HomeUncategorizedದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

ದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರ ಫೆಬ್ರವರಿಯಲ್ಲಿ ನಡೆದ ಕೋಮು ಹಿಂಸಾಚಾರ ಪ್ರಕರಣಗಳಲ್ಲಿ ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರು ರಾಜೀನಾಮೆ ನೀಡಿದ್ದು, ಈ ಕುರಿತ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಸಲ್ಲಿಸಿದ್ದಾರೆ.

ನಾನು 202ರ ದೆಹಲಿ ಗಲಭೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡಿದ್ದೆ. ನನ್ನ ಕರ್ತವ್ಯವನ್ನು 3 ವರ್ಷಗಳಲ್ಲಿ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕರ್ತವ್ಯ ನಿಭಾಯಿಸಿದ್ದೇನೆ ಎಂದು ಪ್ರಸಾದ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿರುವ ಬಗ್ಗೆ ಲೈವ್ ಲಾ ವರದಿ ಮಾಡಿದೆ. ಈಗ ನಾನು ಪ್ರಾಸಿಕ್ಯೂಟರ್ ಆಗಿ ಮುಂದುವರಿಯಲು ಸಾಧ್ಯವಾಗುವುದಿಲ್ಲ ಮತ್ತು ಆದ್ದರಿಂದ ತಕ್ಷಣವೇ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಕೂಡಲೇ ಅಂಗೀಕರಿಸಬೇಕು. ನನಗೆ ನೀಡಿದ ಅವಕಾಶಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಾರ್ ಮತ್ತು ಬೆಂಚ್ ಪ್ರಕಾರ, ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಪ್ರಸಾದ್ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕಾರ್ಯನಿರ್ವಹಿಸುತ್ತಾರೆ. ಶ್ರದ್ಧಾ ವಾಕರ್ ಪ್ರಕರಣಕ್ಕೆ ಅವರಿಗೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.

ದಿ ವೈರ್‌ ವರದಿ ಮಾಡಿದಂತೆ 2020ರ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಅನೇಕ ಪ್ರಕರಣಗಳಿವೆ. ಇದರಲ್ಲಿ ನ್ಯಾಯಾಧೀಶರು ಪಕ್ಷಪಾತ, ಅಸಮರ್ಪಕ ತನಿಖೆಗಾಗಿ ದೆಹಲಿ ಪೊಲೀಸರನ್ನು ಟೀಕಿಸಿದ್ದಾರೆ. ನ್ಯಾಯಾಲಯಗಳು, ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸುವಾಗ ದೆಹಲಿ ಪೊಲೀಸರಲ್ಲಿ ಸಾಕ್ಷಾಧಾರಗಳ ಕೊರತೆ, ಸಾಕ್ಷಿಗಳ ಸೃಷ್ಟಿ, ವಾಸ್ತವತೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿವೆ. ಕೆಲವು ಪ್ರಕರಣಗಳ ತನಿಖೆಯನ್ನು ಪೊಲೀಸರು ನಡೆಸಿದ ರೀತಿ ವಿಚಿತ್ರವಾಗಿದೆ ಎಂಬುದನ್ನು ಗಮನಿಸಿದೆ.

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 2020ರಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಕನಿಷ್ಠ 758 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 2020ರ ಫೆಬ್ರವರಿಯಲ್ಲಿ ನಡೆದ ದೆಹಲಿ ಹಿಂಸಾಚಾರದ ವೇಳೆ 53 ಜನರು ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸಾಚಾರವು ಫೆಬ್ರವರಿ 23 ರಿಂದ 27ರವರೆಗೆ ನಾಲ್ಕು ದಿನಗಳ ಕಾಲ ನಡೆದಿತ್ತು.

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ನೇರಹೊಣೆ ಎಂದು ಸತ್ಯಶೋಧನ ಸಮಿತಿಯ ವರದಿ ಹೇಳಿತ್ತು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸಿಸ್ಟ್) ಬಿಡುಗಡೆಗೊಳಿಸಿರುವ ಸತ್ಯಶೋಧನಾ ವರದಿಯು, 53 ಮಂದಿಯನ್ನು ಬಲಿ ಪಡೆದ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೊಣೆಗಾರರನ್ನಾಗಿಸಿದೆ. ಹಿಂಸೆ ಉಲ್ಬಣಗೊಳ್ಳಲು ಹಾಗೂ ಈ ಕುರಿತಾದ ಪೊಲೀಸ್ ತನಿಖೆ ಪೂರ್ವಾಗ್ರಹಪೀಡಿತವಾಗಲು ಕೂಡ ಶಾ ಅವರೇ ಕಾರಣ ಎಂದು ಈ ವರದಿ ಆರೋಪಿಸಿತ್ತು.

ಬಿಜೆಪಿ ನಾಯಕರುಗಳಾದ ಕಪಿಲ್ ಮಿಶ್ರಾ ಮತ್ತು ಅನುರಾಗ್ ಠಾಕೂರ್ ಅವರ ಪ್ರಚೋದನಾತ್ಮಕ ಭಾಷಣಗಳು ಹಾಗೂ ಫೆಬ್ರವರಿ 21ರ ಶಿವರಾತ್ರಿ ಮೆರವಣಿಗೆಗಳ ವೇಳೆಯ ಪ್ರಚೋದನಾತ್ಮಕ ಘೋಷಣೆಗಳು ಕೂಡ ದೆಹಲಿ ಹಿಂಸೆಗೆ ಕಾರಣವಾಗಿತ್ತು ಎಂದು ಸತ್ಯಶೋಧನಾ ವರದಿ ತಿಳಿಸಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...