Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ| ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

ಮಹಿಳೆಯ ಅಪಹರಣ ಪ್ರಕರಣ| ರೇವಣ್ಣಗೆ ಜಾಮೀನು ನೀಡಿರುವ ಆದೇಶದಲ್ಲಿ ದೋಷ ಇದ್ದಂತಿದೆ: ಹೈಕೋರ್ಟ್‌

- Advertisement -
- Advertisement -

ಮಹಿಳೆಯ ಅಪಹರಣ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಜಾಮೀನು ನೀಡಿರುವ ವಿಶೇಷ ನ್ಯಾಯಾಲಯದ ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿರುವುದಾಗಿ ಲೈವ್‌ ಲಾ ವರದಿ ಮಾಡಿದೆ.

ರೇವಣ್ಣ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 13 ರಂದು ಜಾಮೀನು ಮಂಜೂರು ಮಾಡಿದೆ. ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಆದೇಶದಲ್ಲಿ ದೋಷ ಇದ್ದಂತಿದೆ ಎಂದು ಮೌಖಿಕವಾಗಿ ಹೇಳಿರುವುದಾಗಿ ವರದಿ ತಿಳಿಸಿದೆ.

ಎಸ್‌ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರೊಫೆಸರ್ ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ.

ವಾದ ಮಂಡನೆಯ ವೇಳೆ ಪ್ರೊ. ರವಿವರ್ಮ ಕುಮಾರ್‌ ಅವರು “ಜಾಮೀನು ನೀಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ತಪ್ಪಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ವಿಚಾರಣಾಧೀನ ನ್ಯಾಯಾಲಯವು ಐಪಿಸಿ ಸೆಕ್ಷನ್‌ 364ಎ ಅರ್ಜಿಯಲ್ಲಿ ಪ್ರಮಾದ ಎಸಗಿದೆ” ಎಂದಿದ್ದಾರೆ.

ಆಗ ಪೀಠವು “ವಾದದಲ್ಲಿ ಬಲ ಇದೆ. ದಾಖಲೆಯನ್ನು ಪರಿಶೀಲಿಸಿದರೆ ದೋಷ ಇದ್ದಂತಿದೆ” ಎಂದಿದೆ. ಆಗ ಪ್ರೊ. ರವಿವರ್ಮ ಕುಮಾರ್‌ ಅವರು “ದೂರು ನೀಡುವುದರಿಂದ ಮಹಿಳೆಯನ್ನು ತಡೆಯಲು ಅಪಹರಿಸಲಾಗಿದೆ. ಸಾಕ್ಷಿಯನ್ನು ಅಪಹರಿಸಲಾಗಿದೆ. ಪ್ರಕರಣವನ್ನು ತುರ್ತಾಗಿ ಆಲಿಸಬೇಕು. ಈ ನಡೆಗೆ ಅನುಮತಿಸಿದರೆ ಯಾರೂ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗದು” ಎಂದು ಹೇಳಿದ್ದಾರೆ.

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿ ಮಾಡಿದ್ದು, ಎಸ್‌ಐಟಿ ಮತ್ತು ರೇವಣ್ಣ ಇಬ್ಬರ ಅರ್ಜಿ ವಿಚಾರಣೆಯನ್ನು ಜೂನ್ 3 ರಂದು ಮಧ್ಯಾಹ್ನಕ್ಕೆ ಮಂದೂಡಿದೆ.

ಪ್ರಕರಣದ ಹಿನ್ನೆಲೆ : ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ತನ್ನ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅಪಹರಣಕ್ಕೊಳಗಾದ ಮಹಿಳೆಯ ಮಗ ಈ ಕುರಿತು ಮೈಸೂರಿನ ಕೆ.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದಲ್ಲಿ ಬಂಧನ ಭೀತಿಯಿಂದ ರೇವಣ್ಣ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದರಿಂದ ಎಸ್‌ಐಟಿ ಅವರನ್ನು ಬಂಧಿಸಿತ್ತು. ಬಳಿಕ ನ್ಯಾಯಾಲಯ ಜಾಮೀನು ನೀಡಿದ್ದರಿಂದ ರೇವಣ್ಣ ಬಿಡುಗಡೆಗೊಂಡಿದ್ದಾರೆ.

ರೇವಣ್ಣ ಅವರ ಸೂಚನೆಯಂತೆ ಮಹಿಳೆಯನ್ನು ಅಪಹರಿಸಿದ ಆರೋಪ ಅವರ ಆಪ್ತ ಸತೀಶ್ ಬಾಬಣ್ಣ ಮೇಲಿದೆ. ಇವರನ್ನು ಪೊಲೀಸರು ಬಂಧಿಸಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಲ್ಲಿ ಅಪಹರಣಕ್ಕೊಳಗಾದ ಮಹಿಳೆಯೂ ಒಬ್ಬರು ಎನ್ನಲಾಗಿದೆ. ಮೈಸೂರಿನ ತೋಟದ ಮನೆಯೊಂದರಲ್ಲಿದ್ದ ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ಈಗಾಗಲೇ ರಕ್ಷಿಸಿದ್ದಾರೆ.

ಇದನ್ನೂ ಓದಿ : ಪ್ರಚೋದನಕಾರಿ ಪೋಸ್ಟ್ : ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...