Homeಅಂತರಾಷ್ಟ್ರೀಯಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

- Advertisement -
- Advertisement -

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆಹ್ವಾನಿಸಿದೆ. ಆದರೆ, ಪ್ರಧಾನಿ ಫೆಬ್ರವರಿ 17 ರಂದು ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಕಾರಣ ಭಾಗವಹಿಸುತ್ತಿಲ್ಲ. ಅವರ ಬದಲಾಗಿ ಓಂ ಬಿರ್ಲಾ ಢಾಕಾಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

“ನವ ದೆಹಲಿಯು (ಭಾರತ) ಢಾಕಾದೊಂದಿಗೆ (ಬಾಂಗ್ಲಾದೇಶ) ಹೊಂದಿರುವ ಸಂಬಂಧಕ್ಕೆ ನೀಡುವ ಮಹತ್ವವನ್ನು ಓಂ ಬಿರ್ಲಾ ಅವರ ಉಪಸ್ಥಿತಿಯು ಒತ್ತಿಹೇಳುತ್ತದೆ. ಇದು ಉಭಯ ರಾಷ್ಟ್ರಗಳ ನಡುವಿನ ಹಂಚಿಕೆಯ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಪಾಕಿಸ್ತಾನ ಪ್ರಧಾನಿ ಶೆಹಬಾಝ್ ಷರೀಫ್ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಆಡಳಿತವು ಭಾರತ, ಚೀನಾ, ಸೌದಿ ಅರೇಬಿಯಾ, ತುರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಮಲೇಷ್ಯಾ, ಬ್ರೂನೈ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಭೂತಾನ್ ಸೇರಿದಂತೆ 13 ದೇಶಗಳ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದೆ.

ಇತ್ತೀಚೆಗೆ ನಡೆದ ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ತಾರಿಖ್ ರೆಹಮಾನ್ ಅವರ ಬಿಎನ್‌ಪಿ ಒಟ್ಟು 297 ಸ್ಥಾನಗಳ ಪೈಕಿ 209 ಸ್ಥಾನಗಳನ್ನು ಗೆಲ್ಲುವ ಮೂಲಕ ಸುಮಾರು ಎರಡು ದಶಕಗಳ ನಂತರ ಮತ್ತೆ ಅಧಿಕಾರಕ್ಕೇರಲು ಸಜ್ಜಾಗಿದೆ. ಬಲಪಂಥೀಯ ಜಮಾತ್-ಎ-ಇಸ್ಲಾಮಿ ಪಕ್ಷವು 68 ಸ್ಥಾನಗಳನ್ನು ಪಡೆದುಕೊಂಡಿದೆ. ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಶೇಕಡ 59.44 ರಷ್ಟು ಮತದಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...