ್ಯ ಬಹುಮತವಿಲ್ಲದ ಕಾರಣದಿಂದ ಮಂಗಳವಾರ ರಾಜೀನಾಮೆ ನೀಡಿದ್ದರು.

ಇದಕ್ಕೂ ಮೊದಲು ಕಾಂಗ್ರೆಸ್‌ನ ಹಿರಿಯ ಶಾಸಕರಾದ ಪಟೋಲ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿ ಕಿಸಾನ್ ಕ್ಯಾಥೋರ್ ನಾಮಪತ್ರ ಹಿಂತೆಗೆದುಕೊಂಡ ನಂತರ ಪಟೋಲೆ ಅವಿರೋಧವಾಗಿ ಆಯ್ಕೆಯಾದರು. ಪಟೋಲ್ ನಾಲ್ಕು ಬಾರಿ ಶಾಸಕರಾಗಿದ್ದು, ವಿದರ್ಭದ ಸಕೋಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಉದ್ಧವ್ ಠಾಕ್ರೆ ಮತ್ತು ಕೆಲವು ಹಿರಿಯ ಶಾಸಕರು 57 ವರ್ಷದ ಪಟೋಲ್ ಅವರನ್ನು ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಶಾಸಕ ಮತ್ತು ರೈತ ನಾಯಕನಾಗಿ ಪಟೋಲೆ ಅವರ ಕೆಲಸವನ್ನು ಠಾಕ್ರೆ ಮತ್ತು ಫಡ್ನಾವಿಸ್ ಶ್ಲಾಘಿಸಿದರು. “ಒಬ್ಬ ರೈತನ ಮಗ ಈ ಹುದ್ದೆಯನ್ನು ಅಲಂಕರಿಸಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಸಿಎಂ ಠಾಕ್ರೆ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...