HomeUncategorizedವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ವಿಧಾನಸಭೆ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಭಾಷಣ!: ಬಹಿಷ್ಕಾರದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ವಿಧಾನ ಮಂಡಲ ಉಭಯ ಸಧನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರು ಅಧಿವೇಶನ ಕೊನೆಯ ದಿನವಾದ ಶುಕ್ರವಾರ(ಇಂದು)ದಂದು ಭಾಷಣ ಮಾಡಲಿದ್ದರೆ. ಇದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು,ಇದು ಸಂಸದೀಯ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ.

ಈ ಬಗ್ಗೆ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌‌, ‘ಸಂಸದೀಯ ವ್ಯವಸ್ಥೆಯ ಪ್ರಕಾರ ವಿಧಾನಸಭೆಯಲ್ಲಿ ಸದಸ್ಯರು, ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆಯವರು ಸಭೆ ನಡೆಸಿ, ಭಾಷಣ ಮಾಡಲು ಅವಕಾಶವಿಲ್ಲ. ಆದರೆ ರಾಜ್ಯ ಬಿಜೆಪಿ ಸರ್ಕಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ ಸಭೆ ಮಾಡುತ್ತಿರುವುದನ್ನು ನಾವು ಬಹಿಷ್ಕರಿಸುತ್ತಿದ್ದೇವೆ. ಅನೇಕ ಇತಿಹಾಸ ಇರುವ ನಮ್ಮ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಕೆಟ್ಟ ಪದ್ಧತಿ ಸೃಷ್ಟಿಸಲು ಹೊರಟಿದೆ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ: ಭದ್ರತೆ ಸುಧಾರಿಸಲು ಲೋಕಸಭೆಯ ಸ್ಪೀಕರ್‌ಗೆ ಪತ್ರ

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ, ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರೆಸಿ, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಸೇರಿಸಿ ವಿಧಾನಸಭೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಕಾರ ಹೇಳಿದೆ. ಈ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಧ್ಯಕ್ಷರು ಭಾಷಣ ಮಾಡಲಿದ್ದಾರೆ.

ಅಧಿವೇಶನದ ಕೊನೆಯ ವಿಧಾನ ಮಂಡಲ ಕಲಾಪ ಲೈವ್ ನೋಡಿ

“ಸಂಸದೀಯ ವ್ಯವಸ್ಥೆಯಲ್ಲಿ ಉಭಯ ಸದನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಆದರೂ ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ. ಸಂಸದೀಯ ವ್ಯವಹಾರಗಳ ಸಲಹಾ ಸಮಿತಿಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ, ನಮ್ಮ ಶಾಸಕಾಂಗ ಪಕ್ಷದ ನಾಯಕರೂ ಆದ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ” ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: NEET ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ; ಕಾರಣಗಳೇನು?

“ಈ ಕಾರ್ಯಕ್ರಮ ವಿಚಾರವಾಗಿ ಸರ್ಕಾರ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿಲ್ಲ. ಆದರೂ ಆಹ್ವಾನ ಪತ್ರಿಕೆ ಹಂಚುತ್ತಿದ್ದಾರೆ. ಈ ಸಭೆ ಮೂಲಕ ನಿಮ್ಮ ಸರ್ಕಾರದ ಅವಧಿಯಲ್ಲಿ ಸಂಸದೀಯ ಮೌಲ್ಯ ಕುಸಿಯುತ್ತಿದೆ ಎಂದು ನೀವು ಒಪ್ಪಿಕೊಳ್ಳುತ್ತಿದ್ದೀರಿ. ಈ ಕಾರ್ಯಕ್ರಮ ನಡೆಸುವುದಾದರೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಡಿ, ನಮ್ಮ ಅಭ್ಯಂತರವಿಲ್ಲ. ಆಹ್ವಾನ ಕೊಟ್ಟರೆ ನಾವೂ ಬರುತ್ತೇವೆ ಎಂದು ನಾವು ಸಲಹೆ ನೀಡಿದ್ದೆವು. ಸರ್ಕಾರ ಇದನ್ನು ಒಪ್ಪದೇ, ವಿಧಾನಸಭೆಯಲ್ಲಿ ಮಾಡುತ್ತೇವೆ ಎಂದು ಪಟ್ಟು ಹಿಡಿದಿದೆ” ಎಂದು ಅವರು ಹೇಳಿದ್ದಾರೆ.

“ವಿಧಾನಸಭೆಯಲ್ಲಿ ಈ ಕಾರ್ಯಕ್ರಮ ಮಾಡುತ್ತಿರುವ ಬಗ್ಗೆ ನಮ್ಮ ಪಕ್ಷ ಚರ್ಚೆ ಮಾಡಿದೆ. ಈ ರೀತಿಯ ಕೆಟ್ಟ ಪದ್ಧತಿ ಆರಂಭಿಸುತ್ತಿರುವುದನ್ನು ವಿರೋಧಿಸಿ ಈ ಕಾರ್ಯಕ್ರಮ ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ. ವಿಧಾನಸಭೆಯನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಅವರಿಗೆ ಗೌರವಯುತವಾಗಿ ಮನವಿ ಮಾಡಿದರೂ ಸ್ಪಂದಿಸದೆ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

“ಆ ಸ್ಥಾನದಲ್ಲಿ ಕೂತು ಮಾತನಾಡಲು ರಾಜ್ಯಪಾಲರು, ರಾಷ್ಟ್ರಪತಿಗೆ ಮಾತ್ರವೇ ಅವಕಾಶವಿದ್ದು, ಬೇರೆಯವರು ಕೂರಲು ಅರ್ಹರಲ್ಲ. ಹೀಗಾಗಿ ನಾವು ಈ ಕಾರ್ಯಕ್ರಮವನ್ನು ಬಹಿಷ್ಕಾರ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...