Homeಮುಖಪುಟಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

- Advertisement -
- Advertisement -

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಹೊಂದಿರುವ ಈ ಸಮಿತಿಯ ಅಧ್ಯಕ್ಷತೆಯನ್ನು ಹಿರಿಯ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ವಹಿಸಲಿದ್ದಾರೆ.

ಬಿಜೆಪಿಯಿಂದ ಬ್ರಿಜ್‌ಮೋಹನ್ ಅಗರ್ವಾಲ್, ತ್ರಿವೇಂದ್ರ ಸಿಂಗ್ ರಾವತ್, ಜಗದಾಂಬಿಕಾ ಪಾಲ್, ಜಗದೀಶ್ ಶೆಟ್ಟರ್, ರಾಮ್‌ವೀರ್ ಸಿಂಗ್ ಬಿಧೂರಿ ಮತ್ತು ಸಂಗೀತ ಸಿಂಗ್ ದೇವ್, ಕಾಂಗ್ರೆಸ್‌ನಿಂದ ತಾರಿಕ್ ಅನ್ವರ್, ಮನೀಶ್ ತಿವಾರಿ ಮತ್ತು ಮಾಣಿಕ್ಕಂ ಟ್ಯಾಗೋರ್, ಡಿಎಂಕೆ ಟಿ.ಆರ್. ಬಾಲು, ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ, ಶಿವಸೇನೆಯ ಶ್ರೀರಂಗ್ ಅಪ್ಪ ಚಂದು ಬಾರ್ನೆ, ಶಿವಸೇನೆ-ಯುಬಿಟಿಯ ಅರವಿಂದ್ ಗಣಪತ್ ಸಾವಂತ್ ಮತ್ತು ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ಸಮಿತಿಗೆ ನಾಮನಿರ್ದೇಶನಗೊಂಡ ಸದಸ್ಯರು.

ಸಮಿತಿಯು ಮಂಗಳವಾರದಿಂದ ಜಾರಿಗೆ ಬಂದಿದೆ. ಸಂಸದೀಯ ಹಕ್ಕುಬಾಧ್ಯತೆಗಳ ಮೂಲ ಉದ್ದೇಶವೆಂದರೆ ಸಂಸತ್ತಿನ ಸ್ವಾತಂತ್ರ್ಯ, ಅಧಿಕಾರ ಮತ್ತು ಘನತೆಯನ್ನು ರಕ್ಷಿಸುವುದಾಗಿದೆ.

ಸಂಸತ್ತಿನ ಪ್ರತಿಯೊಬ್ಬ ಸದಸ್ಯರೂ ಯಾವುದೇ ಅಡೆತಡೆಗಳಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಹಕ್ಕುಬಾಧ್ಯತೆಗಳನ್ನು ಹೊಂದಿರುತ್ತಾರೆ. ಈ ಸಮಿತಿಯು ಪ್ರತಿ ಪ್ರಕರಣದ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ, ಅಲ್ಲಿ ಹಕ್ಕುಚ್ಯುತಿಯಾಗಿದೆಯೇ ಎಂಬುದನ್ನು ನಿರ್ಧರಿಸುತ್ತದೆ ಮತ್ತು ತನ್ನ ವರದಿಯಲ್ಲಿ ಸೂಕ್ತ ಶಿಫಾರಸುಗಳನ್ನು ಮಾಡುತ್ತದೆ.

ಹದಿನೆಂಟನೇ ಲೋಕಸಭೆಯು ಇನ್ನೂ ‘ಶಿಸ್ತು ಪಾಲನಾ ಸಮಿತಿ’ಯನ್ನು ಹೊಂದಿಲ್ಲ. ಸಾಮಾನ್ಯವಾಗಿ ಇವೆರಡೂ ಸಮಿತಿಗಳು ಸಂಸದರ ನಡವಳಿಕೆಯನ್ನು ಗಮನಿಸುತ್ತವೆಯಾದರೂ, ಅವುಗಳ ಕಾರ್ಯವ್ಯಾಪ್ತಿ ಭಿನ್ನವಾಗಿರುತ್ತದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಲ್ಲಿಸಿರುವ ಪ್ರಸ್ತಾವನೆಯನ್ನು ಶಿಸ್ತು ಪಾಲನಾ ಸಮಿತಿಯು ಕೈಗೆತ್ತಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಅವರ ‘ಎಲ್ಲಾ ಅಶಿಸ್ತಿನ ನಡವಳಿಕೆಗಳ ಬಗ್ಗೆ ತನಿಖೆ’ ನಡೆಸಿ, ಅವರನ್ನು ಲೋಕಸಭೆಯಿಂದ ತಕ್ಷಣವೇ ಉಚ್ಚಾಟಿಸಬೇಕು ಎಂದು ಕೋರಿ ದುಬೆ ಈ ಪ್ರಸ್ತಾವನೆಯನ್ನು ಮಂಡಿಸಿದ್ದರು.

ಶಾಸಕಾಂಗದ ಪ್ರಕ್ರಿಯೆಯಲ್ಲಿ ‘ಗಂಭೀರ ಸ್ವರೂಪದ ಪ್ರಸ್ತಾವನೆ’ (Substantive Motion) ಎಂಬುವುದು ಒಂದು ಪ್ರಮುಖ ಸಾಧನವಾಗಿದ್ದು, ಇದನ್ನು ಅಂಗೀಕರಿಸಿದರೆ ಆ ವಿಷಯದ ಮೇಲೆ ಕಡ್ಡಾಯವಾಗಿ ಚರ್ಚೆ ಮತ್ತು ತೀರ್ಮಾನ ಕೈಗೊಳ್ಳಲು ಅವಕಾಶವಿರುತ್ತದೆ. ಮಾರ್ಚ್ 9 ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಸ್ಪೀಕರ್ ಈ ಪ್ರಸ್ತಾವನೆಯನ್ನು ಕೈಗೆತ್ತಿಕೊಂಡರೆ, ಲೋಕಸಭೆಯು ನೇರವಾಗಿ ನಿಶಿಕಾಂತ್ ದುಬೆ ಅವರ ಪ್ರಸ್ತಾವನೆಯ ಬಗ್ಗೆ ಚರ್ಚೆ ನಡೆಸಲಿದೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...