Homeಮುಖಪುಟಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ನಾಳೆಯಿಂದ ಹೊಸ ಕಟ್ಟಡದಲ್ಲಿ ಕಾರ್ಯಕಲಾಪ..

- Advertisement -
- Advertisement -

ಇಂದಿನಿಂದ ಐದು ದಿನಗಳ ಕಾಲ ಸಂಸತ್ತಿನ ‘ಅಮೃತ್ ಕಾಲ’ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಕಾರ್ಯಸೂಚಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವದ ವಿಕಾಸದ ಚರ್ಚೆಗಳನ್ನು ಒಳಗೊಂಡಿದೆ. ವಿವಾದಾತ್ಮಕ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸೇರಿದಂತೆ ಎಂಟು ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ.

ಸಂಸತ್ತಿನ 75 ವರ್ಷಗಳ ಕುರಿತು ಸೋಮವಾರದ ಚರ್ಚೆಯನ್ನು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪಿಯೂಷ್ ಗೋಯಲ್ ಅವರು ಆರಂಭಿಸುವ ಸಾಧ್ಯತೆಯಿದೆ.

“ಭಾರತದ ಸಂಸತ್ತಿನ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಮತ್ತು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ” ಕಾರ್ಯಕ್ರಮಕ್ಕಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ, ಸೆಂಟ್ರಲ್ ಹಾಲ್ ನಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ಸಭೆಯು ನಡೆಯಲಿದೆ. ಅದರ ನಂತರ ಫೋಟೋ ಸೆಷನ್ ನಡೆಯಲಿದೆ.

ಅಧಿವೇಶನದಲ್ಲಿ ಎಂಟು ಮಸೂದೆಗಳನ್ನು ಮಂಡಿಸಲು ಕೇಂದ್ರವು ಯೋಜಿಸಿದೆ ಆದರೆ ಐದು ದಿನಗಳ ಅಧಿವೇಶನಕ್ಕಾಗಿ ಅಜೆಂಡಾದಲ್ಲಿ ಉಲ್ಲೇಖಿಸದ ವಿಷಯಗಳನ್ನು ಕೇಂದ್ರವು ಕೈಗೆತ್ತಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಸೋಮವಾರ ಸಂಸತ್ತಿನ 75 ವರ್ಷಗಳ ಪಯಣದ ಕುರಿತು ಚರ್ಚೆ ನಡೆಯಲಿದೆ.

ಶಾಸಕಾಂಗ ವ್ಯವಹಾರದಲ್ಲಿ ಉಲ್ಲೇಖಿಸಲಾದ ಮಸೂದೆಗಳಲ್ಲಿ ಒಂದು ಚುನಾವಣಾ ಆಯುಕ್ತರ ನೇಮಕಾತಿಗಾಗಿ ಆಯ್ಕೆ ಸಮಿತಿಯನ್ನು ರಚಿಸುವ ಗುರಿಯನ್ನು ಹೊಂದಿದೆ. ಆದರೆ, ಈ ಮಸೂದೆಯನ್ನು ಕಾರ್ಯಸೂಚಿಯಿಂದ ತೆಗೆದುಹಾಕಲಾಗಿದೆ ಎಂದು ಸೋಮವಾರ ಸುದ್ದಿ ವರದಿಗಳು ತಿಳಿಸಿವೆ.

ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನಿ ನಾಮನಿರ್ದೇಶನ ಮಾಡಿದ ಕೇಂದ್ರ ಸಂಪುಟ ಸಚಿವರನ್ನು ಒಳಗೊಂಡ ಸಮಿತಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ ಮಸೂದೆಗೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದವು.

ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ಹಿರಿಯ ನಾಗರಿಕರ ಕಲ್ಯಾಣ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದ ಮೂರು ಮಸೂದೆಯನ್ನು ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ ಎಂದು ಎಲ್ಲ ಸದಸ್ಯರಿಗೆ ತಿಳಿಸಲಾಯಿತು.

ಬಿಜು ಜನತಾ ದಳ ಮತ್ತು ಭಾರತ್ ರಾಷ್ಟ್ರ ಸಮಿತಿ ಸೇರಿದಂತೆ ವಿರೋಧ ಪಕ್ಷಗಳು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಂತಹ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಕೋಟಾವನ್ನು ಖಚಿತಪಡಿಸಿಕೊಳ್ಳಲು ಮಸೂದೆಯನ್ನು ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿವೆ. ಭಾನುವಾರ ನಡೆದ ಹೈದರಾಬಾದ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಈ ವಿಷಯದ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದೆ. ಆದರೆ, ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆಯೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿಲ್ಲ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸೆಂಟ್ರಲ್ ಹಾಲ್ ನಲ್ಲಿ ಮಂಗಳವಾರದ ಕಾರ್ಯಕ್ರಮದ ನಂತರ, ಸದನವನ್ನು ಹೊಸ ಸಂಸತ್ ಭವನಕ್ಕೆ ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...